ಜೈಲಿನಿಂದ ಹೊರ ಬಂದ ನಂತರ ಮೊದಲ ಬಾರಿಗೆ ಪತ್ನಿ shilpa shetty ಜೊತೆ ಕ್ಯಾಮರಾ ಕಣ್ಣಿಗೆ ಬಿದ್ದ ರಾಜ್ ಕುಂದ್ರಾ

ಜುಲೈನಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರ ನಿರ್ಮಾಣ ಮತ್ತು ವಿತರಣೆ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ನಂತರ ಸೆಪ್ಟೆಂಬರ್‌ನಲ್ಲಿ ರಾಜ್‌ ಕುಂದ್ರಾ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದಿದ್ದರು.  

Written by - Ranjitha R K | Last Updated : Nov 9, 2021, 01:28 PM IST
  • ಪತ್ನಿ ಶಿಲ್ಪಾ ಶೆಟ್ಟಿ ಜೊತೆ ಹಿಮಾಚಲ ಪ್ರದೇಶದಲ್ಲಿ ಕಾಣಿಸಿಕೊಂಡ ರಾಜ್ ಕುಂದ್ರಾ
  • ಜೈಲಿನಿಂದ ಹೊರಬಂದ ನಂತರ ಮೊದಲ ಬಾರಿಗೆ ಕ್ಯಾಮೆರಾ ಮುಂದೆ ಕಾಣಿಸಿಕೊಂಡ ರಾಜ್ ಕುಂದ್ರಾ
  • ವೈರಲ್ ಆಗುತ್ತಿವೆ ಶಿಲ್ಪಾ ರಾಜ್ ಕುಂದ್ರಾ ಫೋಟೋಗಳು
ಜೈಲಿನಿಂದ ಹೊರ ಬಂದ ನಂತರ ಮೊದಲ ಬಾರಿಗೆ ಪತ್ನಿ shilpa shetty ಜೊತೆ ಕ್ಯಾಮರಾ ಕಣ್ಣಿಗೆ ಬಿದ್ದ ರಾಜ್ ಕುಂದ್ರಾ   title=
ಪತ್ನಿ ಶಿಲ್ಪಾ ಶೆಟ್ಟಿ ಜೊತೆ ಹಿಮಾಚಲ ಪ್ರದೇಶದಲ್ಲಿ ಕಾಣಿಸಿಕೊಂಡ ರಾಜ್ ಕುಂದ್ರಾ (photo instagram)

ನವದೆಹಲಿ : ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ (Raj Kundra), ಜೈಲಿನಿಂದ ಹೊರಬಂದ ನಂತರ ಹೊರಗಡೆ ಎಲ್ಲೂ ಕಾಣಿಸಿಕೊಂಡಿಲ್ಲ. ಮಾಧ್ಯಮಗಳಿಂದ ಕೂಡಾ ದೂರ ಉಳಿದಿದ್ದರು. ಆದರೆ ಇದೀಗ ಪತ್ನಿ ಶಿಲ್ಪಾ ಶೆಟ್ಟಿ (Shilpa Shetty) ಜೊತೆ ರಾಜ್ ಕುಂದ್ರಾ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದಾರೆ. ಜೈಲಿನಿಂದ ಹೊರಬಂದ ನಂತರ ರಾಜ್ ಕುಂದ್ರಾ ಕ್ಯಾಮೆರಾ ಮುಂದೆ ಬಂದಿದ್ದು ಇದೇ ಮೊದಲು. ಪತ್ನಿ ಶಿಲ್ಪಿ ಶೆಟ್ಟಿ ಜೊತೆಗಿನ ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ (Social media) ಹೆಚ್ಚು ವೈರಲ್ ಆಗುತ್ತಿವೆ. 

ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ : 
ಜುಲೈನಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ (Raj Kundra) ಅವರನ್ನು ಅಶ್ಲೀಲ ಚಿತ್ರ ನಿರ್ಮಾಣ ಮತ್ತು ವಿತರಣೆ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ನಂತರ ಸೆಪ್ಟೆಂಬರ್‌ನಲ್ಲಿ ರಾಜ್‌ ಕುಂದ್ರಾ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದಿದ್ದರು. ಜೈಲಿನಿಂದ ಹೊರ ಬಂದ ನಂತರ ರಾಜ್ ಕುಂದ್ರಾ ಹೊರಗಡೆ ಎಲ್ಲೂ ಕಾಣಿಸಿಕೊಂಡಿಲ್ಲ. ಇದೀಗ ಅವರು ಪತ್ನಿ ಶಿಲ್ಪಾ ಶೆಟ್ಟಿ (Shilpa Shetty) ಜೊತೆ ಹಿಮಾಚಲದಲ್ಲಿರುವ ಜ್ವಾಲಾ ದೇವಿ ಮತ್ತು ಚಾಮುಂಡಾ ದೇವಿ ದೇವಸ್ಥಾನಕ್ಕೆ  ಭೇಟಿ ನೀಡಿದ್ದು, ಅವರಿಬ್ಬರ ಫೋಟೋ ವೈರಲ್ (Viral photo) ಆಗುತ್ತಿವೆ. 

ಇದನ್ನೂ ಓದಿ : ವಿವಾಹದ ನಂತರ ಈ ನಿವಾಸಕ್ಕೆ ಶಿಫ್ಟ್ ಆಗಲಿರುವ ವಿಕ್ಕಿ - ಕತ್ರಿನಾ , ಮನೆ ಬಾಡಿಗೆ ಎಷ್ಟು ಗೊತ್ತಾ ?

ಫೋಟೋಗಳನ್ನು ಹಂಚಿಕೊಂಡಿರುವ ಶಿಲ್ಪಾ ಶೆಟ್ಟಿ :
ಪತಿ ರಾಜ್ ಕುಂದ್ರಾ ಅವರೊಂದಿಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶಿಲ್ಪಾ ಶೆಟ್ಟಿ ವಿವಿಧ ದೇವಾಲಯಗಳ ಫೋಟೋ ಮತ್ತು ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಆದರೆ ಆ ಫೋಟೋಗಳಲ್ಲಿ ರಾಜ್ ಕುಂದ್ರ ಕಾಣಿಸಿಕೊಂಡಿರಲಿಲ್ಲ.  ಈ ಫೋಟೋಗಳು ಮತ್ತು ವೀಡಿಯೊಗಳು ವೈರಲ್ (Viral video) ಆಗುವ ಮೊದಲು, ಶಿಲ್ಪಾ ಶೆಟ್ಟಿ ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. 

ಏನಿದು ಸಂಪೂರ್ಣ  ಪ್ರಕರಣ :
ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ವಿತರಣೆ ಆರೋಪದ ಮೇಲೆ ಬಂಧನಕ್ಕೆ ಒಳಗಾದ ರಾಜ್ ಕುಂದ್ರಾ 60 ದಿನಗಳ ಕಾಲ ಜೈಲಿನಲ್ಲಿದ್ದರು.  60 ದಿನಗಳ ನಂತರ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಪತಿ ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದ ಮೇಲೆ , ಶಿಲ್ಪಿ ಶೆಟ್ಟಿ ದೇವಭೂಮಿಯ ಸಿದ್ಧ ಶಕ್ತಿ ಪೀಠಗಳಿಗೆ ಭೇಟಿ ನೀಡಿದ್ದಾರೆ. 

ಇದನ್ನೂ ಓದಿ : Happy Birthday Anushka: Baahubali ಚಿತ್ರದ 'ದೇವಸೇನಾ' ಮೊದಲ ಪ್ರೀತಿ ಈ ಕನ್ನಡಿಗ ! MMS ಸೋರಿಕೆ ಭಾರಿ ಸುದ್ದಿಯೇ ಮಾಡಿತ್ತು

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News