Ragini Dwivedi: ಈ ಹಿಂದೆ "ಶಂಭೋ ಶಿವ ಶಂಕರ" ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ - ನಾಯಕಿಯಾಗಿ ನಟಿಸಿರುವ "ಬಿಂಗೊ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ.             


COMMERCIAL BREAK
SCROLL TO CONTINUE READING

ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಆರ್ ಕೆ ಚಂದನ್ ,  ರಾಗಿಣಿ ದ್ವಿವೇದಿ, ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. 


ಇದನ್ನೂ ಓದಿ: ಭಾರತದ ಅತ್ಯಂತ ಶ್ರೀಮಂತ ಡಾನ್ಸ್‌ ಕೊರಿಯೋಗ್ರಫರ್‌ ಯಾರು ಗೊತ್ತೆ..! 1 ಸಾಂಗ್‌ಗೆ 50 ಲಕ್ಷ ರೂ..


ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಸುಮಧುರವಾಗಿ ಮೂಡಿಬಂದಿದೆ. ಸದ್ಯದಲ್ಲೇ ಅದ್ದೂರಿ ಸಮಾರಂಭ ಆಯೋಜಿಸಿ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.


ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ udv ಸಂಕಲನ "ಬಿಂಗೊ" ಚಿತ್ರಕ್ಕಿದೆ.


ಇದನ್ನೂ ಓದಿ: ನಟಿ ಸೌಂದರ್ಯ ಅವರ ಪತಿ ಯಾರು.. ಈಗ ಹೇಗಿದ್ದಾರೆ ಗೊತ್ತಾ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.