ಖ್ಯಾತ ಗಾಯಕ ಮನೋಜವಂ ಆತ್ರೇಯ ಸಾರಥ್ಯದಲ್ಲಿ "ರಾಜ್ ಗೀತ ನಮನ"

Raj Geeta Namana: ಈ ಬಾರಿ "ರಾಜ್ ಗೀತ ನಮನ" ಎಂಬ ಹೆಸರಿನಲ್ಲಿ ಖ್ಯಾತ ಗಾಯಕ ಮನೋಜವಂ ಆತ್ರೇಯ ಅವರ ಸಾರಥ್ಯದಲ್ಲಿ ಹೆಸರಾಂತ ಗಾಯಕರು ಡಾ.ರಾಜ್ ಅವರ ಜನಪ್ರಿಯ ಗೀತೆಗಳನ್ನು ಹಾಡಲಿದ್ದಾರೆ.

Written by - YASHODHA POOJARI | Last Updated : Apr 20, 2024, 12:47 PM IST
  • "ರಾಜ್ ಗೀತ ನಮನ" ಕಾರ್ಯಕ್ರಮ
  • ಖ್ಯಾತ ಗಾಯಕ ಮನೋಜವಂ ಆತ್ರೇಯ ಸಾರಥ್ಯ
  • "ಮೈ ನೇಮ್ ಇಸ್ ರಾಜ್"(ಭಾಗ 3) ಕಾರ್ಯಕ್ರಮ
ಖ್ಯಾತ ಗಾಯಕ ಮನೋಜವಂ ಆತ್ರೇಯ ಸಾರಥ್ಯದಲ್ಲಿ "ರಾಜ್ ಗೀತ ನಮನ"  title=

Raj Geeta Namana: ಏಪ್ರಿಲ್ 24, ನಟ ಸಾರ್ವಭೌಮ ಡಾ.ರಾಜಕುಮಾರ್ ಅವರ 95 ನೇ ಹುಟ್ಟುಹಬ್ಬ. ಅಂದು ಸಂಜೆ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ "ಮೈ ನೇಮ್ ಇಸ್ ರಾಜ್"(ಭಾಗ 3) ಕಾರ್ಯಕ್ರಮ ನಡೆಯಲಿದೆ. ಸ್ವಾಮಿ ವಿವೇಕಾನಂದ ಟ್ರಸ್ಟ್ ಹಾಗೂ ಟೀಮ್ ಆತ್ರೇಯ ಈ ಸಮಾರಂಭವನ್ನು ಆಯೋಜಿಸಿದೆ. ಈ ಬಾರಿ " ರಾಜ್ ಗೀತ ನಮನ" ಎಂಬ ಹೆಸರಿನಲ್ಲಿ ಖ್ಯಾತ ಗಾಯಕ ಮನೋಜವಂ ಆತ್ರೇಯ ಅವರ ಸಾರಥ್ಯದಲ್ಲಿ ಹೆಸರಾಂತ ಗಾಯಕರು ಡಾ.ರಾಜ್ ಅವರ ಜನಪ್ರಿಯ ಗೀತೆಗಳನ್ನು ಹಾಡಲಿದ್ದಾರೆ. ಈ ಕಾರ್ಯಕ್ರಮದ  ಕುರಿತು  ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ವಿವರಣೆ ನೀಡಿದರು.

ನಾನು ಹಾಗೂ ನನ್ನ ಕುಟುಂಬದವರು ಡಾ.ರಾಜಕುಮಾರ್ ಅವರ ಅಭಿಮಾನಿಗಳು. ಅವರ ಹುಟ್ಟುಹಬ್ಬದ ದಿನ ಏನಾದರೂ ಸಮಾರಂಭ ಮಾಡಬೇಕೆಂದುಕೊಂಡು ಟೀಮ್ ಆತ್ರೇಯ ತಂಡದಿಂದ ( Team Aatreya ) ಪ್ರತಿವರ್ಷ "ಮೈ ನೇಮ್ ಇಸ್ ರಾಜ್" ಎಂಬ ಹೆಸರಿನಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದ್ದೇವೆ. ಇದರ ಜೊತೆಗೆ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇವೆ. ಈ ಬಾರಿ ನಮ್ಮೊಂದಿಗೆ ಸ್ವಾಮಿ ವಿವೇಕಾನಂದ ಟ್ರಸ್ಟ್ ಕೂಡ ಜೊತೆಯಾಗಿದೆ. ಏಪ್ರಿಲ್ 24 ರ ಸಂಜೆ ನಗರದ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ "ಮೈ ನೇಮ್ ಇಸ್ ರಾಜ್" ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಕಣ್ಣು ಕುಕ್ಕುವ ಬೆಲೆಗೆ ಪುಷ್ಪ 2 ಥಿಯೇಟ್ರಿಕಲ್ ರೈಟ್ಸ್ ಮಾರಾಟ.. ರಿಲೀಸ್‌ ಗೂ ಮೊದಲೇ 1000 ಕೋಟಿ ಗಳಿಕೆ!

