Sapta Sagaradaache Yello: ‘ಸಪ್ತ ಸಾಗರದಾಚೆ ಎಲ್ಲೋ’ ಕೇಳುತ್ತಿದೆ ‘ಹೋರಾಟ’ದ ಹಾಡು

Sapta Sagaradaache Yello Horaata Song: ಈ ಚಿತ್ರಕ್ಕಾಗಿ ಎಂ.ಸಿ.ಬಿಜ್ಜು ಹಾಗೂ ಕಿರಣ್ ಕಾವೇರಪ್ಪ ಬರೆದಿರುವ "ಹೋರಾಟ" ಎಂಬ ಹಾಡಿನ ಲಿರಿಕಲ್ ವಿಡಿಯೋ ಪರಂವಃ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.

Written by - YASHODHA POOJARI | Edited by - Puttaraj K Alur | Last Updated : Jul 20, 2023, 07:46 PM IST
  • ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯವರ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ
  • ಎಂ.ಸಿ.ಬಿಜ್ಜು ಹಾಗೂ ಕಿರಣ್ ಕಾವೇರಪ್ಪ ಬರೆದಿರುವ "ಹೋರಾಟ" ಹಾಡಿನ ಲಿರಿಕಲ್ ವಿಡಿಯೋ ರಿಲೀಸ್
  • ‘777 ಚಾರ್ಲಿ’ ಬಳಿಕ ರಿಲೀಸ್ ಆಗುತ್ತಿರುವ ರಕ್ಷಿತ್ ಶೆಟ್ಟಿ ನಟನೆಯ ಈ ಸಿನಿಮಾ ಬಗ್ಗೆ ತುಂಬಾ ನಿರೀಕ್ಷೆಯಿದೆ
Sapta Sagaradaache Yello: ‘ಸಪ್ತ ಸಾಗರದಾಚೆ ಎಲ್ಲೋ’ ಕೇಳುತ್ತಿದೆ ‘ಹೋರಾಟ’ದ ಹಾಡು  title=
"ಹೋರಾಟ" ಹಾಡಿನ ಲಿರಿಕಲ್ ವಿಡಿಯೋ ರಿಲೀಸ್

ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರವು ತೆರೆಗೆ ಬರಲು ಸಿದ್ಧವಾಗಿದೆ. ಸೈಡ್ 1 ಸೆಪ್ಟೆಂಬರ್ 1ರಂದು ಬಿಡುಗಡೆಯಾದರೆ,  ಸೈಡ್ 2 ಅಕ್ಟೋಬರ್ 20ಕ್ಕೆ ತೆರೆಗೆ ಬರಲಿದೆ.

ಹೇಮಂತ್ ಎಂ ರಾವ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ಎಂ ರಾವ್ ಕಾಂಬಿನೇಶನ್‍ನಲ್ಲಿ ಬರುತ್ತಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿ ವಲಯ ಕಾತುರದಿಂದ ಕಾಯುತ್ತಿದೆ. ಹೇಮಂತ್ ರಾವ್ ಹಾಗೂ ರಕ್ಷಿತ್ ಕಾಂಬಿನೇಷನ್​ನಲ್ಲಿ ಈ ಹಿಂದೆ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಸಿನಿಮಾ ಮೂಡಿ ಬಂದಿತ್ತು.

ಇದನ್ನೂ ಓದಿ: ಒಂದೇ ಸಿನಿಮಾದಲ್ಲಿ ಅಣ್ಣ-ತಮ್ಮ ಮುಖಾಮುಖಿ : ಕಾರ್ತಿ ಹೀರೋ ಸೂರ್ಯ ವಿಲನ್‌...!

ಸದ್ಯ ಈ ಚಿತ್ರಕ್ಕಾಗಿ ಎಂ.ಸಿ.ಬಿಜ್ಜು ಹಾಗೂ ಕಿರಣ್ ಕಾವೇರಪ್ಪ ಬರೆದಿರುವ "ಹೋರಾಟ" ಎಂಬ ಹಾಡಿನ ಲಿರಿಕಲ್ ವಿಡಿಯೋ ಪರಂವಃ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಎಂ.ಸಿ.ಬಿಜ್ಜು(ರಾಪರ್) ಹಾಗೂ ಕೀರ್ತನ್ ಹೊಳ್ಳ ಹಾಡಿರುವ ಈ ಹಾಡು ಎಲ್ಲರ ಪ್ರಶಂಸೆಗೆ ಪಾತ್ರವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚರಣ್ ರಾಜ್ ಈ ಚಿತ್ರದ ಸಂಗೀತ ನಿರ್ದೇಶಕರು.

ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಹಾಗೂ ಸುನೀಲ್ ಭಾರದ್ವಾಜ್ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರ ಜೆ ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯತಕುಮಾರ್, ಪವಿತ್ರ ಲೋಕೇಶ್, ರಮೇಶ್ ಇಂದಿರಾ, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರಿದ್ದಾರೆ.

ಇದನ್ನೂ ಓದಿ: ಮಹೇಶ್ ಪುತ್ರಿಯ ಹೃದಯವಂತಿಕೆ..! ಬರ್ತ್‌ ಡೇಗೆ ಬಡ ಹೆಣ್ಣುಮಕ್ಕಳಿಗೆ ಸೈಕಲ್ ಗಿಫ್ಟ್‌ ನೀಡಿದ ಸಿತಾರಾ

‘777 ಚಾರ್ಲಿ’ ಬಳಿಕ ರಿಲೀಸ್ ಆಗುತ್ತಿರುವ ರಕ್ಷಿತ್ ಶೆಟ್ಟಿ ನಟನೆಯ ಈ ಸಿನಿಮಾ ಬಗ್ಗೆ ತುಂಬಾ ನಿರೀಕ್ಷೆಯಿದೆ. ಈ ಚಿತ್ರದ ಪ್ರಮೋಷನ್ ಆರಂಭ ಆಗಿದ್ದು, ಸಿನಿಮಾದ ಮೊದಲ ಹಾಡು ಬುಧವಾರ(ಜುಲೈ 20) ರಿಲೀಸ್ ಆಗಿದೆ. ಈ ಹಾಡು ಕೇಳುಗರಿಗೆ ಇಷ್ಟ ಆಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News