ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಪ್ರವಾಹ ಪರಿಹಾರ ನಿಧಿಗೆ 5 ಲಕ್ಷ ರೂ.ಗಳ ನೆರವು ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ಭೇಟಿ ನೀಡಿದ ಪುನೀತ್, ಪ್ರವಾಹ ಸಂತ್ರಸ್ತರಿಗಾಗಿ 5 ಲಕ್ಷ ರೂ.ಗಳ  ಚೆಕ್ ನೀಡಿದರು. 


ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರವಾಹ ಪರಿಹಾರ ನಿಧಿಗೆ ಆರ್ಥಿಕ ನೆರವು ನೀಡಲು ಸಿಎಂ ನಿವಾಸಕ್ಕೆ ಬಂದಿದ್ದೇನೆ. ನನ್ನ ಕೈಲಾದಷ್ಟು ಸಹಾಯ ಮಾಡುತ್ತಿದ್ದೇನೆ. ಈ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನೆರವು ನೀಡಲು ಜನ ಮುಂದಾಗಬೇಕು ಎಂದು ಹೇಳಿದ್ದೆ. ನನ್ನ ಮಾತುಗಳಿಗೆ ಇಷ್ಟು ಒಳ್ಳೆಯ ಪ್ರತಿಕ್ರಿಯೆ ದೊರೆತಿದೆ. ಇದನ್ನು ನೋಡಿದರೆ ಖುಷಿ ಆಗುತ್ತದೆ ಎಂದು ಹೇಳಿದರು.


ಅಭಿಮಾನಿಗಳು ಹಾಗೂ ಜನರು ಪ್ರವಾಹ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಒದಗಿಸಲು ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಇದರ ಜೊತೆ ಪ್ರವಾಹ ಸಂತ್ರಸ್ತರಿಗಾಗಿ ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ" ಎಂದು ಪುನೀತ್ ಇದೇ ಸಂದರ್ಭದಲ್ಲಿ ಹೇಳಿದರು.