Megastar Chiranjeevi : ಮೆಗಾಸ್ಟಾರ್‌ ಚಿರಂಜೀವಿ ಅವರನ್ನು ಅಭಿನಂದಿಸಿದ ಪ್ರಧಾನಿ ಮೋದಿ

Megastar Chiranjeevi : ಮೆಗಾ‌ಸ್ಟಾರ್ ಚಿರಂಜೀವಿ ಅವರಿಗೆ ಗೋವಾದಲ್ಲಿ ನಡೆಯುತ್ತಿರುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) 53ನೇ ಆವೃತ್ತಿಯಲ್ಲಿ ʻಇಂಡಿಯನ್‌ ಫಿಲ್ಮ್‌ ಪರ್ಸನಾಲಿಟಿ ಆಫ್‌ ದಿ ಇಯರ್‌ʼ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಸೋಮವಾರ, ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಚಿರಂಜೀವಿ ಅವರನ್ನು ಅಭಿನಂದಿಸಿದರು. 

Written by - Chetana Devarmani | Last Updated : Nov 21, 2022, 08:36 PM IST
  • ಗೋವಾದಲ್ಲಿ ನಡೆಯುತ್ತಿರುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
  • ಮೆಗಾಸ್ಟಾರ್‌ ಚಿರಂಜೀವಿಗೆ ಒಲಿದ ʻಇಂಡಿಯನ್‌ ಫಿಲ್ಮ್‌ ಪರ್ಸನಾಲಿಟಿ ಆಫ್‌ ದಿ ಇಯರ್‌ʼ ಪ್ರಶಸ್ತಿ
  • ಮೆಗಾಸ್ಟಾರ್‌ ಚಿರಂಜೀವಿ ಅವರನ್ನು ಅಭಿನಂದಿಸಿದ ಪ್ರಧಾನಿ ಮೋದಿ
Megastar Chiranjeevi : ಮೆಗಾಸ್ಟಾರ್‌ ಚಿರಂಜೀವಿ ಅವರನ್ನು ಅಭಿನಂದಿಸಿದ ಪ್ರಧಾನಿ ಮೋದಿ  title=
ಮೆಗಾಸ್ಟಾರ್‌ ಚಿರಂಜೀವಿ

Megastar Chiranjeevi : ಮೆಗಾ‌ಸ್ಟಾರ್ ಚಿರಂಜೀವಿ ಅವರಿಗೆ ಗೋವಾದಲ್ಲಿ ನಡೆಯುತ್ತಿರುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) 53ನೇ ಆವೃತ್ತಿಯಲ್ಲಿ ʻಇಂಡಿಯನ್‌ ಫಿಲ್ಮ್‌ ಪರ್ಸನಾಲಿಟಿ ಆಫ್‌ ದಿ ಇಯರ್‌ʼ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಸೋಮವಾರ, ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಚಿರಂಜೀವಿ ಅವರನ್ನು ಅಭಿನಂದಿಸಿದರು. ಈ ಬಗ್ಗೆ ಪ್ರಧಾನಿ ಮೋದಿಯವರು, "ಗೋವಾದಲ್ಲಿ ನಡೆಯುತ್ತಿರುವ ಭಾರತದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ʻಇಂಡಿಯನ್‌ ಫಿಲ್ಮ್‌ ಪರ್ಸನಾಲಿಟಿ ಆಫ್‌ ದಿ ಇಯರ್‌ʼ  ಪ್ರಶಸ್ತಿಗೆ ಆಯ್ಕೆಯಾದ ಸಂದರ್ಭದಲ್ಲಿ ಅವರಿಗೆ ಅಭಿನಂದನೆಗಳು" ಎಂದು  ಟ್ವೀಟ್ ಮಾಡಿದ್ದಾರೆ. 

ಇದನ್ನೂ ಓದಿ : Rasna Founder: ರಸ್ನಾ ಸಂಸ್ಥಾಪಕ ಅರೀಜ್ ಫಿರೋಜ್‌ಶಾ ಖಂಬಾಟ್ ವಿಧಿವಶ

ಗೋವಾ ಯೂನಿವರ್ಸಿಟಿಯ ಒಳಾಂಗಣ ಕ್ರೀಡಾಂಗಣದಲ್ಲಿ ಸಂಜೆ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರಂಭದಲ್ಲಿ ಸಚಿವ ಅನುರಾಗ್‌ ಠಾಕೂರ್‌ ಮೆಗಾಸ್ಟಾರ್‌ ಚಿರಂಜೀವಿ ಅವರಿಗೆ ಈ ಪ್ರಶಸ್ತಿಯನ್ನು ಘೋಷಿಸಿದರು.  

 

 

ಅನುರಾಗ್ ಠಾಕೂರ್ ಕೂಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಚಿರಂಜೀವಿಯವರನ್ನು ಅಭಿನಂದಿಸಿದ್ದಾರೆ. ʻಇಂಡಿಯನ್‌ ಫಿಲ್ಮ್‌ ಪರ್ಸನಾಲಿಟಿ ಆಫ್‌ ದಿ ಇಯರ್‌ʼ  ಚಿರಂಜೀವಿ ಅವರು ಸುಮಾರು ನಾಲ್ಕು ದಶಕಗಳ ಕಾಲ ಸುಪ್ರಸಿದ್ಧ ವೃತ್ತಿಜೀವನವನ್ನು ಹೊಂದಿದ್ದಾರೆ. 150 ಕ್ಕೂ ಹೆಚ್ಚು ಚಲನಚಿತ್ರಗಳನ್ನು ಮಾಡಿದ್ದಾರೆ. ಅವರು ತೆಲುಗು ಚಿತ್ರರಂಗದಲ್ಲಿ ಅಗಾಧವಾಗಿ ಜನಪ್ರಿಯರಾಗಿದ್ದಾರೆ. ಅಭಿನಂದನೆಗಳು'' ಎಂದು ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.

ನಾಲ್ಕು ದಶಕಗಳ ಕಾಲದ ವೃತ್ತಿಜೀವನದಲ್ಲಿ, 66 ವರ್ಷದ ಚಿರಂಜೀವಿ ಅವರು 10 ಫಿಲ್ಮ್‌ಫೇರ್ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಪಡೆದಿದ್ದಾರೆ. ಅವರು ಇತ್ತೀಚೆಗೆ ಸಲ್ಮಾನ್ ಖಾನ್ ಅಭಿನಯದ ʻಗಾಡ್ ಫಾದರ್ʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ : Kantara New Record : ಕನ್ನಡ ಗಲ್ಲಾಪೆಟ್ಟಿಗೆಯಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ 'ಕಾಂತಾರ'!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News