Puneeth Rajkumar Birthday: ನಟ ‘ಪವರ್ ಸ್ಟಾರ್’ ಪುನೀತ್ ರಾಜ್‌ಕುಮಾರ್ ಇಂದು ನಮ್ಮೊಂದಿಗೆ ಇದ್ದಿದ್ದರೆ ಅದ್ದೂರಿಯಾಗಿ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಅವರಿಲ್ಲದೇ ಅಭಿಮಾನಿಗಳು ಜನ್ಮದಿನ ಆಚರಿಸುವಂತಾಗಿದೆ. ಪ್ರತಿವರ್ಷ ಮಾರ್ಚ್ 17 ಬಂತೆಂದರೆ ʼಅಪ್ಪುʼ ಅಭಿಮಾನಿಗಳು ಸಂಭ್ರಮಿಸುತ್ತಾರೆ. ಪುನೀತ್ ಅವರ ಬರ್ತ್ಡೇ ಪ್ರಯುಕ್ತ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ. ಅನ್ನದಾನ, ರಕ್ತದಾನ, ನೇತ್ರದಾನ ಸೇರಿದಂತೆ ಅನೇಕ ಕಾರ್ಯಗಳನ್ನು ಕೈಕೊಳ್ಳುತ್ತಿದ್ದಾರೆ.
ಇನ್ನು ರಾಜ್ಯದಾದ್ಯಂತ ಲಕ್ಷಾಂತರ ಅಭಿಮಾನಿಗಳು ನಟ ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನವನ್ನ ಆಚರಿಸುತ್ತಿದ್ದಾರೆ. 50ನೇ ವರ್ಷದ ಬರ್ತ್ಡೇ ಆಗಿದ್ದರಿಂದ ಈ ಬಾರಿ ಸ್ಪೆಷಲ್ ಆಗಿ ಆಚರಿಸಲಾಗುತ್ತಿದೆ. ಪುನೀತ್ ಅವರ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು, ಕುಟುಂಬಸ್ಥರು ಹಾಗೂ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಮರುಬಿಡುಗಡೆಯಾಗಿರುವ ‘ಅಪ್ಪು’ ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿಯೂ ಸಹ ಪುನೀತ್ ಅವರಿಗೆ ಜನ್ಮದಿನದ ಶುಭಾಶಯ ಕೋರುವ ಮೂಲಕ ಸ್ಮರಿಸಲಾಗುತ್ತಿದೆ.
ಇದನ್ನೂ ಓದಿ: ಮದುವೆಯಾಗಿ ಮೂರು ಮಕ್ಕಳಿರುವ ಸ್ಟಾರ್ ನಟನೊಂದಿಗೆ ಖ್ಯಾತ ನಟಿಯ ಅಫೇರ್! ಇಂಡಸ್ಟ್ರಿಯಲ್ಲಿ ಸಂಚಲನ..
ಕನ್ನಡ ಚಿತ್ರರಂಗಕ್ಕೆ ʼಅಪ್ಪುʼ ನೀಡಿದ ಕೊಡುಗೆಯನ್ನ ಮರೆಯುವಂತಿಲ್ಲ. ಬಾಲನಟನಾಗಿಯೇ ಅಭಿಮಾನಿಗಳ ಮನಗೆದ್ದಿದ್ದ ಪುನೀತ್ ಅವರು ಹೀರೋ ಆಗಿಯೂ ಮೊದಲ ಚಿತ್ರದಿಂದಲೇ ಯಶಸ್ಸು ಕಂಡರು. ಅಭಿನಯ, ಡ್ಯಾನ್ಸ್, ಫೈಟಿಂಗ್ನಲ್ಲಿ ಪುನೀತ್‌ಗೆ ಸರಿಸಾಟಿ ಯಾರೂ ಇರಲಿಲ್ಲ. ಅದೇ ರೀತಿ ಜನಪರ ಕಾರ್ಯಗಳ ಮೂಲಕವೂ ಅವರು ರಿಯಲ್ ಹೀರೋ ಎನಿಸಿಕೊಂಡಿದ್ದರು. ಪುನೀತ್ ಅವರ ಗುಣಗಳೇ ಕೋಟ್ಯಂತರ ಅಭಿಮಾನಿಗಳಿಗೆ ಮಾದರಿ ಆಗಿವೆ.
ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಪುನೀತ್ ಅವರು ಸಕ್ರಿಯರಾಗಿದ್ದರು. ತಮ್ಮ ‘PRK ಪ್ರೊಡಕ್ಷನ್ಸ್’ ಮೂಲಕ ಅವರು ಹಲವಾರು ಸಿನಿಮಾಗಳನ್ನು ನಿರ್ಮಿಸುವ ಗುರಿ ಹೊಂದಿದ್ದರು. ಈ ಒಂದು ಕಾಯಕವನ್ನು ಇದೀಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮುಂದುವರಿಸುತ್ತಿದ್ದಾರೆ. ಜನ್ಮದಿನದ ಪ್ರಯುಕ್ತ ಅನೇಕರು ʼಅಪ್ಪುʼ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಡಾ.ರಾಜ್‌ಕುಮಾರ್ ಕುಟುಂಬದವರು ಸಹ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ: ಸೀತಾರಾಮ ಸೀರಿಯಲ್ ಖ್ಯಾತಿಯ ನಟಿ ಸಿಂಧು ರಾವ್ ಪತಿ ಯಾರು ಗೊತ್ತೇ? ಮಗ ಎಷ್ಟು ಮುದ್ದಾಗಿದ್ದಾನೆ ನೋಡಿ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5 ನಲ್ಲೂ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









