ಮೂಡಬಿದಿರೆಯಲ್ಲಿ ನಡೆದ 'ನಮ್ಮೂರ ಮಸೀದಿ ನೋಡ ಬನ್ನಿ' ಕಾರ್ಯಕ್ರಮದಲ್ಲಿ  ಮಾತನಾಡಿದ ಮಿಥುನ್‌ ರೈ " ಉಡುಪಿ ಮಠಕ್ಕೆ ಮುಸ್ಲಿಂ ರಾಜರು ಜಾಗ ನೀಡಿದ್ದಾರೆ, ಸೌಹಾರ್ದತೆಯನ್ನು ಹೊಂದಿರುವ ಜಿಲ್ಲೆ ದಕ್ಷಿಣ ಕನ್ನಡ. ಬಪ್ಪನಾಡು ದುರ್ಗಾಪರಮೇಶ್ವರಿ ದೇವರು ಒಲಿದಿದ್ದು ಬಪ್ಪ ಬ್ಯಾರಿಗೆ. ತುಳುನಾಡಿನಲ್ಲಿ ಪವಾಡ ದೈವ ಕೊರಗಜ್ಜ ಕಟ್ಟೆಯೊಂದರಲ್ಲಿ ಒಬ್ಬ ಮುಸ್ಲಿಂ ವ್ಯಕ್ತಿಯಿಂದ ಪೂಜೆ ನಡೆಯುತ್ತೆ " ಹೇಳಿಕೆ ನೀಡಿದ್ದರು ಅವರ ಈ ಹೇಳಿಕೆಗೆ ವಿವಾಧವನ್ನು ಸೃಷ್ಠಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್‌ ಮಾಡಿದ ರಕ್ಷಿತ್‌ ಶೆಟ್ಟಿ, "ದೇವಾಲಯದ ಪಟ್ಟಣವಾದ ಉಡುಪಿ ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ನಿಮಗೆ ಗೊತ್ತಿಲ್ಲ ಅಂದಮೇಲೆ ಸಾರ್ವಜನಿಕ ವೇದಿಕೆಯಲ್ಲಿ ಅಸಂಬದ್ಧವಾಗಿ ಮಾತನಾಡುವುದೇಕೆ ?" ಎಂದು ಪ್ರಶ್ನಿಸಿದ್ದಾರೆ. ತಮ್ಮ ಮುಂದಿನ ಚುಣಾವನೆಗೆ ಮುಸ್ಲಿಂ ಓಲೈಕೆ ಹಾಗೂ ಟಿಕೆಟ್‌ಗಾಗಿ ಹೀಗೆಲ್ಲಾ ಮಾತನಾಡುತ್ತಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್ ಬಾಕ್ಸ್‌ನಲ್ಲಿ ಬರೆದಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಟಿಕೆಟ್ ಆಕಾಂಕ್ಷಿ ಆಗಿರುವ ಮಿಥುನ್ ರೈ ಈ ರೀತಿ ಹೇಳಿಕೆ ಕೊಟ್ಟು ಚರ್ಚೆ ಹುಟ್ಟಾಕಿದ್ದಾರೆ. 


 


ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದ ಮಹಾ ನಾಯಕ ʼಧ್ರುವ ನಾರಾಯಣʼ


ಅಲ್ಲದೇ ಈ ಬಗ್ಗೆ ಉಡುಪಿ ಶಾಸಕರಾದ ರಘುಪತಿ ಭಟ್ ತಿರಗೇಟು ನೀಡಿದ್ದಾರೆ. ಮುಸಲ್ಮಾನ ರಾಜರು ಯಾವುದೇ ಜಾಗವನ್ನು ಕೃಷ್ಣಮಠಕ್ಕಾಗಲಿ ಅನಂತೇಶ್ವರಕ್ಕಾಗಲಿ ಕೊಟ್ಟಿಲ್ಲ. ಅನಂತೇಶ್ವರ ದೇಗುಲಕ್ಕೆ ರಾಮಭೋಜನು ಜಾಗ ನೀಡಿದ ಬಗ್ಗೆ ಉಲ್ಲೇಖ ಇದೆ, ಮುಂದೆ ಆ ಜಾಗ ಕೃಷ್ಣ ಮಠಕ್ಕೆ ಬಳಕೆಯಾಗಿದೆ. ಅನಂತೇಶ್ವರ ದೇಗುಲ ನಂತರ ಕೃಷ್ಣ ಮಠ ಆಗಿ ನಿರ್ಮಾಣಗೊಂಡಿದೆ ಎಂದಿದ್ದರು.


ಇನ್ನು ಮಿಥುನ್ ರೈ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡ ತಿರುಗೇಟು ನೀಡಿದ್ದರು. ಮುಸಲ್ಮಾನ ರಾಜರೇ ರಾಮ ಮಂದಿರ ನಿರ್ಮಾಣ ಮಾಡಿದ್ದು, ಅವರೇ ಕಾಶಿ ವಿಶ್ವನಾಥನನ್ನು ಪ್ರತಿಷ್ಠಾಪಿಸಿದ್ದು ಎಂದು ಹೇಳಿದರೂ ಅಚ್ಚರಿ ಇಲ್ಲ. ಅಷ್ಟೆಲ್ಲಾ ಯಾಕೆ ದೇಶಕ್ಕೆ ಭಾರತ ಎಂಬ ಹೆಸರು ಕೂಡ ಮುಸಲ್ಮಾನರೇ ನೀಡಿದ್ದು ಎಂದೂ ಹೇಳಲೂಬಹದು. ಸುಳ್ಳು ಮತ್ತು ಕಾಂಗ್ರೆಸ್ ಎರಡೂ ಒಂದು ನಾಣ್ಯದ ಎರಡು ಮುಖಗಳು. ಸುಳ್ಳನ್ನು ಸತ್ಯದ ರೀತಿಯಲ್ಲಿ ಹೇಳುವುದು ಅವರಿಗಿರುವ ಕಾಯಿಲೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ-ಹೃದಯಾಘಾತ: ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ನಿಧನ


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.