Ragini Dwivedi : ರಾಗಿಣಿ ದ್ವಿವೇದಿಯ ‘ಬಿಂಗೊ’ ಸಿನಿಮಾಗೆ ಸಚಿವ ವಿ.ಸೋಮಣ್ಣ ಕ್ಲಾಪ್‌

Ragini Dwivedi New Movie: ಸ್ಯಾಂಡಲ್‌ವುಡ್‌ನ ಸುಂದರ ನಟಿಯರಲ್ಲಿ ಒಬ್ಬರು ರಾಗಿಣಿ ದ್ವಿವೇದಿ. ತಮ್ಮ ಅಭಿನಯದ ಮೂಲಕ ಜನರ ಮನಗೆದ್ದ ನಟಿ ರಾಗಿಣಿ ಮತ್ತೊಂದು ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಮುಹೂರ್ತ ಸಮಾರಂಭ ಕೂಡ ನೆರವೇರಿದೆ.  

Written by - Chetana Devarmani | Last Updated : Nov 14, 2022, 10:53 AM IST
  • ಸ್ಯಾಂಡಲ್‌ವುಡ್‌ನ ಸುಂದರ ನಟಿಯರಲ್ಲಿ ಒಬ್ಬರು ರಾಗಿಣಿ ದ್ವಿವೇದಿ
  • ನಟಿ ರಾಗಿಣಿ ಮತ್ತೊಂದು ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ
  • ಈ ಚಿತ್ರದ ಮುಹೂರ್ತ ಸಮಾರಂಭ ಕೂಡ ನೆರವೇರಿದೆ
Ragini Dwivedi : ರಾಗಿಣಿ ದ್ವಿವೇದಿಯ ‘ಬಿಂಗೊ’ ಸಿನಿಮಾಗೆ ಸಚಿವ ವಿ.ಸೋಮಣ್ಣ ಕ್ಲಾಪ್‌  title=
ನಟಿ ರಾಗಿಣಿ

Ragini Dwivedi New Movie: ಸ್ಯಾಂಡಲ್‌ವುಡ್‌ನ ಸುಂದರ ನಟಿಯರಲ್ಲಿ ಒಬ್ಬರು ರಾಗಿಣಿ ದ್ವಿವೇದಿ. ತಮ್ಮ ಅಭಿನಯದ ಮೂಲಕ ಜನರ ಮನಗೆದ್ದ ನಟಿ ರಾಗಿಣಿ ಮತ್ತೊಂದು ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಸದ್ಯ ತುಪ್ಪದ ಹುಡುಗಿ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಇದರ ಜೊತೆ ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ನಿರ್ಮಿಸುತ್ತಿರುವ, ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಸಿನಿಮಾವೊಂದಕ್ಕೆ ರಾಗಿಣಿ ದ್ವಿವೇದಿ ಸಹಿ ಹಾಕಿದ್ದಾರೆ. ಈ ಚಿತ್ರದ ಮುಹೂರ್ತ ಸಮಾರಂಭ ಕೂಡ ನೆರವೇರಿದೆ. ಆರ್ ಕೆ ಚಂದನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ "ಬಿಂಗೊ" ಚಿತ್ರದ ಮುಹೂರ್ತ ಸಮಾರಂಭ ನಾಗರಭಾವಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿತು. 

ಇದನ್ನೂ ಓದಿ: ಮತ್ತೆ ಒಂದಾಗ್ತಾರಾ ಸಮಂತಾ - ನಾಗ ಚೈತನ್ಯ? ಫ್ಯಾನ್ಸ್‌ಗೆ ಸಿಕ್ತು ಗುಡ್ ನ್ಯೂಸ್!

