ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2: ದಿ ರೂಲ್’ ಸಿನಿಮಾದ ಟ್ರೇಲರ್ ರಿಲೀಸ್ ದಿನಾಂಕ ನಿಗದಿಯಾಗಿದ್ದ, ನಾಳೆ ರಿಲೀಸ್ ಆಗಲಿದೆ ಮತ್ತು ಅಲ್ಲು ಅರ್ಜುನ್ ಹುಟ್ಟುಹಬ್ಬದಂದು ಇದೊಂದು ಸರ್ಪ್ರೈಸ್ ಅನ್ನು ಸಿನಿಮಾ ತಂಡ ಅಭಿಮಾನಿಗಳಿಗೆ ನೀಡಲಿವೆ. 


COMMERCIAL BREAK
SCROLL TO CONTINUE READING

ಪ್ಯಾನ್ ಇಂಡಿಯಾ ಬ್ಲಾಕ್​ ಬಸ್ಟರ್ ಪುಷ್ಪ ಸಿನಿಮಾ ಸೀಕ್ವೆನ್ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಅಲ್ಲು ಅರ್ಜುನ್​ಗೆ ಜೋಡಿಯಾಗಿ ನಟಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಸುಕುಮಾರ್ ನಿರ್ದೇಶನದಲ್ಲಿ ಪುಷ್ಪ 2 ಅದ್ಧೂರಿಯಾಗಿ ತಯಾರಾಗುತ್ತಿದೆ. 


ಇದೀಗ ಈ ಸಿನಿಮಾದ ಹೊಸ ಪೋಸ್ಟರ್ ಕೂಡ ರಿಲೀಸ್ ಆಗಿದ್ದು,  ಅಲ್ಲು ಅರ್ಜುನ್ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಪುಷ್ಪ 2 ಸಿನಿಮಾದ ಟ್ರೇಲರ್​ ರಿಲೀಸ್ ಆಗಲಿದೆ. ಟ್ರೇಲರ್ ರಿಲೀಸ್​ಗೆ ಟೈಮ್ ಕೂಡ ಫಿಕ್ಸ್ ಮಾಡಲಾಗಿದೆ. 


ಸಿನಿಮಾ ತಂಡ ‘ಪುಷ್ಪ 2’ ಸಿನಿಮಾ ಹೊಸ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟರ್‌ನಲ್ಲಿ ಕೊಡಲಿ ಹಿಡಿದು ಪುಷ್ಪರಾಜ್​ ಪೋಸ್ ಕೊಟ್ಟಿದ್ದಾರೆ. ‘ಪುಷ್ಪ 2’ ಚಿತ್ರದ ಟೀಸರ್ ಏಪ್ರಿಲ್ 8 ರಂದು ಬಿಡುಗಡೆಯಾಗಲಿದೆ ಎನ್ನುವ ಅಪ್ಡೇಟ್ ಜೊತೆಗೆ ಸಮಯವನ್ನು ಕೂಡ ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.