ಕೋಮಲ್ ಕುಮಾರ್ ʼಕಾಲಾಯ ನಮಃʼ ಚಿತ್ರದಲ್ಲಿ ನಟ ಪ್ರಕಾಶ್ ರೈ..!

ತಮ್ಮ ಅಮೋಘ ನಟನೆಯ ಮೂಲಕ ಜನಪ್ರಿಯರಾಗಿರುವ ನಟ ಕೋಮಲ್ ಕುಮಾರ್, ಐದು ವರ್ಷಗಳ ನಂತರ ನಾಯಕರಾಗಿ ನಟಿಸುತ್ತಿರುವ ಚಿತ್ರ ʼಕಾಲಾಯಾ ನಮಃʼ. ಇದೀಗ ಚಿತ್ರತಂಡದಿಂದ ಹೊಸ ಅಪ್ ಡೇಟ್ ಹೊರ ಬಿದ್ದಿದ್ದು, ಬಹುಭಾಷಾ ನಟ ಪ್ರಕಾಶ್‌ ರೈ ಕೋಮಲ್‌ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಖುಷಿ ವಿಚಾರವನ್ನು ಹಂಚಿಕೊಂಡಿದೆ.

Written by - Krishna N K | Last Updated : Jan 10, 2023, 09:14 PM IST
  • ನಟ ಕೋಮಲ್ ಕುಮಾರ್ ಕಾಲಾಯಾ ನಮಃʼ ಸಿನಿಮಾ ತಂಡದಿಂದ ಅಪ್ ಡೇಟ್ ಹೊರ ಬಿದ್ದಿದೆ.
  • ಬಹುಭಾಷಾ ನಟ ಪ್ರಕಾಶ್‌ ರೈ ಕೋಮಲ್‌ ಸಿನಿಮಾದಲ್ಲಿ ನಟಿಸಲಿದ್ದಾರೆ.
  • ಪ್ರಕಾಶ್ ರೈ ಅವರ ಅಭಿನಯದ ಸನ್ನಿವೇಶಗಳ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ.
ಕೋಮಲ್ ಕುಮಾರ್ ʼಕಾಲಾಯ ನಮಃʼ ಚಿತ್ರದಲ್ಲಿ ನಟ ಪ್ರಕಾಶ್ ರೈ..! title=

Kalaya namaha : ತಮ್ಮ ಅಮೋಘ ನಟನೆಯ ಮೂಲಕ ಜನಪ್ರಿಯರಾಗಿರುವ ನಟ ಕೋಮಲ್ ಕುಮಾರ್, ಐದು ವರ್ಷಗಳ ನಂತರ ನಾಯಕರಾಗಿ ನಟಿಸುತ್ತಿರುವ ಚಿತ್ರ ʼಕಾಲಾಯಾ ನಮಃʼ. ಇದೀಗ ಚಿತ್ರತಂಡದಿಂದ ಹೊಸ ಅಪ್ ಡೇಟ್ ಹೊರ ಬಿದ್ದಿದ್ದು, ಬಹುಭಾಷಾ ನಟ ಪ್ರಕಾಶ್‌ ರೈ ಕೋಮಲ್‌ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಖುಷಿ ವಿಚಾರವನ್ನು ಹಂಚಿಕೊಂಡಿದೆ.

ಪ್ರಸ್ತುತ ಕಾಲಾಯಾ ನಮಃ ಚಿತ್ರದ ಚಿತ್ರೀಕರಣ ಬಿರುಸಿನಿಂದ ನಡೆಯುತ್ತಿದೆ. ಈಗ ಮತ್ತೊಂದು ಖುಷಿಯ ವಿಚಾರವೆಂದರೆ, ತಮ್ಮ ನಟನೆಯ ಮೂಲಕ ಭಾರತದಾದ್ಯಂತ ಹೆಸರು ಮಾಡಿರುವ ಬಹುಭಾಷಾ ನಟ ಪ್ರಕಾಶ್ ರೈ " ಕಾಲಾಯಾ ನಮಃ" ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಪ್ರಕಾಶ್ ರೈ ಅವರ ಅಭಿನಯದ ಸನ್ನಿವೇಶಗಳ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಅನುಸೂಯ ಕೋಮಲ್ ಕುಮಾರ್ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಮತಿವಣನ್ ಆಕ್ಷನ್‌ ಕಟ್‌ ಹೇಳಿದ್ದಾರೆ. ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ. ತಿಲಕ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಇದನ್ನೂ ಓದಿ: ಬೆತ್ತಲಾಗಿ ಸ್ನಾನ ಮಾಡುತ್ತಿರುವ ವಿಡಿಯೋ ಹಂಚಿಕೊಂಡ ಗಾಯಕಿ..! ಫ್ಯಾನ್ಸ್‌ ಶಾಕ್‌

ಕೋಮಲ್ ಕುಮಾರ್,  ಆಸಿಯಾ ಫಿರ್ದೋಸ್, ಪ್ರಕಾಶ್ ರೈ, ಸುಚೀಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಹಾಸ್ಯ ಕಲಾವಿದನಾಗಿ ಜನಪ್ರಿಯರಾಗಿರುವ ನಟ ಕೋಮಲ್ ಕುಮಾರ್, ನಾಯಕನಾಗೂ ಸೈ ಎನಿಸಿಕೊಂಡವರು. ಕಳೆದ ಕೆಲವು ವರ್ಷಗಳಿಂದ ಕೋಮಲ್ ಕುಮಾರ್  ಚಿತ್ರರಂಗದಿಂದ ದೂರವಿದ್ದರು. ಈಗ "ಕಾಲಾಯ ನಮಃ" ಚಿತ್ರದ ಮೂಲಕ ಕೋಮಲ್ ಕುಮಾರ್ ಚಿತ್ರರಂಗಕ್ಕೆ ಮರಳಿ ಬರುತ್ತಿರುವುದು ಕೋಮಲ್‌ ಫ್ಯಾನ್ಸ್‌ಗೆ ಖುಷಿ ತಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News