Puneeth Rajkumar : ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ಗೆ‌ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್

ಇನ್ನು ಈ ಸಂತಸವನ್ನು ನಿರ್ದೇಶಕ ಸಂತೋಷ್ ಆನಂದ್‌ರಾಮ್‌ ಟ್ವಿಟ್ಟರ್‌ ನಲ್ಲಿ ಹಂಚಿಕೊಂಡಿದ್ದಾರೆ.

Written by - Malathesha M | Last Updated : Mar 13, 2022, 03:45 PM IST
  • ಪ್ರೀತಿಯ 'ಅಪ್ಪು'ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್
  • ಈ ಕುರಿತು ಮಾಹಿತಿ ನೀಡಿದ ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್
  • ಮೈಸೂರು ವಿವಿ 46 ವರ್ಷದ ಹಿಂದೆ ಡಾ. ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್
Puneeth Rajkumar : ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ಗೆ‌ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ title=

ಬೆಂಗಳೂರು : ಕರುನಾಡಿನ ಕಣ್ಮಣಿ, ಕನ್ನಡಿಗರ ಪಾಲಿನ ಪ್ರೀತಿಯ 'ಅಪ್ಪು'ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಅಪ್ಪು ನಮ್ಮನ್ನೆಲ್ಲಾ ಅಗಲಿದ್ದರೂ, ಅವರ ಕೊನೆಯ ಸಿನಿಮಾ 'ಜೇಮ್ಸ್‌' ಮೂಲಕ ಮತ್ತೆ ಅಭಿಮಾನಿಗಳ ಎದುರು ಬರುತ್ತಿದ್ದಾರೆ. ಈ ಹೊತ್ತಲ್ಲೇ ಸಂಭ್ರಮದ ಸುದ್ದಿಯೊಂದು ಸಿಕ್ಕಿದ್ದು, ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್(Dr G Hemanth Kumar) ಅವರು, 'ಹಿಂದೆ ಪದ್ಮಭೂಷಣ ಡಾ. ರಾಜ್ ಕುಮಾರ್ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗಿತ್ತು. ಇದೀಗ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಮರಣೋತ್ತರವಾಗಿ ನೀಡಲು ತೀರ್ಮಾನಿಸಲಾಗಿದೆ' ಎಂದು ತಿಳಿಸಿದರು. 

ಸೃಷ್ಟಿಯಾಯ್ತು ಇತಿಹಾಸ

ಇಲ್ಲಿ ಮತ್ತೊಂದು ವಿಶೇಷತೆ ಏನೆಂದರೆ, ಮೈಸೂರು ವಿವಿ 46 ವರ್ಷದ ಹಿಂದೆ ಪದ್ಮಭೂಷಣ ಡಾ. ರಾಜ್ ಕುಮಾರ್(Dr Rajkumar) ಅವರಿಗೆ ಗೌರವ ಡಾಕ್ಟರೇಟ್ ನೀಡಿತ್ತು. ಇದೀಗ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಈ ಮೂಲಕ ಹೊಸ ಇತಿಹಾಸವೊಂದು ಸೃಷ್ಟಿಯಾಗಿದೆ.

ಸಂತಸದ ಸಮಯ

ದಿ. ಪುನೀತ್ ರಾಜ್‌ಕುಮಾರ್(Puneeth Rajkumar) ಅವರೂ ಸೇರಿ ಮೂವರಿಗೆ ಮೈಸೂರು ವಿವಿ ಪ್ರಸಕ್ತ ಸಾಲಿನ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ. ಇನ್ನು ಈ ಸಂತಸವನ್ನು ನಿರ್ದೇಶಕ ಸಂತೋಷ್ ಆನಂದ್‌ರಾಮ್‌ ಟ್ವಿಟ್ಟರ್‌ ನಲ್ಲಿ ಹಂಚಿಕೊಂಡಿದ್ದಾರೆ.

ನಿರ್ದೇಶಕ ಸಂತೋಷ್ ಆನಂದ್‌ರಾಮ್‌(Santhosh Ananddram) ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ, 'ಕೊನೆಯೇ ಇಲ್ಲ ಕಲೆಗೆ, ಸಾವಿಲ್ಲ ಸಾಧನೆಗೆ ನೀವು ಜೀವಿಸುವಿರಿ ನಮ್ಮೊಳಗೇ ಇನ್ನು  ನಮ್ಮ ಬಾಸ್ ಇನ್ಮೇಲೆ “ಕರ್ನಾಟಕ ರತ್ನ ಡಾ|| ಪುನೀತ್ ರಾಜಕುಮಾರ್ “ ಡಾ ಡಾ ಡಾ ಡಾ ಡಾ ಡಾ ಡಾಕ್ಟರ್ ಪುನೀತ್ ರಾಜ್ ಕುಮಾರ್ ಗೆ ಜೈ' ಎಂದು ಬರೆದುಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News