Salaar Teaser: ಪ್ರಭಾಸ್ ಫ್ಯಾನ್ಸ್‌ಗೆ ರೋಚಕ ಅಪ್ಡೇಟ್.. ಸಲಾರ್ ಟೀಸರ್ ಡೇಟ್‌ ಅನೌನ್ಸ್‌.!

Salaar teaser release date announced : ಸಲಾರ್ ಚಿತ್ರದ ನಿರ್ಮಾಪಕರು ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಟೀಸರ್ ಬಿಡುಗಡೆ ಮಾಡುವ ದಿನಾಂಕವನ್ನು ಘೋಷಿಸಿದ್ದಾರೆ.

Written by - Chetana Devarmani | Last Updated : Jul 3, 2023, 09:51 PM IST
  • ಪ್ರಭಾಸ್ ಫ್ಯಾನ್ಸ್‌ಗೆ ರೋಚಕ ಅಪ್ಡೇಟ್
  • ಟೀಸರ್ ಬಿಡುಗಡೆ ದಿನಾಂಕ ಅನೌನ್ಸ್‌
  • ಪೋಸ್ಟರ್‌ನಲ್ಲಿ ಪ್ರಭಾಸ್‌ ಲುಕ್‌ ಕಂಡು ಥ್ರಿಲ್‌ ಆದ ಫ್ಯಾನ್ಸ್‌
Salaar Teaser: ಪ್ರಭಾಸ್ ಫ್ಯಾನ್ಸ್‌ಗೆ ರೋಚಕ ಅಪ್ಡೇಟ್.. ಸಲಾರ್ ಟೀಸರ್ ಡೇಟ್‌ ಅನೌನ್ಸ್‌.!  title=

Salaar Movie Teaser: ಆದಿಪುರುಷ ಫ್ಲಾಪ್‌ ಆದ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿಮಾನಿಗಳು ಸಲಾರ್ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ಸೆಪ್ಟೆಂಬರ್ 28 ರಂದು ಪ್ರೇಕ್ಷಕರ ಮುಂದೆ ತರುವುದಾಗಿ ತಯಾರಕರು ಈಗಾಗಲೇ ಘೋಷಿಸಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡುತ್ತಿದ್ದು, ಶ್ರುತಿ ಹಾಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಜಗಪತಿ ಬಾಬು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮಲಯಾಳಂ ಸ್ಟಾರ್ ಹೀರೋ ಪೃಥ್ವಿರಾಜ್ ಸುಕುಮಾರನ್ ವಿಲನ್ ಆಗಿ ನಟಿಸುತ್ತಿದ್ದು, ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಇತ್ತೀಚೆಗೆ ನಿರ್ಮಾಪಕರು ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಟೀಸರ್ ದಿನಾಂಕ ಘೋಷಣೆ ಮಾಡಿದ್ದಾರೆ. ಸಲಾರ್ ಚಿತ್ರದ ಟೀಸರ್ ಇದೇ ಜುಲೈ 6 ರಂದು ಬೆಳಗ್ಗೆ 5.12ಕ್ಕೆ ಬಿಡುಗಡೆಯಾಗಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಇದಕ್ಕೆ ಸಂಬಂಧಿಸಿದ ಪೋಸ್ಟರ್ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ CBI ಫೇಸ್‌ಬುಕ್-ಗೂಗಲ್‌ ಸಹಾಯ ಕೇಳಿದ್ದು ಏಕೆ?

ಈ ಪೋಸ್ಟ್‌ #SalaarTeaser ಎಂಬ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ. ಪೋಸ್ಟರ್‌ನಿಂದ ಅಭಿಮಾನಿಗಳ ನಿರೀಕ್ಷೆಗಳು ಮುಂದಿನ ಹಂತಕ್ಕೆ ತಲುಪಿವೆ. ಪೋಸ್ಟರ್‌ನಲ್ಲಿ ಪ್ರಭಾಸ್ ಅವರ ಲುಕ್ ಅನ್ನು ಹಿಂದಿನಿಂದ ತೋರಿಸಲಾಗಿದೆ. ನಾಯಕ ತನ್ನ ಕೈಯಲ್ಲಿ ಕೊಡಲಿ ಹಿಡಿದು ಮಾಸ್‌ ಲುಕ್‌ನಲ್ಲಿ ಮಿಂಚಿದ್ದಾರೆ. ಪೋಸ್ಟರ್ ಹೈ ರೇಂಜ್ ನಲ್ಲಿದೆ. ಸಿನಿಮಾ ಖಂಡಿತಾ ಬ್ಲಾಕ್ ಬಸ್ಟರ್ ಆಗುತ್ತೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ.

 

 

 

ಇದು ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಪ್ರಭಾಸ್ ಅಭಿಮಾನಿಗಳು ಪ್ರಶಾಂತ್ ನೀಲ್ ಮೇಲೆ ಅಪಾರ ನಂಬಿಕೆ ಇಟ್ಟಿದ್ದಾರೆ. ಆದಿಪುರುಷನ ಮೇಲೆ ದೊಡ್ಡ ನಿರೀಕ್ಷೆಯಿತ್ತು. ಆದರೆ ಅದು ತೀರಾ ನಿರಾಸೆ ಮೂಡಿಸಿತು. ಸಲಾರ್ ನಂತರ ಪ್ರಾಜೆಕ್ಟ್ ಕೆ ಸಿನಿಮಾ ಬರಲಿದೆ. ಅದೇ ರೀತಿ ಮಾರುತಿ ನಿರ್ದೇಶನದಲ್ಲಿ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಕೂಡ ಸದ್ದಿಲ್ಲದೆ ನಡೆಯುತ್ತಿದೆ. ಇನ್ನು ಮುಂದೆ ವರ್ಷಕ್ಕೆ ಎರಡು ಚಿತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ ಪ್ರಭಾಸ್.   

ಇದನ್ನೂ ಓದಿ: "ಸುದೀಪ್‌ ಸಿನಿಮಾ ಮಾಡ್ತಿನಿ ಅಂತ ಹಣ ಪಡೆದು, ಈಗ ಕೈಗೆ ಸಿಕ್ತಿಲ್ಲ" : ನಿರ್ಮಾಪಕ ಕುಮಾರ್

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
 

 

Trending News