Bingo movie: "ಶಂಭೋ ಶಿವ ಶಂಕರ" ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ - ನಾಯಕಿಯಾಗಿ ನಟಿಸಿರುವ "ಬಿಂಗೊ" ಚಿತ್ರದ ಡಬ್ಬಿಂಗ್ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ  ಮುಕ್ತಾಯವಾಗಿದೆ. 


COMMERCIAL BREAK
SCROLL TO CONTINUE READING

ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಮೇ 24 ರಂದು ನಟಿ ರಾಗಿಣಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ "ಬಿಂಗೊ" ಚಿತ್ರತಂಡ ರಾಗಿಣಿ ಅವರಿಗೆ ಶುಭಾಶಯ ತಿಳಿಸಿದೆ.      


ಇದನ್ನೂ ಓದಿ: Actress Meera : 42ನೇ ವಯಸ್ಸಿನಲ್ಲಿ 3ನೇ ಮದುವೆಯಾದ ಖ್ಯಾತ ನಟಿ !


ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ ,  ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. 


ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ udv ಸಂಕಲನ "ಬಿಂಗೊ" ಚಿತ್ರಕ್ಕಿದೆ.


ಇದನ್ನೂ ಓದಿ: ಜೈಲರ್ 2 ಚಿತ್ರಕ್ಕೆ ರಜನಿಕಾಂತ್ ಕೇಳಿದ ಸಂಭಾವನೆ ಎಷ್ಟು ಗೊತ್ತಾ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.