ಮೊದಲ ಸನ್ನಿವೇಶಕ್ಕೆ ನಟ ವಸಿಷ್ಠ ಸಿಂಹ ಆರಂಭಫಲಕ ತೋರಿದರು. ಸಚಿವ ವಿ.ಸೋಮಣ್ಣ ಅವರು ಕ್ಯಾಮೆರಾ ಚಾಲನೆ ಮಾಡಿದರು. ಸಚಿವರಾದ ಮುನಿರತ್ನ ಮುಂತಾದ ಗಣ್ಯರು ಚಿತ್ರತಂಡಕ್ಕೆ ಶುಭ ಕೋರಿದರು. "ಬಿಂಗೊ" ನನ್ನ ನಿರ್ದೇಶನದ ಎರಡನೇ ಚಿತ್ರ. ನನ್ನ ನಿರ್ದೇಶನದ ಮೊದಲ ಚಿತ್ರ "ಶಂಭೋ ಶಿವ ಶಂಕರ" ಸದ್ಯದಲ್ಲೇ ಬಿಡುಗಡೆಯಾಗಲಿದೆ. "ಬಿಂಗೊ" ಪದಕ್ಕೆ ಹಲವು ಅರ್ಥಗಳಿದೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಎಂದು ಹೇಳಬಹುದು. ಆರು ಮುಖ್ಯಪಾತ್ರಗಳಿರುತ್ತದೆ. ಅದರಲ್ಲಿ ಅತೀ ಮುಖ್ಯಪಾತ್ರದಲ್ಲಿ ರಾಗಿಣಿ ಅವರು ಅಭಿನಯಿಸುತ್ತಿದ್ದಾರೆ. 

ಆರ್ ಕೆ ಚಂದನ್ ನಾಯಕನಾಗಿ, ರಕ್ಷಾ ನಿಂಬರ್ಗಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್, ವಿದ್ಯಾ, ಕುಮಾರ್ ಮುಂತಾದ ಕಲಾವಿದರು "ಬಿಂಗೊ" ನಲ್ಲಿರುತ್ತಾರೆ. ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಶಂಕರ್ ಕೋನಮಾನಹಳ್ಳಿ ವಿವರಣೆ ನೀಡಿದರು. ಈ ಚಿತ್ರದ ಪಾತ್ರ ತುಂಬಾ ಚೆನ್ನಾಗಿದೆ. ಪಾತ್ರದ ಕುರಿತು ಹೆಚ್ಚು ಹೇಳುವ ಹಾಗಿಲ್ಲ. ಮುಂದೆ ನನ್ನ ಪಾತ್ರದ ಬಗ್ಗೆ ಮಾಹಿತಿ ನೀಡುತ್ತೀನಿ. ಒಟ್ಟಿನಲ್ಲಿ ನಾನು ಈ ಹಿಂದೆ ಮಾಡಿರುವ ಪಾತ್ರಗಳಿಗಿಂತ ಸ್ವಲ್ಪ ಭಿನ್ನ ಅಂತ ಹೇಳಬಹುದು. ಹೊಸ ನಿರ್ದೇಶಕರ ಜೊತೆ ಕೆಲಸ ಮಾಡಲು ಖುಷಿಯಾಗುತ್ತದೆ ಎಂದರು ನಟಿ ರಾಗಿಣಿ ದ್ವಿವೇದಿ.

ಇದನ್ನೂ ಓದಿ: ಸಾನಿಯಾ - ಶೋಯೆಬ್ ವಿಚ್ಛೇದನ ವಿಚಾರದಲ್ಲಿ ಬಿಗ್‌ ಟ್ವಿಸ್ಟ್!?

ಕೆಂಪೇಗೌಡ, ವೀರಮದಕರಿ ಸೇರಿದಂತೆ ಅನೇಕ ಹಿಟ್ ಸಿನಿಮಾಗಳಲ್ಲಿ ರಾಗಿಣಿ ಅಭಿನಯಿಸಿದ್ದಾರೆ. ಗಾಂಧಿಗಿರಿ, ಒನ್ ಟು ಒನ್, ಕರ್ವ 3, ಜಾನಿವಾಕರ್ ಸೇರಿದಂತೆ ಇದೀಗ ಬಿಂಗೋ ಚಿತ್ರದಲ್ಲಿಯೂ ಪ್ರಮುಖ ಪಾತ್ರವೊಂದರಲ್ಲಿ ರಾಗಿಣಿ ಮಿಂಚುತ್ತಿದ್ದಾರೆ. ಕೊರೊನಾ ವೇಳೆಯಲ್ಲಿ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಿದ ರಾಗಿಣಿ ಎಲ್ಲರ ಹೃದಯ ಗೆದ್ದಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News