Toby Movie: ರಾಜ್ ಬಿ ಶೆಟ್ಟಿ ಅಭಿನಯದ ʼಟೋಬಿʼ ಚಿತ್ರ ರೀಲಿಸ್‌ ಗೆ ಡೆಟ್‌ ಫಿಕ್ಸ್..!

Raj B Shetty New Movie: ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ "ಟೋಬಿ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. 

Written by - Zee Kannada News Desk | Last Updated : Jun 13, 2023, 05:25 PM IST
  • ರಾಜ್ ಬಿ ಶೆಟ್ಟಿ ಅಭಿನಯದ ʼಟೋಬಿʼ ಚಿತ್ರ ರೀಲಿಸ್‌ ಗೆ ಡೆಟ್‌ ಫಿಕ್ಸ್
  • ʼಟೋಬಿʼ ಚಿತ್ರ ಮೂಲಕ ರಾಜ್ ಬಿ ಶೆಟ್ಟಿ ತೆರೆ ಮೇಲೆ
  • ರಾಜ್ ಬಿ ಶೆಟ್ಟಿ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ
Toby Movie: ರಾಜ್ ಬಿ ಶೆಟ್ಟಿ ಅಭಿನಯದ ʼಟೋಬಿʼ ಚಿತ್ರ ರೀಲಿಸ್‌ ಗೆ ಡೆಟ್‌ ಫಿಕ್ಸ್..!  title=

ಬೆಂಗಳೂರು: ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ "ಟೋಬಿ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. 

"ಟೋಬಿ" ಚಿತ್ರಕ್ಕೆ "ಮಾರಿ ಮಾರಿ ..ಮಾರಿಗೆ ದಾರಿ" ಎಂಬ ಅಡಿಬರಹವಿದೆ. ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. 

ಇದನ್ನೂ ಓದಿ: Kazan Khan: ʼಹಬ್ಬʼ ಸಿನಿಮಾದಲ್ಲಿ ನಟಿಸಿರುವ ಖ್ಯಾತ ಖಳನಟ ಕಝಾನ್​ ಖಾನ್​ ಇನ್ನಿಲ್ಲ!

ರಾಜ್ ಬಿ ಶೆಟ್ಟಿ  ಈವರೆಗಿನ ಚಿತ್ರಗಳ ಪೈಕಿ "ಟೋಬಿ" ಬಿಗ್ ಬಜೆಟ್ ನ ಚಿತ್ರವಾಗಿದೆ. ಲೈಟರ್ ಬುದ್ಧ ಫಿಲಂಸ್, ಅಗಸ್ತ್ಯ ಫಿಲ್ಮ್ಸ್ ಹಾಗೂ ಕಾಫಿ ಗ್ಯಾಂಗ್ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ರವಿ ರೈ ಕಳಸ ಈ ಚಿತ್ರದ ನಿರ್ಮಾಪಕರು. ಶಾಮಿಲ್ ಬಂಗೇರ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಮೂಲಕಥೆ ಟಿ.ಕೆ ದಯಾನಂದ್ ಅವರದು.

ಇದನ್ನೂ ಓದಿ: Darling Krishna : ʼಹ್ಯಾಪಿ ಬರ್ತಡೇ ಮೈ ಡಾರ್ಲಿಂಗ್ ಕೃಷ್ಣ; ಆದಿಗೆ ಶುಭಕೋರಿದ ‘ಲವ್ ಮಾಕ್ಟೇಲ್ ನಿಧಿಮಾ!

ರಾಜ್ ಬಿ ಶೆಟ್ಟಿ ರಚೆನೆ ಹಾಗೂ ಬಾಸಿಲ್ ಅವರ ನಿರ್ದೇಶನ ಈ ಚಿತ್ರಕ್ಕಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.‌ ಮಿಥುನ್ ಮುಕುಂದನ್ ಸಂಗೀತ ನಿರ್ದೇಶನ, ಪ್ರವೀಣ್ ಶ್ರೀಯನ್ ಛಾಯಾಗ್ರಹಣ -  ಸಂಕಲನ ಹಾಗೂ ಅರ್ಜುನ್ ರಾಜ್ - ರಾಜಶೇಖರ್ ಅವರ ಸಾಹಸ ನಿರ್ದೇಶನ "ಟೋಬಿ" ಚಿತ್ರಕಿದ್ದು,  ರಾಜ್ ಬಿ ಶೆಟ್ಟಿ, ಸಂಯುಕ್ತ ಹೊರನಾಡು, ಚೈತ್ರಾ ಆಚಾರ್, ಗೋಪಾಲಕೃಷ್ಣ ದೇಶಪಾಂಡೆ, ದೀಪಕ್ ರಾಜ್ ಶೆಟ್ಟಿ  ಮುಂತಾದವರು  ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News