ನವದೆಹಲಿ : ಬಾಲಿವುಡ್ ನಟ ಮತ್ತು ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ವಿರುದ್ಧ 1996 ರಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡದೊಂದಿಗೆ ಶಿಕ್ಷೆಯನ್ನು ವಿಧಿಸಿದೆ. ವರದಿಗಳ ಪ್ರಕಾರ ಮತಗಟ್ಟೆ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಬಬ್ಬರ್ ಅವರನ್ನು ಜೈಲಿಗೆ ಕಳುಹಿಸಲಾಗಿದೆ.
ರಾಜ್ ಬಬ್ಬರ್ ಅವರಿಗೆ ನ್ಯಾಯಾಲಯವು 8,500 ರೂಪಾಯಿ ದಂಡವನ್ನೂ ವಿಧಿಸಿದೆ.ಸರ್ಕಾರಿ ಕರ್ತವ್ಯಗಳಲ್ಲಿ ಹಸ್ತಕ್ಷೇಪ ಮತ್ತು ದೈಹಿಕ ಹಲ್ಲೆ ನಡೆಸಿದ ಆರೋಪದಲ್ಲಿ ರಾಜ್ ಬಬ್ಬರ್ ಅವರನ್ನು ತಪ್ಪಿತಸ್ಥರೆಂದು ಗುರುತಿಸಲಾಗಿದೆ.
ಈ ಘಟನೆ 1996 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಡೆದಿತ್ತು. ಉತ್ತರ ಪ್ರದೇಶದ ವಜೀರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎರಡು ದಶಕಗಳ ಹಿಂದೆ ಬಬ್ಬರ್ ವಿರುದ್ಧ ಚುನಾವಣಾಧಿಕಾರಿಯೊಬ್ಬರು ದೂರು ದಾಖಲಿಸಿದ್ದರು. ಮಾಧ್ಯಮ ವರದಿಗಳ ಪ್ರಕಾರ, ರಾಜ್ ಬಬ್ಬರ್ ನಿಂದ ಹಲ್ಲೆಗೊಳಗಾದ ಚುನಾವಣಾ ಅಧಿಕಾರಿಯನ್ನು ಶ್ರೀ ಕೃಷ್ಣ ಸಿಂಗ್ ರಾಣಾ ಎಂದು ಹೆಸರಿಸಲಾಗಿದೆ.
ಇದನ್ನೂ ಓದಿ : ಪಿಎಸ್ಐ ಪ್ರಕರಣ : ಎಡಿಜಿಪಿ ಅಮೃತ್ ಪಾಲ್ ಹಠದಿಂದ ಸರ್ಕಾರಕ್ಕೆ ಗಂಡಾತರ!
ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ಹಲ್ಲೆ ಮಾಡಿದ ಆರೋಪದ ಮೇಲೆ ರಾಜ್ ಬಬ್ಬರ್ ಅವರನ್ನು ವಿಶೇಷ ನ್ಯಾಯಾಲಯ ಗುರುವಾರದಂದು ದೋಷಿ ಎಂದು ತೀರ್ಪು ನೀಡಿದೆ. ಸರ್ಕಾರಿ ಕರ್ತವ್ಯಗಳಿಗೆ ಅಡ್ಡಿಪಡಿಸಿದ ಆರೋಪ ಮತ್ತು ದೈಹಿಕ ಹಲ್ಲೆ ಆರೋಪ ಹೊರಿಸಲಾಗಿದ್ದು, ನಂತರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದೆ.
ರಾಣಾ ಅವರು ನೀಡಿದ ದೂರಿನ ಪ್ರಕಾರ, ಬಬ್ಬರ್ ಮತ್ತು ಅವರ ಕೆಲವು ಬೆಂಬಲಿಗರು ಲೋಕಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಗೆ ನುಗ್ಗಿ ದೈಹಿಕವಾಗಿ ಹಲ್ಲೆ ನಡೆಸಿದ್ದರು.ಇದೆ ವೇಳೆ ಚುನಾವಣಾ ಅಧಿಕಾರಿಗಳ ಗಂಟಲು ಹಾಗೂ ಮೂಗಿಗೆ ಗಾಯಗಳಾಗಿದ್ದವು.
ರಾಜ್ ಬಬ್ಬರ್ ಅವರು ದಲಾಲ್, ದಿ ಗ್ಯಾಂಬ್ಲರ್, ಅಂದಾಜ್, ಆಂಖೇನ್, ಗುಂಡಗರ್ಡಿ ಮತ್ತು ಜಿದ್ದಿ ಚಲನಚಿತ್ರಗಳಲ್ಲಿನ ಪಾತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದಾರೆ.ಬಬ್ಬರ್ ಆರಂಭದಲ್ಲಿ 1989 ರಲ್ಲಿ ಜನತಾ ದಳಕ್ಕೆ ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು ಮತ್ತು ನಂತರ ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲೂ ಸಂಸದರಾಗಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.