Puneeth Rajkumar: ಪುನೀತ್ ರಾಜಕುಮಾರ್ ಗೆ ‘ಭಾರತ ರತ್ನ’ ನೀಡಲು ಒತ್ತಾಯ

ಯಾರಿಗೂ ಗೊತ್ತಾಗದಂತೆ ಸಮಾಜ ಸೇವೆ ಮಾಡಿರುವ ಪುನೀತ್ ರಾಜಕುಮಾರ್ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ನಟ ಶರತ್ ಕುಮಾರ್ ಒತ್ತಾಯಿಸಿದ್ದಾರೆ. 

Written by - Zee Kannada News Desk | Last Updated : Nov 17, 2021, 01:03 PM IST
  • ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಲು ಒತ್ತಾಯ
  • ‘ಪುನೀತ ನಮನ’ ಕಾರ್ಯಕ್ರಮದಲ್ಲಿ ‘ಅಪ್ಪು’ ನೆನೆದು ಖ್ಯಾತ ಹಿರಿಯ ನಟ ಶರತ್ ಕುಮಾರ್ ಭಾವುಕ
  • ಪುನೀತ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿರುವ ಸಿದ್ದರಾಮಯ್ಯ
Puneeth Rajkumar: ಪುನೀತ್ ರಾಜಕುಮಾರ್ ಗೆ ‘ಭಾರತ ರತ್ನ’ ನೀಡಲು ಒತ್ತಾಯ title=
‘ಅಪ್ಪು’ಗೆ ಭಾರತ ರತ್ನ ನೀಡಲು ಒತ್ತಾಯಿಸಲಾಗಿದೆ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್(Puneeth Rajkumar) ಅವರಿಗೆ ‘ಭಾರತ ರತ್ನ’ ಪ್ರಶಸ್ತಿ(Bharat Ratna Award)ನೀಡಬೇಕೆಂದು ದಕ್ಷಿಣ ಭಾರತದ ಖ್ಯಾತ ಹಿರಿಯ ನಟ ಶರತ್ ಕುಮಾರ್ ಒತ್ತಾಯಿಸಿದ್ದಾರೆ. ‘ರಾಜಕುಮಾರ’ ಸಿನಿಮಾದಲ್ಲಿ ಪುನೀತ್​ ತಂದೆಯ ಪಾತ್ರವನ್ನು ಮಾಡಿದ್ದ ಶರತ್​ಕುಮಾರ್(Sarath Kumar)​ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಪುನೀತ ನಮನ’(Appu Namana) ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಭಾವುಕರಾದರು.

‘ಪುನೀತ್​ ರಾಜ್​ಕುಮಾರ್(Puneeth Rajkumar)​​ ಜೊತೆಗೆ ಒಳ್ಳೆಯ ಒಡನಾಟ ಇತ್ತು. ಪುನೀತ್​ ಇಷ್ಟು ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಹೋಗಿದ್ದು ನಂಬಲು ಸಾಧ್ಯವಾಗುತ್ತಿಲ್ಲ. ‘ರಾಜಕುಮಾರ’ ಸಿನಿಮಾದ 100ನೇ ದಿನದ ಸಂಭ್ರಮವನ್ನು ಬೆಂಗಳೂರಿನಲ್ಲಿಯೇ ಮಾಡಿದ್ದೆವು. ಈಗ ಇಲ್ಲಿಯೇ ಪುನೀತ್​ಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ. ಈ ರೀತಿ ಆಗುತ್ತದೆ ಎಂದು ನಾನು ಖಂಡಿತ ಅಂದುಕೊಂಡಿರಲಿಲ್ಲ. ನನಗೆ ಈಗ 67 ವರ್ಷ. ಬಹುಶಃ ಪುನೀತ್​ ನನ್ನ ಶ್ರದ್ಧಾಂಜಲಿಗೆ ಬರಹುದು ಎಂದುಕೊಂಡಿದ್ದೆ. ದೇವರು ಪುನೀತ್​ ಬದಲಿಗೆ ನನ್ನನ್ನು ಕರೆದುಕೊಳ್ಳಬಹುದಿತ್ತು’ ಅಂತಾ ಶರತ್ ಕುಮಾರ್ ದುಃಖದಲ್ಲಿ ಮಾತನಾಡಿದರು.

ಇದನ್ನೂ ಓದಿ: Puneet Rajkumar : ಪುನೀತ್ ರಾಜಕುಮಾರ್ ಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ!

‘ಪುನೀತ್ ರಾಜಕುಮಾರ್ ಅವರಿಗೆ ರಾಜ್ಯ ಸರ್ಕಾರ ‘ಕರ್ನಾಟಕ ರತ್ನ’(Karnataka Ratna) ಪ್ರಶಸ್ತಿ ನೀಡಿ ಗೌರವಿಸಿದೆ. ಇದಕ್ಕಾಗಿ ಧನ್ಯವಾದ ಹೇಳುತ್ತೇನೆ. ಪುನೀತ್ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಬೇಕು. ನಟನೆಯ ಜೊತೆಗೆ ಅನೇಕ ಸೇವಾ ಕಾರ್ಯಗಳ ಮೂಲಕ ಪುನೀತ್ ಸಮಾಜ ಸೇವೆ ಮಾಡಿದ್ದಾರೆ. ಅವರ ವ್ಯಕ್ತಿತ್ವ ಪ್ರತಿಯೊಬ್ಬರಿಗೂ ಮಾದಿಯಾಗಿದೆ. ತಮ್ಮ ಚಿತ್ರಗಳ ಮೂಲಕ ಅಪ್ಪು ಸಮಾಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಯಾರಿಗೂ ಗೊತ್ತಾಗದಂತೆ ಸಮಾಜ ಸೇವೆ ಮಾಡಿರುವ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ನಾನು ಮನವಿ ಮಾಡುತ್ತೇನೆ’ ಎಂದು ಹೇಳಿದರು.   

ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ(Padma Shri)ನೀಡಿ ಗೌರವಿಸಬೇಕೆಂದು ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಒತ್ತಾಯಿಸಿದ್ದಾರೆ.  ರಾಜ್ಯ ಸರ್ಕಾರ ಪುನೀತ್ ಅವರಿಗೆ ‘ಕರ್ನಾಟಕ ರತ್ನ’ ಬಿರುದು ನೀಡಿಲು ನಿರ್ಧರಿಸಿರುವುದು ಸ್ವಾಗತಾರ್ಹ. ಇದಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ಪುನೀತ್ ಅವರ ಸಮಾಜಿ ಸೇವೆ ಪರಿಗಣಿಸಿ ಅವರಿಗೆ ಮರಣೋತ್ತರವಾಗಿ ‘ಪದ್ಮಶ್ರೀ’ ಪ್ರಶಸ್ತಿ ನೀಡಲು ಶೀಘ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಕೇಂದ್ರಕ್ಕೆ ಶಿಫಾರಾಸು‌ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Puneeth Rajkumar : ಪುನೀತ್ ರಾಜ್‍ಕುಮಾರ್ ನಿಧನ: ರಾಜ್ಯದಲ್ಲಿ ನೇತ್ರದಾನಿಗಳ ಸಂಖ್ಯೆ ಹೆಚ್ಚಳ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News