ಬೆಂಗಳೂರು: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮತ್ತು ಅದಿತಿ ಪ್ರಭುದೇವ ನಟಿಸಿರುವ "ಮಾಫಿಯಾ" ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಕ್ತಾಯವಾಗಿದೆ. ಬೆಂಗಳೂರು ಕುಮಾರ್ ಫಿಲ್ಮ್ಸ್ ಲಾಂಛನದಡಿ ಕುಮಾರ್ ಬಿ ನಿರ್ಮಿಸಿರುವ ಈ ಚಿತ್ರವನ್ನು ಲೋಹಿತ್ ಹೆಚ್ ನಿರ್ದೇಶಿಸಿದ್ದಾರೆ. ಅಕ್ಟೋಬರ್‍ನಲ್ಲಿ ಟೀಸರ್ ಬರಲಿದ್ದು, ನವೆಂಬರ್ ಅಂತ್ಯದ ವೇಳೆಗೆ ಸಿನಿಮಾ ತೆರೆಗೆ ಬರಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ತೇಜಸ್ವಿನಿ : ಬೇಬಿ ಬಂಪ್ಸ್ ಫೋಟೋಸ್‌ ಇಲ್ಲಿವೆ


ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್‍ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.


ಬಿಗ್ ಬಾಸ್‌ ಧ್ವನಿಯ ಹಿಂದಿರುವ ಆ ವ್ಯಕ್ತಿ ಯಾರು ಗೊತ್ತಾ?


ಈ ಚಿತ್ರದಲ್ಲಿ 4 ಹಾಡುಗಳಿದ್ದು, ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್.ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ  ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.