ರಾಧಿಕಾ ಕುಮಾರಸ್ವಾಮಿ ನಟಿಸುತ್ತಿರುವ ಸಪ್ತಭಾಷೆಯ `ಅಜಾಗ್ರತ` ಚಿತ್ರದ ಶೂಟಿಂಗ್ ಆರಂಭ
Radhika Kumarswamy : ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ `ಅಜಾಗ್ರತ` ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು.
Ajagratha : ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.
ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾವ್ ರಮೇಶ್, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ-Shruti Haasan : ಕಮಲ್ ಪುತ್ರಿಯ ಅಂಗಾಂಗ ವೈಭೋಗ ದರ್ಶನ..! ಫೋಟೋಸ್ ನೋಡಿ
ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರವಿರಾಜ್ ನಿರ್ಮಿಸುತ್ತಿದ್ದಾರೆ. ಎಂ.ಶಶಿಧರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಏಳು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಡಬ್ ಮಾಡದೆ, ಆಯಾ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ನಡೆಯಲಿರುವುದು ಈ ಚಿತ್ರದ ವಿಶೇಷ.
ಇದನ್ನೂ ಓದಿ-ʼಬಜಾರ್ ಹುಡ್ಗʼನ ಭರ್ಜರಿ ಬಾಡಿ ಲುಕ್..! ಸಿಕ್ಸ್ ಪ್ಯಾಕ್ಸ್‌ನಲ್ಲಿ ಮಿಂಚಿದ ಧನ್ವೀರ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