ಸೆನ್ಸಾರ್ ಪಾಸ್‌ ಆದ ʼಮಾಫಿಯಾʼ : ಪ್ರಜ್ವಲ್-ಅದಿತಿ‌ ಅಭಿನಯದ ಚಿತ್ರ ಸದ್ಯದಲ್ಲೇ ತೆರೆಗೆ 

Prajwal devaraj Mafia movie : "ಮಾಫಿಯಾ" ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸುವುದಾಗಿ ನಿರ್ಮಾಪಕ  ಕುಮಾರ್ ತಿಳಿಸಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ಅಥವಾ ಮ್ಯೂಟ್ ಹೇಳದೆ ಯು\ಎ ಪ್ರಮಾಣಪತ್ರ ನೀಡಿದೆ. 

Written by - Krishna N K | Last Updated : Aug 23, 2024, 05:27 PM IST
    • "ಮಾಫಿಯಾ" ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಣೆ
    • ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ "ಮಾಫಿಯಾ" ಚಿತ್ರ
    • ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ ನಟಿಸಿರುವ ಚಿತ್ರ ಮಾಫಿಯಾ
ಸೆನ್ಸಾರ್ ಪಾಸ್‌ ಆದ ʼಮಾಫಿಯಾʼ : ಪ್ರಜ್ವಲ್-ಅದಿತಿ‌ ಅಭಿನಯದ ಚಿತ್ರ ಸದ್ಯದಲ್ಲೇ ತೆರೆಗೆ  title=

Mafia Kannada movie : ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ಬಹು ನಿರೀಕ್ಷಿತ "ಮಾಫಿಯಾ" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ಅಥವಾ ಮ್ಯೂಟ್ ಹೇಳದೆ ಯು\ಎ ಪ್ರಮಾಣಪತ್ರ ನೀಡಿದೆ. 

ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ "ಮಾಫಿಯಾ" ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸುವುದಾಗಿ ನಿರ್ಮಾಪಕ  ಕುಮಾರ್ ತಿಳಿಸಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಬಿಡುಗಡೆಗೆ ಪ್ರಜ್ವಲ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.  

ಇದನ್ನೂ ಓದಿ: ಚಿಕ್ಕಪ್ಪ ಡಿಸಿಎಂ, ದೊಡ್ಡಪ್ಪ ಸ್ಟಾರ್‌, ಅಪ್ಪ ನಿರ್ಮಾಪಕ..! ಕಾಫಿ ಶಾಪ್‌ನಲ್ಲಿ ಕೆಲಸ ಮಾಡುವ ಗತಿಯಾಕೆ ನಿಹಾರಿಕಾಗೆ..

ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ದೇವರಾಜ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಭಡೇರಿಯಾ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ  ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News