"ಸರಿಗಮಪ" ಖ್ಯಾತಿಯ ಚನ್ನಪ್ಪ ಹುದ್ದರ್ , ಪೃಥ್ವಿ ಭಟ್, ಮೈತ್ರಿ ಅಯ್ಯರ್ ಸೇರಿದಂತೆ ಹೆಸರಾಂತ ಗಾಯಕರು ಅಂದು ಹಾಡಲಿದ್ದಾರೆ. ಹನ್ನೆರಡಕ್ಕೂ ಅಧಿಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ವಾದ್ಯ ಕಲಾವಿದರು ಈ ಕಾರ್ಯಕ್ರಮದಲ್ಲಿರುತ್ತಾರೆ. ಡಾ.ರಾಜಕುಮಾರ್ ಅವರು ಸಿನಿಮಾ, ಧ್ವನಿಸುರುಳಿ ಸೇರಿದಂತೆ 5000 ಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದಾರೆ. ಡಾ.ರಾಜ್, ಕೇವಲ ಹಾಡುಗಾರರಷ್ಟೇ ಆಗಿರಲಿಲ್ಲ. ಕೆಲವು ವಾದ್ಯಗಳನ್ನು ನುಡಿಸುತ್ತಿದ್ದರು. ಅವರೊಬ್ಬ ಸರಸ್ವತಿ ಪುತ್ರ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ.‌ ಅದಕ್ಕೆ ಅವರು ಹಾಡಿರುವ ಮಾಣಿಕ್ಯ ವೀಣಾ, ನಾದಮಯ, ಮೇಘ ಬಂತು ಮೇಘ ಮುಂತಾದ  ಹಾಡುಗಳೆ ಸಾಕ್ಷಿ.‌ ಈ ಬಾರಿ "ಡಾ ರಾಜ್ ಗೀತ ನಮನ" ಎಂಬ ಹೆಸರಲ್ಲಿ ಅವರು ಹಾಡಿರುವ ಸಂಗೀತಮಯ ಹಾಡುಗಳನ್ನು ಪ್ರಸ್ತುತ ಪಡಿಸುತ್ತಾ ಅಣ್ಣವ್ರಲ್ಲಿದ್ದ ಒಬ್ಬ ಶ್ರೇಷ್ಠ ಸಂಗೀತಗಾರನನ್ನು ಗೌರವಿಸಿ ಈ ಕಾರ್ಯಕ್ರಮವನ್ನು ಸಮರ್ಪಿಸುತಿದ್ದೇವೆ. ಹೆಚ್ಚಿನ ಜನರೂ ಈ ಕಾರ್ಯಕ್ರಮಕ್ಕೆ ಬಂದು ಯಶಸ್ವಿಗೊಳಿಸಬೇಕೆಂದು ಟೀಮ್ ಆತ್ರೇಯ ಪರವಾಗಿ ಮನೋಜವಂ ಆತ್ರೇಯ ತಿಳಿಸಿದರು. 

ನಾನು ಸಹ "ಮೈ ನೇಮ್ ಇಸ್ ರಾಜ್" ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೆ ಎಂದು ಮಾತಾನಾಡಿದ ಸ್ವಾಮಿ ವಿವೇಕಾನಂದ ಟ್ರಸ್ಟ್ ನ ಪಾಟೀಲ್ ಅವರು, ಈ ಬಾರಿ ನಾವು ಮನೋಜವಂ ಅವರ ಜೊತೆಯಾಗಿದ್ದೆವೆ. ಡಾ.ರಾಜ್ ಕುಟುಂಬದ ಸದಸ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. ಸಾಕಷ್ಟು ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಟಿಕೇಟ್ ಗಳು ಬುಕ್ ಮೈ ಶೋ ನಲ್ಲಿ ಲಭ್ಯವಿದೆ. ನಮ್ಮ ಸಮಾರಂಭಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು. ಟೀಂ ಆತ್ರೇಯ ತಂಡದ ಮನೋಜ್ ಹೊಸಮನಿ, ಶರಣ್, ವೇದಾಂತ್ ನರಸಿಂಹ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ದೀಪಿಕಾ ಪಡುಕೋಣೆ ಗರ್ಭಿಣಿ ಆಗಿಯೇ ಇಲ್ಲ.. ಪ್ರಗ್ನೆಂಟ್‌ ವಿಚಾರ ಸುಳ್ಳಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News