ಅಪ್ಪು ಮಡದಿ ಕುರಿತ ಪೋಸ್ಟ್‌, ಕಿಡಿಗೇಡಿಗಳ ವಿರುದ್ಧ ಸಮರ ಸಾರಿದ ಅಪ್ಪು ಫ್ಯಾನ್ಸ್‌..! ದೂರು ದಾಖಲು

Appu fans : ʼಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು, ಗಂಡ ಸತ್ತವರನ್ನ ಅಲ್ಲʼ ಎಂಬ ಪೋಸ್ಟ್‌ ನಿನ್ನೆಯಿಂದ ಸದ್ದು ಮಾಡುತ್ತಿದೆ. ಇದರಿಂದ ಬೇಸತ್ತ ಅಪ್ಪು ಅಭಿಮಾನಿಗಳು ಪೊಸ್ಟ್‌ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಕಮಿಷನರ್‌ ಅವರಿಗೆ ದೂರು ನೀಡಿದ್ದಾರೆ.

Written by - Krishna N K | Last Updated : Apr 5, 2024, 07:19 PM IST
    • RCB ಸೋಲಿಗೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರೇ ಕಾರಣ.
    • ದೊಡ್ಮನೆ ಸೊಸೆ ವಿರುದ್ಧ ಅವಹೇಳನಕಾರಿ ಪೋಸ್ಟ್‌
    • ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಪ್ಪು ಪ್ಯಾನ್ಸ್‌ ದೂರು
ಅಪ್ಪು ಮಡದಿ ಕುರಿತ ಪೋಸ್ಟ್‌, ಕಿಡಿಗೇಡಿಗಳ ವಿರುದ್ಧ ಸಮರ ಸಾರಿದ ಅಪ್ಪು ಫ್ಯಾನ್ಸ್‌..! ದೂರು ದಾಖಲು title=

Ashwini Puneeth Rajkumar : ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್ ಅವರ ವಿರುದ್ಧ ಗಜಪಡೆ ಎಂಬ ಟ್ಟಿಟರ್‌ ಖಾತೆಯಲ್ಲಿ ಹಾಕಿದ್ದ ಅವಹೇಳನಕಾರಿ ಪೋಸ್ಟ್‌ ಸಂಚಲನ ಸೃಷ್ಟಿಸುತ್ತಿದೆ. ಇದೀಗ ಈ ಕುರಿತು ಕ್ರಮಕೈಗೊಳ್ಳುವಂತೆ ಅಪ್ಪು ಪ್ಯಾನ್ಸ್‌ ದೂರು ದಾಖಲಿಸಿದ್ದಾರೆ.

ಹೌದು.. RCB ಸೋಲಿಗೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರೇ ಕಾರಣ. ʼಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು, ಗಂಡ ಸತ್ತವರನ್ನ ಅಲ್ಲʼ ಎಂಬ ಪೋಸ್ಟ್‌ ನಿನ್ನೆಯಿಂದ ಸದ್ದು ಮಾಡುತ್ತಿದೆ. ಸ್ವತಃ ದರ್ಶನ್‌ ಅವರೂ ಸಹ ಇದಕ್ಕೆ ಬೇಸರ ವ್ಯಕ್ತಪಡಿಸಿದ್ದರು. ಇದೀಗ ಕಿಡಿಗೇಡಿಗಳ ವಿರುದ್ಧ ಬೆಂಗಳೂರು ನಗರ ಕಮಿಷನರ್‌ ಅವರಿಗೆ ಪುನೀತ್‌ ಅವರ ಅಭಿಮಾನಿಗಳು ದೂರು ನೀಡಿದ್ದಾರೆ.

ಇದನ್ನೂ ಓದಿ:ಸುದೀಪ್‌-ಅಪ್ಪು ಪ್ಯಾನ್ಸ್‌ ನಡುವೆ ಜಗಳ ಹಚ್ಚುವ ಕೆಲಸ ಮಾಡಿದ ಕಿಡಿಗೇಡಿಗಳು..! ಅಷ್ಟಕ್ಕೂ ಆಗಿದ್ದೇನು..?

ದೂರಿನಲ್ಲಿ ಏನಿದೆ..? : ಕಳೆದ ಮಾರ್ಚ್ ತಿಂಗಳ 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ತಂಡದ ಜೆರ್ಸಿ ಉದ್ಘಾಟನೆ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾ‌ರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಮೇಡಮ್ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡವು ಕೆಲ ಪಂದ್ಯಗಳಲ್ಲಿ ಸೋತ ಕಾರಣ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ "ಗಜ ಪಡೆ" ಎಂಬ ನಕಲಿ ಖಾತೆ ಸೃಷ್ಟಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಆ ಕಾರ್ಯಕ್ರಮಕ್ಕೆ ಬಂದದ್ದೆ ಆರ್‌ಸಿಬಿ ತಂಡದ ಸೋಲಿಗೆ ಕಾರಣ ಎಂದು ಅಶ್ವಿನಿ ಮೇಡಂ ಅವರನ್ನು ಹೊಣೆ ಮಾಡಿ ಅವರನ್ನು ಕೆಟ್ಟದಾಗಿ ನಿಂದಿಸಿ ಪೋಸ್ಟ್ ಮಾಡಿರುತ್ತಾನೆ. 

ಇದಾದ ನಂತರ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದಾಗ ಆ ನಕಲಿ ಖಾತೆಯ ಹೆಸರನ್ನು "ಸುದೀಪ್ ಅಭಿಮಾನಿ" ಎಂದು ಬದಲಾಯಿಸಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳು ಹಾಗೂ ಸುದೀಪ್ ಅವರ ಅಭಿಮಾನಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗುವಂತೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಟಿಸಿರುತ್ತಾನೆ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ಸುದೀಪ್ ಅವರಿಗೆ ಅವಮಾನ ಮಾಡಿರುತ್ತಾನೆ ಈ ಘಟನೆಯಿಂದ ಕರ್ನಾಟಕದ ರಾಜವಂಶದ ಅಭಿಮಾನಿಗಳಿಗೆ ತುಂಬಾ ನೋವು ಉಂಟಾಗಿರುತ್ತದೆ ಹಾಗಾಗಿ ಅವನನ್ನು ಶೀಘ್ರದಲ್ಲೇ ಬಂಧಿಸಿ ಅವನಿಗೆ ತಕ್ಕ ಶಿಕ್ಷೆ ನೀಡಬೇಕಾಗಿ ಕೋರುತ್ತಿದ್ದೇವೆ ಎಂದು ಅಪ್ಪು ಫ್ಯಾನ್ಸ್‌ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News