ತಾಯಿ ಕಳೆದುಕೊಂಡಿರುವ ನೋವಲ್ಲಿರುವ ಕಿಚ್ಚನಿಗೆ ಬಂತು ಪ್ರಧಾನಿ‌ ಮೋದಿಯಿಂದ ಪತ್ರ! ಆ ಪತ್ರದಲ್ಲಿದ್ದಿದ್ದೇನು?

Prime Minister Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಂತಾಪ ಸೂಚಿಸಿದ್ದು ಪತ್ರ ಬರೆದಿದ್ದಾರೆ. ಈ ಪತ್ರವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಾಕಿಕೊಂಡಿರುವ ಕಿಚ್ಚ, "ನಿಮ್ಮ ಸಾಂತ್ವಾನವು ನನ್ನ ಹೃದಯ ತಟ್ಟಿದೆ" ಎಂದು ಬರೆದುಕೊಂಡಿದ್ದಾರೆ.  

Written by - Bhavishya Shetty | Last Updated : Oct 28, 2024, 05:56 PM IST
    • ಕಿಚ್ಚ ಸುದೀಪ್​ ಅವರ ತಾಯಿ ಸರೋಜಾ ಸಂಜೀವ್ ಅವರು ಅಕ್ಟೋಬರ್​ 20ರಂದು ನಿಧನರಾಗಿದ್ದಾರೆ
    • ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಂತಾಪ ಸೂಚಿಸಿದ್ದು ಪತ್ರ ಬರೆದಿದ್ದಾರೆ.
    • ಸರೋಜಾ ಅವರ ಅಗಲಿಕೆ ಇಡೀ ಭಾರತೀಯ ಚಿತ್ರರಂಗವೇ ಸಂತಾಪ ಸೂಚಿಸಿತ್ತು
ತಾಯಿ ಕಳೆದುಕೊಂಡಿರುವ ನೋವಲ್ಲಿರುವ ಕಿಚ್ಚನಿಗೆ ಬಂತು ಪ್ರಧಾನಿ‌ ಮೋದಿಯಿಂದ ಪತ್ರ! ಆ ಪತ್ರದಲ್ಲಿದ್ದಿದ್ದೇನು? title=
File Photo

Kichcha Sudeep-PM Narendra Modi: ಕಿಚ್ಚ ಸುದೀಪ್​ ಅವರ ತಾಯಿ ಸರೋಜಾ ಸಂಜೀವ್ ಅವರು ಅಕ್ಟೋಬರ್​ 20ರಂದು ನಿಧನರಾಗಿದ್ದಾರೆ. ಸರೋಜಾ ಅವರ ಅಗಲಿಕೆ ಇಡೀ ಭಾರತೀಯ ಚಿತ್ರರಂಗವೇ ಸಂತಾಪ ಸೂಚಿಸಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಂತಾಪ ಸೂಚಿಸಿದ್ದು ಪತ್ರ ಬರೆದಿದ್ದಾರೆ. ಈ ಪತ್ರವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಾಕಿಕೊಂಡಿರುವ ಕಿಚ್ಚ, "ನಿಮ್ಮ ಸಾಂತ್ವಾನವು ನನ್ನ ಹೃದಯ ತಟ್ಟಿದೆ" ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅಂಗೈಯಲ್ಲಿ ಅಡಗಿರುವ ಈ ರೇಖೆ ಹೇಳುತ್ತೆ ನಿಮ್ಮ ಜೀವನ ಸಂಗಾತಿಯ ಅಕ್ರಮ ಸಂಬಂಧದ ಗುಟ್ಟು..!

