Kalki 2898AD Movie Leaked: ಪ್ರಭಾಸ್ ಕಲ್ಕಿ 2898AD ಸಿನಿಮಾ ಲೀಕ್.. ಈ ಸೈಟ್ನಲ್ಲಿ ಸಂಪೂರ್ಣ ಚಿತ್ರ ಲಭ್ಯ!
Kalki 2898AD Movie Leaked: ಕಲ್ಕಿ ಚಿತ್ರ ತಂಡಕ್ಕೆ ಭಾರೀ ಆಘಾತ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಪ್ರಭಾಸ್ ಕಲ್ಕಿಯ ಪೂರ್ಣ ಎಚ್ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ.
Kalki 2898AD Movie HD Print Leaked Online: ಪ್ರಭಾಸ್ ನಟನೆಯ ಕಲ್ಕಿ ಸಿನಿಮಾ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಏಕಕಾಲಕ್ಕೆ 600 ಕೋಟಿ ಗಳಿಸಿ 1000 ಕೋಟಿಯತ್ತ ದಾಪುಗಾಳು ಇಡುತ್ತಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರವು ಭಾರತದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಮೊದಲ ಶೋನಿಂದಲೇ ಪಾಸಿಟಿವ್ ಟಾಕ್ ಪಡೆದ ಚಿತ್ರ, ಬಾಕ್ಸ್ ಆಫೀಸ್ ನಲ್ಲಿ ಕಲೆಕ್ಷನ್ ಸುರಿಮಳೆಯಾಗುತ್ತಿದೆ. ಸೋಮವಾರ ಮತ್ತು ಮಂಗಳವಾರ ಕೂಡ ಈ ಚಿತ್ರಕ್ಕೆ ಉತ್ತಮ ಗಳಿಕೆ ಸಿಗುತ್ತಿದೆ. ತೆಲುಗು ಪ್ರೇಕ್ಷಕರು ಮಾತ್ರವಲ್ಲದೆ, ಹಿಂದಿ, ತಮಿಳು ಪ್ರೇಕ್ಷಕರು ಕೂಡ ಈ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಸದ್ಯ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಂಚಲನ ಮೂಡಿಸುತ್ತಿದೆ.
ಇದನ್ನೂ ಓದಿ: Sai Pallavi: 10 ವರ್ಷದ ಲವ್! ಬ್ಲಶ್ ಆಗುತ್ತಲೇ ಪ್ರೀತಿಯ ಗುಟ್ಟು ಬಿಟ್ಟುಕೊಟ್ಟ ನಟಿ ಸಾಯಿ ಪಲ್ಲವಿ
ಇಂತಹ ಸಮಯದಲ್ಲಿ ಈ ಚಿತ್ರತಂಡಕ್ಕೆ ದೊಡ್ಡ ಶಾಕ್ ಸಿಕ್ಕಿದೆ. ರಿಲೀಸ್ ಆದ ಕೆಲವೇ ದಿನಗಳಲ್ಲಿ ಈ ಸಿನಿಮಾದ ಎಚ್ ಡಿ ಪ್ರಿಂಟ್ ಆನ್ ಲೈನ್ ನಲ್ಲಿ ಲೀಕ್ ಆಗಿದೆ. ಈ ಸಿನಿಮಾ ಸುಮಾರು 3 ಗಂಟೆಗಳ ರನ್‌ಟೈಮ್‌ನೊಂದಿಗೆ ಬಂದಿದ್ದು, ಇಡೀ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಹಾಕಲಾಗಿದೆ. ಮತ್ತೊಂದು ಅಚ್ಚರಿಯ ವಿಷಯವೆಂದರೆ ಈ ಚಿತ್ರ ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಆನ್‌ಲೈನ್‌ನಲ್ಲಿ ಲಭ್ಯವಿದೆ.
ಮುಂಬರುವ ಯುಗದೊಂದಿಗೆ ಮಹಾಭಾರತವನ್ನು ಸಂಪರ್ಕಿಸುವ, ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರವು ಪ್ರೇಕ್ಷಕರಿಂದ ಮಾತ್ರವಲ್ಲದೆ ವಿಮರ್ಶಕರಿಂದಲೂ ಪ್ರಶಂಸೆ ಗಳಿಸಿದೆ. ಅತ್ಯಂತ ಕಡಿಮೆ ಬಜೆಟ್ ನಲ್ಲಿ ಅದ್ಧೂರಿ ಔಟ್ ಪುಟ್ ನೀಡಿರುವ ನಿರ್ದೇಶಕರನ್ನು ಎಲ್ಲರೂ ಹೊಗಳುತ್ತಿದ್ದಾರೆ.ಇದೀಗ ಈ ಕಲ್ಕಿ ಸಿನಿಮಾಗೆ ಪೈರಸಿ ಕಾಟ ಶುರುವಾಗಿದೆ. ಇದು ಕಲೆಕ್ಷನ್ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ರಾಕ್ಷಸನ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಪ್ರಜ್ವಲ್ ಸಜ್ಜು !
ಪ್ರಭಾಸ್ ಅಭಿನಯದ ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್, ದುಲ್ಕರ್ ಸಲ್ಮಾನ್, ವಿಜಯ್ ದೇವರಕೊಂಡ ಮತ್ತು ಕಮಲ್ ಹಾಸನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಾಗ್ ಅಶ್ವಿನ್ ಜೊತೆ ಮಹಾನಟಿ ಸಿನಿಮಾ ಮಾಡಿದ್ದ ಕೀರ್ತಿ ಸುರೇಶ್ ಈ ಸಿನಿಮಾದಲ್ಲಿ ಬುಜ್ಜಿ ಪಾತ್ರಕ್ಕೆ ಧ್ವನಿ ನೀಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.