ʻಭೈರಾದೇವಿʼ ಪ್ರಚಾರಕ್ಕೆ ಚಾಲನೆ..ಆಟೋ ಓಡಿಸಿ ಬೆಂಗಳೂರಿನಲ್ಲಿ ರಾಧಿಕಾ ಕುಮಾರಸ್ವಾಮಿ ಫುಲ್‌ ರೌಂಡ್ಸ್‌

Bhairadevi: ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿರುವ ಹಾಗೂ ನಾಯಕಿಯಾಗೂ ನಟಿಸಿರುವ  ಬಹು ನಿರೀಕ್ಷಿತ "ಭೈರಾದೃವಿ" ಚಿತ್ರ ಅಕ್ಟೋಬರ್ 3 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ನಾಡಹಬ್ಬ ನವರಾತ್ರಿಯ ಮೊದಲ ದಿನವೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ.

Written by - YASHODHA POOJARI | Last Updated : Sep 16, 2024, 10:02 AM IST
  • ರಾಧಿಕಾ ಕುಮಾರಸ್ವಾಮಿ ನಿರ್ಮಿಸಿರುವ ಹಾಗೂ ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ "ಭೈರಾದೃವಿ" ಚಿತ್ರ ಅಕ್ಟೋಬರ್ 3 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.
  • ನಾಡಹಬ್ಬ ನವರಾತ್ರಿಯ ಮೊದಲ ದಿನವೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ.
ʻಭೈರಾದೇವಿʼ ಪ್ರಚಾರಕ್ಕೆ ಚಾಲನೆ..ಆಟೋ ಓಡಿಸಿ ಬೆಂಗಳೂರಿನಲ್ಲಿ ರಾಧಿಕಾ ಕುಮಾರಸ್ವಾಮಿ ಫುಲ್‌ ರೌಂಡ್ಸ್‌ title=

Bhairadevi: ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿರುವ ಹಾಗೂ ನಾಯಕಿಯಾಗೂ ನಟಿಸಿರುವ  ಬಹು ನಿರೀಕ್ಷಿತ "ಭೈರಾದೃವಿ" ಚಿತ್ರ ಅಕ್ಟೋಬರ್ 3 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ನಾಡಹಬ್ಬ ನವರಾತ್ರಿಯ ಮೊದಲ ದಿನವೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ.

ಬಿಡುಗಡೆ ದಿನಾಂಕ ಘೋಷಣೆ ಯಾಗಿರುವುದರಿಂದ ರಾಧಿಕಾ ಕುಮಾರಸ್ವಾಮಿ ಅವರು ಇತ್ತೀಚಿಗೆ ಅವರ ನಿವಾಸದ ಬಳಿ "ಭೈರಾದೇವಿ" ಚಿತ್ರದ ಪ್ರಚಾರದ ಮೊದಲ ಹೆಜ್ಜೆಯಾಗಿ ಟ್ಯಾಬ್ಲೊ ಹಾಗೂ ಆಟೋ ಪ್ರಚಾರಕ್ಕೆ ಚಾಲನೆ ನೀಡಿದರು. ರಾಧಿಕಾ ಕುಮಾರಸ್ವಾಮಿ ಅವರು ಸ್ವತಃ ತಾವೇ ಆಟೋ ಚಾಲನೆ ಮಾಡಿದ್ದು ವಿಶೇಷವಾಗಿತ್ತು. ಈ ಸಮಾರಂಭದಲ್ಲಿ ಹಲವಾರು ಸಂದರ್ಭದಲ್ಲಿ ಹಲವು ಚಾಲಕು ಹಾಜರ್‌ ಆಗಿದ್ದರು, ಇದರಲ್ಲಿ ಮಹಿಳಾ ಹಾಗೂ ಪುರುಷ ಸೇರಿದಂತೆ 100 ಆಟೋ ಚಾಲಕರು ಉಪಸ್ಥಿತರಿದ್ದರು. "ಭೈರಾದೇವಿ" ಚಿತ್ರದ ಪೋಸ್ಟರ್ ವುಳ್ಳ ಟ್ಯಾಬ್ಲೊ ಹಾಗೂ ಆಟೋಗಳು ರಾಜ್ಯಾದ್ಯಂತ ಸಂಚರಿಸಲಿದೆ.    

 ಶ್ರೀಜೈಈ ಚಿತ್ರವನ್ನು ನಿರ್ದೇಶಣ ಮಾಡಿದ್ದು,  ರವಿರಾಜ್ ಹಾಗೂ ಯಾದವ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜೆ.ಎಸ್.ವಾಲಿ ಛಾಯಾಗ್ರಹಣ, ಕೆ.ಕೆ.ಸೆಂಥಿಲ್ ಪ್ರಸಾದ್ ಸಂಗೀತ ನಿರ್ದೇಶನ ಹಾಗೂ ರವಿಚಂದ್ರನ್ ಅವರ ಸಂಕಲನವಿರುವ "ಭೈರಾದೇವಿ" ಚಿತ್ರದ ತಾರಾಬಳಗದಲ್ಲಿ ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ರವಿಶಂಕರ್, ರಂಗಾಯಣ ರಘು ಮುಂತಾದವರಿದ್ದಾರೆ. .

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News