Rajinikanth Vettaiyan Movie: ರಜನಿಕಾಂತ್ ತಮ್ಮ ಹೊಸ ಚಿತ್ರ ವೆಟ್ಟೈಯಾನ್ ಚಿತ್ರೀಕರಣವನ್ನು ಮುಗಿಸಿದ್ದಾರೆ. ಈ ಚಿತ್ರದ ಮೂಲಕ ಮೂರು ದಶಕಗಳ ನಂತರ ರಜನಿಕಾಂತ್ ಮತ್ತು ಅಮಿತಾಬ್ ಬಚ್ಚನ್ ಮತ್ತೆ ಒಂದಾಗುತ್ತಿದ್ದಾರೆ. ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರು ವೆಟ್ಟೈಯಾನ್ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಚಿತ್ರದ ಸೆಟ್‌ನಲ್ಲಿನ ಕೊನೆಯ ದಿನದಂದು ಚಿತ್ರತಂಡ ರಜನಿಕಾಂತ್‌ ಜೊತೆ ಫೋಟೋ ಶೇರ್‌ ಮಾಡಿದೆ. 


COMMERCIAL BREAK
SCROLL TO CONTINUE READING

ಫೋಟೋದಲ್ಲಿ ಲೆಜೆಂಡರಿ ತಮಿಳು ಸ್ಟಾರ್ ಚಿತ್ರತಂಡದೊಂದಿಗೆ ಪೋಸ್ ನೀಡಿದ್ದಾರೆ. ಚಿತ್ರದಲ್ಲಿ ರಜನಿಕಾಂತ್ ತಮ್ಮ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕೊನೆಯ ದಿನದ ಚಿತ್ರೀಕರಣದ ವೇಳೆ ನಟ ರಜನಿಕಾಂತ್ ಬೂದು ಬಣ್ಣದ ಶರ್ಟ್ ಮತ್ತು ಪ್ಯಾಂಟ್ ಅನ್ನು ಧರಿಸಿದ್ದರು.


ಇದನ್ನೂ ಓದಿ: ಪವಿತ್ರಾ ಜಯರಾಂ ಸತ್ತಿದ್ದು ಆಕ್ಸಿಡೆಂಟ್‌ನಿಂದಲ್ಲ.. ದರ್ಶನ್‌ ಸಿನಿಮಾಗೆ ಸಹಿ ಹಾಕಲು ಬಂದಿದ್ದ ಕಿರುತೆರೆ ನಟಿ ಸಾವಿನ ಸತ್ಯ ಬಿಚ್ಚಿಟ್ಟ ಪತಿ !


ವೆಟ್ಟೈಯಾನ್ ಚಿತ್ರವನ್ನು ಟಿ ಜೆ ಜ್ಞಾನವೇಲ್ ನಿರ್ದೇಶಿಸುತ್ತಿದ್ದಾರೆ. ಇದರಲ್ಲಿ ಅಮಿತಾಬ್ ಬಚ್ಚನ್, ಫಹದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್, ರಿತಿಕಾ ಸಿಂಗ್, ದುಶಾರ ವಿಜಯನ್, ಕಿಶೋರ್ ಮತ್ತು ರೋಹಿಣಿ ಅವರ ಸಮಗ್ರ ತಾರಾಗಣದೊಂದಿಗೆ ರಜನಿಕಾಂತ್ ನಾಯಕನಾಗಿ ನಟಿಸಿದ್ದಾರೆ. ಇದನ್ನು ಲೈಕಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸುಬಾಸ್ಕರನ್ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದು, ಎಸ್ ಆರ್ ಕತಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನ ಮಾಡುತ್ತಿದ್ದಾರೆ.


ಈ ತಿಂಗಳ ಆರಂಭದಲ್ಲಿ ರಜನಿಕಾಂತ್ ಮತ್ತು ಅಮಿತಾಭ್ ಒಟ್ಟಿಗೆ ಕೆಲವು ದೃಶ್ಯಗಳನ್ನು ಚಿತ್ರೀಕರಿಸುತ್ತಿದ್ದರು. ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ, ಅಮಿತಾಬ್ ಬಚ್ಚನ್ ಇಬ್ಬರೂ ಒಟ್ಟಿಗೆ ಇರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: 69 ವರ್ಷ.. 6 ಸಂಬಂಧ.. ಆದರೂ ಜೀವನದಲ್ಲಿ ಒಬ್ಬಂಟಿ! ಸಿನಿಮಾ ಜಗತ್ತನ್ನು ಆಳಿದ ಈ ತಾರೆ ಯಾರು ಗೊತ್ತೇ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.