Raju James Bond: ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ  “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕನಾಗಿ ನಟಿಸಿರುವ, ಅತ್ಯಂತ ನಿರೀಕ್ಷಿತ ಸಿನಿಮಾ “ರಾಜು ಜೇಮ್ಸ್ ಬಾಂಡ್ " ಚಿತ್ರದ ಬಿಡುಗಡೆ ದಿನಾಂಕ ಹೊಸವರ್ಷದ ಮೊದಲ ದಿನದಂದು ಘೋಷಣೆಯಾಗಿದೆ. ನಗುವೇ ಪ್ರಾಧಾನವಾಗಿರುವ ಈ ಚಿತ್ರ ಫೆಬ್ರವರಿ 14, ಪ್ರೇಮಿಗಳ ದಿನದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸದ್ಯದಲ್ಲೇ ಚಿತ್ರದ ಮನಮೋಹಕ ಹಾಡೊಂದು ಸಹ ಅನಾವರಣವಾಗಲಿದೆ.


COMMERCIAL BREAK
SCROLL TO CONTINUE READING

ಮೊದಲು ಹೇಳಿದಂತೆ ಡಿಸೆಂಬರ್ 27 ರಂದು ಈ ಚಿತ್ರ ತೆರೆಗೆ ಬರಬೇಕಿತ್ತು. ಆದರೆ "UI" ಹಾಗೂ "ಮ್ಯಾಕ್ಸ್" ಚಿತ್ರಗಳು ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆಯಾದ ಕಾರಣ ನಮ್ಮ ಚಿತ್ರದ ಬಿಡುಗಡೆಯನ್ನು ಸ್ವಲ್ಪ ಮುಂದೆ ಹಾಕಿರುವುದಾಗಿ ತಿಳಿಸಿದ್ದ  ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ (ಲಂಡನ್) ಹಾಗೂ ಕಿರಣ್ ಭರ್ತೂರು(ಕೆನಡಾ) ಫೆಬ್ರವರಿ 14 ರಂದು ಈ ಚಿತ್ರವನ್ನು ಬಿಡುಗಡೆ ಮಾಡುತ್ತಿರುವುದಾಗಿ ಹೇಳಿದ್ದಾರೆ.


ಗುರುನಂದನ್ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್