Prakash Raj : ಕನ್ನಡ ಸಿನಿಮಾರಂಗವೀಗ ಬೇರೆಯದ್ದೇ ದಿಕ್ಕಿಗೆ ಹೊರಳಿದೆ. ಸೋಲು ಗೆಲುವಿನಾಚೆ ಲೆಕ್ಕಚಾರ ಹಾಕಿದರೂ ಹೊಸ ಹುರುಪು, ಹೊಸ ಹರಿವು, ಹೊಸ ಆಲೋಚನೆಗಳಿಂದ ಬೇರೆಯದ್ದೇ ಆಯಾಮ ಪಡೆದಿದೆ. ಅದರ ಮುಂದುವರೆದ ಭಾಗವಾಗಿ ಗೋಚರಿಸುತ್ತಿರುವ ಚಿತ್ರ ಫೋಟೋ..ಕಳೆದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿದಲ್ಲಿ ಪ್ರೇಕ್ಷಕರಿಂದ ಲೈಕ್ ಪಡೆದ ಫೋಟೋ ಸಿನಿಮಾ ಸದ್ಯದಲ್ಲೇ ತೆರೆಗೆ ಬರ್ತಿದೆ. ಕೋವಿಡ್ ಸಮಯದ ಕಥೆಗೀಗ ಜೊತೆಯಾಗಿದ್ದಾರೆ ಬಹುಭಾಷಾ ಕಲಾವಿದ ಪ್ರಕಾಶ್ ರಾಜ್ .


COMMERCIAL BREAK
SCROLL TO CONTINUE READING

ಫೋಟೋ ಸಿನಿಮಾವನ್ನು ನಿರ್ದಿಗಂತದ ಮೂಲಕ ಪ್ರಕಾಶ್ ರಾಜ್ ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಮೂಲಕ ಹೈದ್ರಾಬಾದ್ ಕರ್ನಾಟಕದ ಕಥೆಗೆ ನಿರ್ದಿಗಂತ ಜೊತೆಯಾಗಿ ನಿಂತಿದೆ. ರಾಯಚೂರು‌ ಮೂಲದ ಯುವ ಪ್ರತಿಭೆ ಉತ್ಸವ್ ಗೋನವಾರ ಚೊಚ್ಚಲ ಪ್ರಯತ್ನ ಫೋಟೋ. ಕಳೆದ ಏಳು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿರುವ ಅವರು ಈ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟು ಸ್ವಾತಂತ್ರ್ಯ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.


ಇದನ್ನೂ ಓದಿ: ಪ್ರೇಮಿಗಳ ಪಾತ್ರ ಮಾಡುತ್ತಲೇ ಲವ್‌ ಮ್ಯಾರೇಜ್‌ ಆದ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು 


ಲಾಕ್‌ಡೌನ್‌ ಸಮಯದಲ್ಲಿ ನಡೆದ ಕಥೆ ಸುತ್ತ ಫೋಟೋ ಸಿನಿಮಾ ಸಾಗುತ್ತದೆ. ಅಪ್ಪ‌-ಮಗನ ಬಾಂಧವ್ಯ, ಭಾವನಾತ್ಮಕ ಎಳೆ ಇಟ್ಟುಕೊಂಡು  ಹಲವು ವಿಷಯಗಳನ್ನು ಬಹಳ ನೈಜವಾಗಿ ಮನಸ್ಸಿಗೆ ನಾಟುವಂತೆ ಕಟ್ಟುಕೊಟ್ಟಿದ್ದಾರೆ ನಿರ್ದೇಶಕ ಉತ್ಸವ್. 


ಮಸಾರಿ ಟಾಕೀಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಫೋಟೋ ಸಿನಿಮಾದಲ್ಲಿ ಮಹಾದೇವ ಹಡಪದ್, ಸಂಧ್ಯಾ ಅರಕೆರೆ, ಜಹಾಂಗೀರ್, ಮತ್ತು ವೀರೇಶ್ ಗೊನ್ವಾರ್ ನಟಿಸಿದ್ದಾರೆ. ಚಿತ್ರಕ್ಕೆ ದಿನೇಶ್ ದಿವಾಕರನ್ ಅವರ ಛಾಯಾಗ್ರಹಣ ಮತ್ತು ರವಿ ಹಿರೇಮಠ್ ಅವರ ಶಬ್ದ ವಿನ್ಯಾಸ, ಶಿವರಾಜ್ ಮೆಹೂ ಸಂಕಲನದ ಶ್ರಮ ಚಿತ್ರಕ್ಕಿದೆ.


ಇದನ್ನೂ ಓದಿ: ಪ್ರಜ್ವಲ್ ದೇವರಾಜ್ ನಟನೆಯ 'ಕರಾವಳಿ' ಸಿನಿಮಾಗೆ ನಾಯಕಿ ಫಿಕ್ಸ್!! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.