ಬೆಂಗಳೂರು : ಇಂದು ನಟಿ ಪ್ರಿಯಾಂಕ ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ "ಕೈಮರ" ಚಿತ್ರತಂಡ ಅವರಿಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ.


COMMERCIAL BREAK
SCROLL TO CONTINUE READING

ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರನ ಪುತ್ರ ಗೌತಮ್ ವಿಮಲ್ ನಿರ್ದೇಶನದ "ಕೈಮರ" ಚಿತ್ರದ ಪ್ರಮುಖಪಾತ್ರದಲ್ಲಿ ಪ್ರಿಯಾಂಕ ಉಪೇಂದ್ರ ನಟಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ನವೆಂಬರ್ 12, ಪ್ರಿಯಾಂಕ ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ "ಕೈಮರ" ಚಿತ್ರತಂಡ ಪ್ರಿಯಾಂಕ ಉಪೇಂದ್ರ ಅವರಿಗೆ ವಿಶೇಷವಾಗಿ ಹುಟ್ಟುಹಬ್ಬ ಶುಭಾಶಯ ತಿಳಿಸಿದೆ.


ಇದನ್ನೂ ಓದಿ: ಸಾಕಿದವನ ಮೇಲೆಯೇ ಎರಗಿದ ದೈತ್ಯ ಹೆಬ್ಬಾವು : ಭಯಾನಕ ವಿಡಿಯೋ ನೋಡಿ..!


ವಿ.ಮತ್ತಿಯಳಗನ್ ನಿರ್ಮಾಣದ ಈ ಚಿತ್ರದ ಪ್ರಮುಖಪಾತ್ರಗಳಲ್ಲಿ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್, ಮತ್ತಿಯಳಗನ್ ಮುಂತಾದವರು  ನಟಿಸುತ್ತಿದ್ದಾರೆ.  "ಕೈಮರ" ಚಿತ್ರದ ಕಥೆಯನ್ನು ಪಿ. ವಿಮಲ್ ಬರೆದಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನ, ಮಣಿಕಂಠನ್ ಛಾಯಾಗ್ರಹಣ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನ "ಕೈಮರ" ದಲ್ಲಿರಲಿದೆ.‌https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.