ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಸ್ಯಾಂಡಲ್ ವುಡ್ ನಲ್ಲಿನ ಬಹುಮುಖ ಪ್ರತಿಭೆ, ಅದು ಅವರ ನಟನೆಯಾಗಿರಬಹುದು ಅಥವಾ ನಿರ್ದೇಶನವಾಗಿರಬಹುದು ಅವರದ್ದು ಮಿಸ್ಟರ್ ಪರ್ಪೆಕ್ಟ್ ವರ್ಕ್ ಆಗಿರುತ್ತದೆ.ಅಷ್ಟರ ಮಟ್ಟಿಗೆ ಅವರು ಪ್ರತಿ ಕೆಲಸದಲ್ಲಿಯೂ ಪರಿಪೂರ್ಣತೆಯನ್ನು ಹೊಂದಿರುತ್ತಾರೆ.


COMMERCIAL BREAK
SCROLL TO CONTINUE READING

ಇದನ್ನು ಓದಿ- ಗಣರಾಜ್ಯೋತ್ಸವದಲ್ಲಿ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಭಾಗವಹಿಸುವುದು ಅನುಮಾನ


ಈಗ ರಕ್ಷಿತ್ ಶೆಟ್ಟಿ (Rakshit Shetty) ತಮ್ಮ 38 ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಮುಂಬರುವ ಬಹುನಿರೀಕ್ಷಿತ ಚಿತ್ರ 777 ಚಾರ್ಲಿಯ ಟೀಸರ್ ಅನ್ನು ಸಾಮಾಜಿಕ ಮಾಧ್ಯಮದ ವಿವಿಧ ವೇದಿಕೆಗಳಲ್ಲಿ ಅನಾವರಣಗೊಳಿಸಿದ್ದಾರೆ. ಅವರು ಕನ್ನಡದ ಆವೃತ್ತಿಯನ್ನು ಬಿಡುಗಡೆಗೊಳಿಸಿದ್ದರೆ, ಪೃಥ್ವಿರಾಜ್, ನಾನಿ, ನಿವಿನ್ ಪೌಲಿ, ಅನ್ನಾ ಬೆನ್, ಪ್ರಕಾಶ್ ರಾಜ್ ಮತ್ತು ಕಾರ್ತಿಕ್ ಸುಬ್ಬರಾಜ್ ಇತರರು 777 ಚಾರ್ಲಿ ಟೀಸರ್ ನ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಆವೃತ್ತಿಗಳನ್ನು ಬಿಡುಗಡೆ ಮಾಡಿದ್ದಾರೆ.


ನವರಸನಾಯಕ ಜಗ್ಗೇಶ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಶುಭ ಹಾರೈಸಿದ ಪರಿ..


ಈಗ ಚಿತ್ರದ ಟೀಸರ್ ಹಂಚಿಕೊಂಡು ಅವರು 'ನಮ್ಮ ಪ್ರೀತಿಯ ಶ್ರಮವನ್ನು ನೀವು ಪ್ರೀತಿಯಿಂದ ಸ್ವೀಕರಿಸುತ್ತೀರಿ ಎಂದು ನಾವು ಭಾವಿಸುತ್ತೇವೆ" ಎಂದು ಬರೆದುಕೊಂಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.