ಬೆಂಗಳೂರು: ದಕ್ಷಿಣ ಭಾರತೀಯ ಸಿನಿಮಾದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಹಿರಿಯ ನಟಿ ಲೀಲಾವತಿ ಅವರು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಅಸುನೀಗಿದ್ದಾರೆ.ಸುಮಾರು 200ಕ್ಕೂ ಸಿನಿಮಾಗಳು, ನಾಟಕಗಳಲ್ಲಿ ನಟಿಸಿದ್ದ ಲೀಲಾವತಿ ಅವರಿಗೆ 85 ವರ್ಷ ವಯಸ್ಸಾಗಿತ್ತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Leelavathi: ಹಿರಿಯ ನಟಿ ಲೀಲಾವತಿಯವರಿಗೆ ಸಂದ ಪ್ರಮುಖ ಪ್ರಶಸ್ತಿಗಳು


ಈಗ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ 'ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ." ಎಂದು ಅವರು ಅವರು ಟ್ವೀಟ್ ಮಾಡಿದ್ದಾರೆ.


Leelavathi : ಚಂದನವನದ ನಗುಮೊಗದ ʼಲೀಲಮ್ಮʼನವರ ಅಪರೂಪದ ಫೋಟೋಸ್‌ ಇಲ್ಲಿವೆ..!


ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಹಾಸಿಗೆ ಹಿಡಿದ್ದರು, ಈಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