ಪ್ರಧಾನಿ ನರೇಂದ್ರ ಮೋದಿಯವರ ಪತ್ರದಲ್ಲಿ, "ಶ್ರೀ ಸುದೀಪ್ ಸಂಜೀವ್  ಅವರೇ, ನಿಮ್ಮ ತಾಯಿ ಶ್ರೀಮತಿ ಸರೋಜಾ ಸಂಜೀವ್ ಅವರ ನಿಧನದ ಸುದ್ದಿ ಕೇಳಿ ನನಗೆ ದುಃಖವಾಗಿದೆ. ತಾಯಿಯ ಅಗಲಿಕೆ ತುಂಬಲಾರದ ನಷ್ಟ. "ಮಾತುಲಕಿ ಮಾರ್ದವಂ ಸಾಮ್ಯಶೂನ್ಯಮ್" ಎಂದು ಹೇಳಿದಂತೆ, ತಾಯಿಯ ಹೃದಯದ ಮೃದುತ್ವಕ್ಕೆ ಈ ಜಗತ್ತಿನಲ್ಲಿ ಬೇರೆ ಸಾಟಿಯಿಲ್ಲ. ನಿಮ್ಮ ಭಾವನಾತ್ಮಕ ವೇದನೆ ತಾಯಿ ಜೊತೆಗಿರುವ ಬಂಧವನ್ನು ಪ್ರತಿಬಿಂಬಿಸುತ್ತದೆ. ಅವರು ನಿಮ್ಮ ನೆನಪುಗಳಲ್ಲಿ ಬದುಕುತ್ತಾರೆ ಮತ್ತು ಅವರಿಂದ ತುಂಬಿದ ಮೌಲ್ಯಗಳು ನಿಮಗೆ ಸ್ಫೂರ್ತಿ ನೀಡುತ್ತವೆ ಎಂಬ ನನಗೆ ನಂಬಿಕೆ ಇದೆ" ಎಂದು ಬರೆದುಕೊಂಡಿದ್ದಾರೆ.

"ನಿಮ್ಮ ಜೀವನದಲ್ಲಿ ನಿಜವಾಗಿಯೂ ಅತ್ಯಂತ ಕಷ್ಟಕರವಾದ ಹಂತ ಎಂದು ನಾನು ಬಲ್ಲೆ. ನನ್ನ ಆಳವಾದ ಸಂತಾಪ ಸೂಚಿಸುತ್ತೇನೆ. ಆಲೋಚನೆಗಳು ಮತ್ತು ಪ್ರಾರ್ಥನೆಗಳು ಕುಟುಂಬ ಮತ್ತು ಹಿತೈಷಿಗಳೊಂದಿಗೆ ಇದೆ. ಈ ನಷ್ಟ, ಈ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ನಿಮಗೆ ದಯಪಾಲಿಸಲಿ ಓಂ ಶಾಂತಿ" ಎಂದು ಪತ್ರದಲ್ಲಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

ಅಕ್ಟೋಬರ್ 23 ರಂದು ಬರೆದಿರುವ ಈ ಪತ್ರ ಸುದೀಪ್ ಕೈ ಸೇರಿದ್ದು, ಇದೀಗ ಕಿಚ್ಚ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಶೇರ್‌ ಮಾಡಿ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ಖಂಡಿತಾ ನಿರ್ಲಕ್ಷ್ಯ ಬೇಡ! ದೇಹದಲ್ಲಿ ಈ ಲಕ್ಷಣ ಕಂಡು ಬಂದರೆ ಅದು ವಿಟಮಿನ್ ಡಿ ಕೊರತೆಯ ಸಂಕೇತ 

"ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ,  ನಿಮ್ಮ ಸಹಾನುಭೂತಿಯ ಸಂತಾಪ ಪತ್ರಕ್ಕಾಗಿ ಪ್ರಾಮಾಣಿಕ ಧನ್ಯವಾದಗಳು. ನಿಮ್ಮ ಚಿಂತನಶೀಲ ಮಾತುಗಳು  ಈ ಆಳವಾದ ಕಷ್ಟದ ಸಮಯದಲ್ಲಿ ಸಾಂತ್ವಾನದ ಮೂಲಸೆಲೆಯನ್ನು ನೀಡಿದೆ. ನಿಮ್ಮ ಸಾಂತ್ವಾನವು ನನ್ನ ಹೃದಯ ತಟ್ಟಿದೆ. ನಿಮ್ಮ ವಿಶ್ವಾಸಕ್ಕೆ ನಾನು  ಅಭಾರಿ" ಎಂದು ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News