ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಟ್ಟ ಪ್ರವೀಣ್ ತೇಜ್: ‘ಜಿಗರ್’ ಟೀಸರ್ ಔಟ್!

Jigar Official Teaser: ಸ್ಯಾಂಡಲ್‌ವುಡ್ ನಟ ಪ್ರವೀಣ್ ತೇಜ್ ‘ಜಿಗರ್’ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಪ್ರವೀಣ್ ಈ ಬಾರಿ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ.

Written by - YASHODHA POOJARI | Edited by - Puttaraj K Alur | Last Updated : Oct 30, 2023, 03:36 PM IST
  • ಪ್ರವೀಣ್ ತೇಜ್ ನಟನೆಯ ಹೊಸ ಸಿನಿಮಾ ‘ಜಿಗರ್’ ಟೀಸರ್ ರಿಲೀಸ್
  • ಸಮುದ್ರ ತಟದ ರಕ್ತದ ಕಥೆ 'ಜಿಗರ್': ಮಾಸ್ ಅವತಾರದಲ್ಲಿ ಪ್ರವೀಣ್ ತೇಜ್
  • ಕರಾವಳಿ ಸುತ್ತ ಮುತ್ತ ಚಿತ್ರೀಕರಣಗೊಂಡಿರುವ ‘ಜಿಗರ್’ ಔಟ್ ಅಂಡ್ ಔಟ್ ಆಕ್ಷನ್ ಸಿನಿಮಾ
ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಟ್ಟ ಪ್ರವೀಣ್ ತೇಜ್: ‘ಜಿಗರ್’ ಟೀಸರ್ ಔಟ್! title=
‘ಜಿಗರ್’ ಟೀಸರ್ ರಿಲೀಸ್

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಪ್ರವೀಣ್ ತೇಜ್ ‘ಜಿಗರ್’ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಪ್ರವೀಣ್ ಈ ಬಾರಿ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ ಮೊದಲ ಬಾರಿಗೆ ಪ್ರವೀಣ್ ಆಕ್ಷನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈಗಾಗಲೇ ಸಿನಿಮಾದ ಮೊದಲ ಹಾಡನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ಟೀಸರ್ ಮೂಲಕ ಹೊಸ ಅಪ್‍ಡೇಟ್‍ ನೀಡಿದೆ.

ಕರಾವಳಿ ಸುತ್ತ ಮುತ್ತ ಚಿತ್ರೀಕರಣಗೊಂಡಿರುವ ‘ಜಿಗರ್’ ಔಟ್ ಅಂಡ್ ಔಟ್ ಆಕ್ಷನ್ ಸಿನಿಮಾ ಆಗಿದೆ. ರೊಮ್ಯಾಂಟಿಕ್ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಪ್ರವೀಣ್ ‘ಜಿಗರ್’ನಲ್ಲಿ ಚಾಕು ಚುಚ್ಚಿ ರಕ್ತ ಹರಿಸಿದ್ದನ್ನು ನೋಡಿ ಪ್ರೇಕ್ಷಕರು ಅಚ್ಚರಿ ಪಟ್ಟಿದ್ದಾರೆ. ಅಂದಹಾಗೆ ಚಿತ್ರಕ್ಕೆ ಸೂರಿ ಕುಂದರ್ ಆಕ್ಷನ್ ಕಟ್ ಹೇಳಿದ್ದಾರೆ. ನಿರ್ದೇಶಕ ಸೂರಿ ಅವರಿಗೆ ಇದು ಮೊದಲ ಸಿನಿಮಾ.

ಇದನ್ನೂ ಓದಿ: "ಉಸಿರೇ ಉಸಿರೇ" ಚಿತ್ರದ ಟ್ರೇಲರ್ ಅನಾವರಣಗೊಳಿಸಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್

ಈಗಾಗಲೇ ಸ್ಯಾಂಡಲ್‌ವುಡ್‌ನಲ್ಲಿ ಅನೇಕ ಸಿನಿಮಾಗಳಿಗೆ ಸಹಾಯಕ  ನಿರ್ದೇಶಕರಾಗಿ ಕೆಲಸ ಮಾಡಿದ್ದ ನಿರ್ದೇಶಕ ಸೂರಿ ‘ಜಿಗರ್’ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ತನ್ನ ಮೊದಲ ಸಿನಿಮಾದ ಮೇಲೆ ನಿರ್ದೇಶಕ ಸೂರಿ ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯುಕೆ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಿದ್ದು, ಪೂಜಾ ವಸಂತ್ ಚಿತ್ರಕ್ಕೆ  ಬಂಡವಾಳ ಹೂಡಿದ್ದಾರೆ.

ಇನ್ನೂ ಈ ಸಿನಿಮಾದಲ್ಲಿ ಪ್ರವೀಣ್‌ಗೆ ನಾಯಕಿಯಾಗಿ ವಿಜಯ್ ಶ್ರೀ ಕಾಣಿಸಿಕೊಂಡಿದ್ದಾರೆ. ವಿಜಯ್ ಶ್ರೀ ಅವರಿಗೂ ಇದು ಮೊದಲ ಸಿನಿಮಾವಾಗಿದೆ.  ಚಿತ್ರಕ್ಕೆ ರಿತ್ವಿಕ್ ಮುರಳಿಧರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಮಲ್ಫೆ, ಮರುವಂತೆ, ಮಂಗಳೂರು ಸುತ್ತಮುತ್ತ ‘ಜಿಗರ್’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಸಂಪೂರ್ಣ ಸಿನಿಮಾ ಕೂಡ ಇದೇ ಬ್ಯಾಕ್‌ಡ್ರಾಪ್‌ನಲ್ಲಿ ಇರಲಿದೆ.

ಇದನ್ನೂ ಓದಿ: ಮೃಣಾಲ್ ಠಾಕೂರ್ ಮದುವೆ..! ಸೀತಾ ಮಹಾಲಕ್ಷ್ಮೀಯ್ನನು ವರಿಸುವ ವರ ಯಾರು ಗೊತ್ತಾ?

ಪ್ರವೀಣ್ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಅನ್ನೋ ಕುತೂಹಲವಿದೆ. ಕೊನೆಯದಾಗಿ ಪ್ರವೀಣ್ ‘ಹೊಂದಿಸಿ ಬರೆಯಿರಿ’ ಸಿನಿಮಾ ಮೂಲಕ ಸಿನಿಮಾ ಪ್ರೇಕ್ಷಕರ ಮುಂದೆ ಬಂದಿದ್ದರು. ಸದ್ಯ ಟೀಸರ್ ಮೂಲಕ ಅಭಿಮಾನಿಗಳ ಗಮನ ಸೆಳೆದಿರುವ ‘ಜಿಗರ್’ ಸಿನಿಮಾ ಹೇಗಿರಲಿದೆ ಅನ್ನೋ ಕುತೂಹಲ ಹೆಚ್ಚಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News