Puneet Rajkumar Died: ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ- ಮಾಜಿ ಪ್ರಧಾನಿ ದೇವೇಗೌಡರ ಸಂತಾಪ

ಪುನೀತ್ ರಾಜ್ ಕುಮಾರ್ ಅವರು ನಟಿಸಿದ್ದ ಪೃಥ್ವಿ ಮತ್ತು ರಾಜಕುಮಾರ ಚಿತ್ರವನ್ನು ಅಪ್ಪು ಅವರ ಜೊತೆಯಲ್ಲೇ ನೋಡಿದ್ದೇ ಈ ದಿನ ಅವರಿಲ್ಲ ಎಂದರೆ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಅವರು ಕಂಬನಿ ಮಿಡಿದಿದ್ದಾರೆ.

Written by - Zee Kannada News Desk | Last Updated : Oct 29, 2021, 03:07 PM IST
Puneet Rajkumar Died: ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ- ಮಾಜಿ ಪ್ರಧಾನಿ ದೇವೇಗೌಡರ ಸಂತಾಪ  title=
RIP Puneeth Rajkumar

ಬೆಂಗಳೂರು: ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಹೆಚ್.ಡಿ. ದೇವೇಗೌಡರು, ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ ಎಂದಿದ್ದಾರೆ.
 
ಇದನ್ನೂ ಓದಿ- Live: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶ 

ಪುನೀತ್ ರಾಜ್ ಕುಮಾರ್ ಅವರು ನಟಿಸಿದ್ದ ಪೃಥ್ವಿ ಮತ್ತು ರಾಜಕುಮಾರ ಚಿತ್ರವನ್ನು ಅಪ್ಪು ಅವರ ಜೊತೆಯಲ್ಲೇ ನೋಡಿದ್ದೇ ಈ ದಿನ ಅವರಿಲ್ಲ ಎಂದರೆ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಅವರು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ- ‘ಬೆಟ್ಟದ ಹೂ’ ಮೂಲಕ ಬಾಲ್ಯದಲ್ಲಿಯೇ ಮೋಡಿ ಮಾಡಿದ್ದ ಪುನೀತ್ ರಾಜ್ ಕುಮಾರ್

ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದುಃಖ ಬರಿಸುವ ಶಕ್ತಿ ತುಂಬಲಿ ಎಂದು ಹೆಚ್.ಡಿ. ದೇವೇಗೌಡರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News