Toby Movie: ರಾಜ್ ಬಿ ಶೆಟ್ಟಿ ಅಭಿನಯದ ʼಟೋಬಿʼ ಚಿತ್ರ ರೀಲಿಸ್ ಗೆ ಡೆಟ್ ಫಿಕ್ಸ್..!
Raj B Shetty New Movie: ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ `ಟೋಬಿ` ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ.
ಬೆಂಗಳೂರು: ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ "ಟೋಬಿ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ.
"ಟೋಬಿ" ಚಿತ್ರಕ್ಕೆ "ಮಾರಿ ಮಾರಿ ..ಮಾರಿಗೆ ದಾರಿ" ಎಂಬ ಅಡಿಬರಹವಿದೆ. ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ.
ಇದನ್ನೂ ಓದಿ: Kazan Khan: ʼಹಬ್ಬʼ ಸಿನಿಮಾದಲ್ಲಿ ನಟಿಸಿರುವ ಖ್ಯಾತ ಖಳನಟ ಕಝಾನ್ ಖಾನ್ ಇನ್ನಿಲ್ಲ!
ರಾಜ್ ಬಿ ಶೆಟ್ಟಿ ಈವರೆಗಿನ ಚಿತ್ರಗಳ ಪೈಕಿ "ಟೋಬಿ" ಬಿಗ್ ಬಜೆಟ್ ನ ಚಿತ್ರವಾಗಿದೆ. ಲೈಟರ್ ಬುದ್ಧ ಫಿಲಂಸ್, ಅಗಸ್ತ್ಯ ಫಿಲ್ಮ್ಸ್ ಹಾಗೂ ಕಾಫಿ ಗ್ಯಾಂಗ್ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ರವಿ ರೈ ಕಳಸ ಈ ಚಿತ್ರದ ನಿರ್ಮಾಪಕರು. ಶಾಮಿಲ್ ಬಂಗೇರ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಮೂಲಕಥೆ ಟಿ.ಕೆ ದಯಾನಂದ್ ಅವರದು.
ಇದನ್ನೂ ಓದಿ: Darling Krishna : ʼಹ್ಯಾಪಿ ಬರ್ತಡೇ ಮೈ ಡಾರ್ಲಿಂಗ್ ಕೃಷ್ಣ; ಆದಿಗೆ ಶುಭಕೋರಿದ ‘ಲವ್ ಮಾಕ್ಟೇಲ್ ನಿಧಿಮಾ!
ರಾಜ್ ಬಿ ಶೆಟ್ಟಿ ರಚೆನೆ ಹಾಗೂ ಬಾಸಿಲ್ ಅವರ ನಿರ್ದೇಶನ ಈ ಚಿತ್ರಕ್ಕಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ. ಮಿಥುನ್ ಮುಕುಂದನ್ ಸಂಗೀತ ನಿರ್ದೇಶನ, ಪ್ರವೀಣ್ ಶ್ರೀಯನ್ ಛಾಯಾಗ್ರಹಣ - ಸಂಕಲನ ಹಾಗೂ ಅರ್ಜುನ್ ರಾಜ್ - ರಾಜಶೇಖರ್ ಅವರ ಸಾಹಸ ನಿರ್ದೇಶನ "ಟೋಬಿ" ಚಿತ್ರಕಿದ್ದು, ರಾಜ್ ಬಿ ಶೆಟ್ಟಿ, ಸಂಯುಕ್ತ ಹೊರನಾಡು, ಚೈತ್ರಾ ಆಚಾರ್, ಗೋಪಾಲಕೃಷ್ಣ ದೇಶಪಾಂಡೆ, ದೀಪಕ್ ರಾಜ್ ಶೆಟ್ಟಿ ಮುಂತಾದವರು ತಾರಾಬಳಗದಲ್ಲಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.