ಮೇ 20ರಿಂದ ಕ್ರೇಜಿಸ್ಟಾರ್‌ ಪುತ್ರನ ಸಿನಿಮಾ "ಪ್ರಾರಂಭ"..!

ಮೂರು ವರ್ಷಗಳ ಹಿಂದೆ ಈ ಚಿತ್ರ "ಪ್ರಾರಂಭ"ವಾಯಿತು. ಎರಡು ವರ್ಷ ಕೋವಿಡ್‌ನಿಂದ ವಿಳಂಬವಾಯಿತು. ಇದೇ ಇಪ್ಪತ್ತರಂದು ಬಿಡುಗಡೆಗೆ ದಿನಾಂಕ ನಿಗದಿಯಾಯಿತು.‌ 

Written by - YASHODHA POOJARI | Last Updated : May 18, 2022, 03:13 PM IST
  • ಪ್ರಾರಂಭ" ಚಿತ್ರ‌ ಇದೇ ಇಪ್ಪತ್ತರಂದು ರಾಜ್ಯಾದ್ಯಂತ ಬಿಡುಗಡೆ
  • ಮೂರು ವರ್ಷಗಳ ಹಿಂದೆ ಆರಂಭವಾದ ಚಿತ್ರ
  • ಎರಡು ವರ್ಷ ಕೋವಿಡ್‌ನಿಂದ ವಿಳಂಬ
ಮೇ 20ರಿಂದ ಕ್ರೇಜಿಸ್ಟಾರ್‌ ಪುತ್ರನ ಸಿನಿಮಾ "ಪ್ರಾರಂಭ"..! title=
prarambha film release date

ಬೆಂಗಳೂರು : ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ಅಭಿನಯದ "ಪ್ರಾರಂಭ" ಚಿತ್ರ‌ ಇದೇ ಇಪ್ಪತ್ತರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 

ಮೂರು ವರ್ಷಗಳ ಹಿಂದೆ ಈ ಚಿತ್ರ "ಪ್ರಾರಂಭ"ವಾಯಿತು. ಎರಡು ವರ್ಷ ಕೋವಿಡ್‌ನಿಂದ ವಿಳಂಬವಾಯಿತು. ಇದೇ ಇಪ್ಪತ್ತರಂದು ಬಿಡುಗಡೆಗೆ ದಿನಾಂಕ ನಿಗದಿಯಾಯಿತು.‌ ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ ಮನು ಕಲ್ಯಾಡಿ.

ಇದನ್ನೂ ಓದಿ : Actress Chetana Raj Death: ಸೊಂಟ ದಪ್ಪವೆಂದು ಮನನೊಂದಿದ್ದ ಚೇತನಾ: ಫ್ಯಾಟ್‌ ಸರ್ಜರಿ ವೇಳೆ ಸಾವು

ಇದು ನನ್ನ ಅಭಿನಯದ ನಾಲ್ಕನೇ ಚಿತ್ರ. ಪ್ರೀತಿ ಕೈ ಕೊಟ್ಟರೆ ಕೆಲವರು ಆತ್ಮಹತ್ಯೆಗೆ ಶರಣಾಗುತ್ತಾರೆ. ಆದರೆ ಅದು ತಪ್ಪು. ನಮಗೂ ಅಪ್ಪ, ಅಮ್ಮ, ಅಕ್ಕ, ತಂಗಿ, ಅಣ್ಣ, ತಮ್ಮ ಹೀಗೆ ಕುಟುಂಬ ಇರುತ್ತದೆ ಎಂಬುದನ್ನು ಯೋಚಿಸಿ ಮುನ್ನಡೆಯಬೇಕು. ಇಂತಹ ಕಥೆ "ಪ್ರಾರಂಭ"ದಲ್ಲಿದೆ. ಇಡೀ ಚಿತ್ರತಂಡದ ಪರಿಶ್ರಮದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನೋಡಿ ಹರಸಿ ಎನ್ನುತ್ತಾರೆ ನಾಯಕ ಮನುರಂಜನ್ ರವಿಚಂದ್ರನ್.

ನನ್ನ ಪಾತ್ರ ಚೆನ್ನಾಗಿದೆ. ಬಿಡುಗಡೆಗೆ ಕಾತುರದಿಂದ ಕಾಯುತ್ತಿರುವುದಾಗಿ ನಾಯಕಿ ಕೀರ್ತಿ ಕಲ್ಕೇರಿ ಹೇಳಿದರು. ಇನ್ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ "ಪ್ರಾರಂಭ" ಚಿತ್ರವನ್ನು ಬಿಡುಗಡೆ ಮಾಡುವುದಾಗಿ ವಿತರಕ ವೆಂಕಟ್ ತಿಳಿಸಿದರು. 

ಇದನ್ನೂ ಓದಿ : ಖ್ಯಾತ ನಿರೂಪಕಿಗೆ ಸಂಕಷ್ಟ ತಂದ ʼಗಡ್ಡʼ: ಅಪಹಾಸ್ಯ ಮಾಡಿದಕ್ಕೆ ದಾಖಲಾಯ್ತು FIR!

ಸುಂದರ ಸ್ಥಳಗಳಲ್ಲಿ ಸಿನಿಮಾ ಚಿತ್ರೀಕರಿಸಿರುವುದಾಗಿ ಛಾಯಾಗ್ರಾಹಕ ಸುರೇಶ್ ಬಾಬು ಹೇಳಿದರು. ಚಿತ್ರ ಇದೇ ಇಪ್ಪತ್ತರಂದು ಬಿಡುಗಡೆಯಾಗುತ್ತಿದೆ. ನೋಡಿ ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಜಗದೀಶ್ ಕಲ್ಯಾಡಿ. ಚಿತ್ರತಂಡದ ಅನೇಕ  ಸದಸ್ಯರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದು, "ಪ್ರಾರಂಭ"ದ ಬಗ್ಗೆ ಮಾತನಾಡಿದರು. 
 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News