Puneeth Rajkumar birthday : ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ʼಗೌರಿʼ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇಂದ್ರಜಿತ್ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇನ್ನು ಚಿತ್ರತಂಡ ಕರ್ನಾಟಕ ರತ್ನ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರ ಹುಟ್ಟು ಹಬ್ಬಕ್ಕೆ ನೃತ್ಯ ನಮನ ಸಲ್ಲಿಸಲು ಸಜ್ಜಾಗಿದೆ.


COMMERCIAL BREAK
SCROLL TO CONTINUE READING

ಹೌದು.. ಮಾರ್ಚ್ 17, ಸ್ಯಾಂಡಲ್‌ವುಡ್‌ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ. ಪುನೀತ್ ಅವರ ಹುಟ್ಟುಹಬ್ಬಕ್ಕೆ "ಗೌರಿ" ತಂಡದಿಂದ ವಿಶೇಷ ಗೀತೆಯೊಂದು ಬರಲಿದೆ. ಈ ವಿಶೇಷ ಗೀತೆಗೆ ಸಮರ್ಜಿತ್ ಲಂಕೇಶ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಈ ಹಾಡಿನ ಬಗ್ಗೆ ಚಿತ್ರತಂಡದ ಸದಸ್ಯರು ಮಾತನಾಡಿದರು.


ಇದನ್ನೂ ಓದಿ:ಸೂಪರ್ ಸ್ಟಾರ್ ಮಹೇಶ್ ಬಾಬು ʻವಿಗ್ ಸೀಕ್ರೆಟ್ʼ ಕೊನೆಗೂ ಬಯಲು.!!


ನಾನು ಅಪ್ಪು ಅವರ ಅಭಿಮಾನಿ ಎಂದು ಮಾತನಾಡಿದ ಸಮರ್ಜಿತ್, ಪುನೀತ್ ಅವರ ಡ್ಯಾನ್ಸ್ ನನಗೆ ಸ್ಪೂರ್ತಿ. ಹಾಗಾಗಿ ಅವರ ಹುಟ್ಟುಹಬ್ಬದಂದು ʼಗೌರಿʼ ಚಿತ್ರತಂಡದಿಂದ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ನಮನ ಸಲ್ಲಿಸುತ್ತಿದ್ದೇವೆ ಎಂದರು.


ಇಂದ್ರಜಿತ್  ಅವರ ಮಗ ಸಮರ್ಜಿತ್ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರವಿದು. ಸಮರ್ಜಿತ್ ಬಹಳ ಲವಲವಿಕೆಯ ಹುಡುಗ. ಈ ಹಾಡಿನಲ್ಲಿ ಸಮರ್ಜಿತ್ ಅವರ ಜೊತೆ ಅಭಿನಯಿಸುತ್ತಿರುವುದು ಖುಷಿಯಾಗಿದೆ.  ನಾನು ಸಹ ಪುನೀತ್ ಅವರ ಅಭಿಮಾನಿ‌ ಎಂದು ತಾನ್ಯ ಹೋಪ್ ತಿಳಿಸಿದರು.


ಇದನ್ನೂ ಓದಿ:ನಾನು ದಾಲ್ಚಿನ್ನಿಯಂತೆ ಸಿಹಿ ಎಂದು ಅಮೃತಧಾರೆ ಮಹಿಮಾ!


ಈಗಾಗಲೇ ʼಗೌರಿʼ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಆದರೆ ಇಂದು ಸಿನಿಮಾಗಿಂತ ಈ ಹಾಡಿನ ಬಗ್ಗೆ ಹೇಳಲು ಬಯಸುತ್ತೇನೆ. ಮುಂಬರುವ ಪುನೀತ್ ಅವರ ಹುಟ್ಟುಹಬ್ಬಕ್ಕೆ ʼಗೌರಿʼ ಚಿತ್ರತಂಡದಿಂದ ವಿಶೇಷ ಹಾಡೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಚಿತ್ರಗಳ ಪ್ರಸಿದ್ದ ಹಾಡುಗಳಿಗೆ ಸಮರ್ಜಿತ್ ಹಾಗೂ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ. ಈ ವಿಶೇಷ ಗೀತೆಯ ತಾಲೀಮು ನಡೆಯುತ್ತಿದೆ. ಸದ್ಯದಲ್ಲೇ ಚಿತ್ರೀಕರಣವಾಗಲಿದೆ ಎನ್ನುತ್ತಾರೆ ನಿರ್ದೇಶಕ ಇಂದ್ರಜಿತ್ ಲಂಕೇಶ್. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಮರ್ಜಿತ್ ಲಂಕೇಶ್ ಅವರಿಗೆ ನಾಯಕಿಯಾಗಿ ಸಾನ್ಯ ಅಯ್ಯರ್ ನಟಿಸುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.