ಪುನೀತ್ ರಾಜ್‌ಕುಮಾರ್ ನಮ್ಮೆಲ್ಲರನ್ನೂ ತಮ್ಮ ಪ್ರೀತಿಯಿಂದ ಗೆದ್ದಿದ್ದಾರೆ-ಅಮೀರ್ ಖಾನ್

ನಟ ಪುನೀತ್ ರಾಜ್‌ಕುಮಾರ್ ಅವರು 'ತಮ್ಮ ಪ್ರೀತಿ, ಪ್ರಾಮಾಣಿಕತೆ ಮತ್ತು ಉತ್ಸಾಹದಿಂದ ನಮ್ಮೆಲ್ಲರನ್ನೂ ಗೆದ್ದಿದ್ದಾರೆ'ಎಂದು ಬಾಲಿವುಡ್ ನಟ ಅಮೀರ್ ಖಾನ್ ಕಂಬನಿ ಮಿಡಿದಿದ್ದಾರೆ.

Last Updated : Oct 30, 2021, 08:37 PM IST
  • ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಡೆಯಬೇಕಿತ್ತು. ಆದರೆ, ಅವರ ಪುತ್ರಿ ಅಮೆರಿಕದಿಂದ ಬೆಂಗಳೂರಿಗೆ ಬಂದಿದ್ದು ಸ್ವಲ್ಪ ತಡವಾಗಿದ್ದರಿಂದ ಮತ್ತು ಪುನೀತ್ ಅವರ ಹಲವಾರು ಅಭಿಮಾನಿಗಳು ಅವರಿಗೆ ಅಂತಿಮ ನಮನ ಸಲ್ಲಿಸದ ಕಾರಣ ಭಾನುವಾರ ಅಂತ್ಯಕ್ರಿಯೆ ನಡೆಸಲು ಅವರ ಕುಟುಂಬ ನಿರ್ಧರಿಸಿದೆ.
ಪುನೀತ್ ರಾಜ್‌ಕುಮಾರ್ ನಮ್ಮೆಲ್ಲರನ್ನೂ ತಮ್ಮ ಪ್ರೀತಿಯಿಂದ ಗೆದ್ದಿದ್ದಾರೆ-ಅಮೀರ್ ಖಾನ್  title=
Photo Courtesy: Twitter

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ಅವರು 'ತಮ್ಮ ಪ್ರೀತಿ, ಪ್ರಾಮಾಣಿಕತೆ ಮತ್ತು ಉತ್ಸಾಹದಿಂದ ನಮ್ಮೆಲ್ಲರನ್ನೂ ಗೆದ್ದಿದ್ದಾರೆ' ಎಂದು ಬಾಲಿವುಡ್ ನಟ ಅಮೀರ್ ಖಾನ್ ಕಂಬನಿ ಮಿಡಿದಿದ್ದಾರೆ.

ಪುನೀತ್ ರಾಜಕುಮಾರ ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೊಳಗಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅವರ ಅಂತಿಮ ಸಂಸ್ಕಾರ ಭಾನುವಾರದಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ.

ಇದನ್ನೂ ಓದಿ: Puneeth Rajkumar: ಭಾನುವಾರದಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ

ಈಗ ಪುನೀತ್ ರಾಜ್‌ಕುಮಾರ್ ಅವರನ್ನು ನೆನಪಿಸಿಕೊಳ್ಳುತ್ತಾ, ಅಮೀರ್ ಖಾನ್ ತಮ್ಮ ನಿರ್ಮಾಣ ಸಂಸ್ಥೆಯ ಅಧಿಕೃತ ಇನ್‌ಸ್ಟಾಗ್ರಾಮ್ ಪುಟದಲ್ಲಿನ ಅಗಲಿದ ನಟನಿಗೆ ಸಂತಾಪ ಸೂಚಿಸಿದ್ದಾರೆ: "ಅಪ್ಪು ಅವರ ಚಲನಚಿತ್ರಗಳ ಮೂಲಕ ನಮ್ಮನ್ನು ರಂಜಿಸಿದರು, ಆದರೆ ಎಲ್ಲಕ್ಕಿಂತ ಹೆಚ್ಚಾಗಿ, ಅವರು ತಮ್ಮ ಬೆಚ್ಚನೆಯ ಪ್ರೀತಿ, ಪ್ರಾಮಾಣಿಕತೆ ಮತ್ತು ಉತ್ಸಾಹದಿಂದ ನಮ್ಮೆಲ್ಲರನ್ನೂ ಗೆದ್ದರು. ಧನ್ಯವಾದಗಳು ಪುನೀತ್, ಎಲ್ಲರಿಗೂ ನೀವು ನಮ್ಮೆಲ್ಲರ ಮೇಲೆ ತೋರಿದ ಪ್ರೀತಿಗಾಗಿ, ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪ ಮತ್ತು ಪ್ರಾರ್ಥನೆಗಳು"ಎಂದು ಅವರು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಚಿರನಿದ್ರೆಗೆ ಜಾರಿದ ‘ದೊಡ್ಮನೆ ಹುಡುಗ’: ಅಂತಿಮ ದರ್ಶನಕ್ಕೆ ಜನಸಾಗರ, ಕಣ್ಣೀರಿಡುತ್ತಿರುವ ಅಭಿಮಾನಿಗಳು

ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಡೆಯಬೇಕಿತ್ತು. ಆದರೆ, ಅವರ ಪುತ್ರಿ ಅಮೆರಿಕದಿಂದ ಬೆಂಗಳೂರಿಗೆ ಬಂದಿದ್ದು ಸ್ವಲ್ಪ ತಡವಾಗಿದ್ದರಿಂದ ಮತ್ತು ಪುನೀತ್ ಅವರ ಹಲವಾರು ಅಭಿಮಾನಿಗಳು ಅವರಿಗೆ ಅಂತಿಮ ನಮನ ಸಲ್ಲಿಸದ ಕಾರಣ ಭಾನುವಾರ ಅಂತ್ಯಕ್ರಿಯೆ ನಡೆಸಲು ಅವರ ಕುಟುಂಬ ನಿರ್ಧರಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News