ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರವು ತೆರೆಗೆ ಬರಲು ಸಿದ್ಧವಾಗಿದೆ. ಸೈಡ್ 1 ಸೆಪ್ಟೆಂಬರ್ 1ರಂದು ಬಿಡುಗಡೆಯಾದರೆ,  ಸೈಡ್ 2 ಅಕ್ಟೋಬರ್ 20ಕ್ಕೆ ತೆರೆಗೆ ಬರಲಿದೆ.


COMMERCIAL BREAK
SCROLL TO CONTINUE READING

ಹೇಮಂತ್ ಎಂ ರಾವ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ಎಂ ರಾವ್ ಕಾಂಬಿನೇಶನ್‍ನಲ್ಲಿ ಬರುತ್ತಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿ ವಲಯ ಕಾತುರದಿಂದ ಕಾಯುತ್ತಿದೆ. ಹೇಮಂತ್ ರಾವ್ ಹಾಗೂ ರಕ್ಷಿತ್ ಕಾಂಬಿನೇಷನ್​ನಲ್ಲಿ ಈ ಹಿಂದೆ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಸಿನಿಮಾ ಮೂಡಿ ಬಂದಿತ್ತು.


ಇದನ್ನೂ ಓದಿ: ಒಂದೇ ಸಿನಿಮಾದಲ್ಲಿ ಅಣ್ಣ-ತಮ್ಮ ಮುಖಾಮುಖಿ : ಕಾರ್ತಿ ಹೀರೋ ಸೂರ್ಯ ವಿಲನ್‌...!


ಸದ್ಯ ಈ ಚಿತ್ರಕ್ಕಾಗಿ ಎಂ.ಸಿ.ಬಿಜ್ಜು ಹಾಗೂ ಕಿರಣ್ ಕಾವೇರಪ್ಪ ಬರೆದಿರುವ "ಹೋರಾಟ" ಎಂಬ ಹಾಡಿನ ಲಿರಿಕಲ್ ವಿಡಿಯೋ ಪರಂವಃ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಎಂ.ಸಿ.ಬಿಜ್ಜು(ರಾಪರ್) ಹಾಗೂ ಕೀರ್ತನ್ ಹೊಳ್ಳ ಹಾಡಿರುವ ಈ ಹಾಡು ಎಲ್ಲರ ಪ್ರಶಂಸೆಗೆ ಪಾತ್ರವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚರಣ್ ರಾಜ್ ಈ ಚಿತ್ರದ ಸಂಗೀತ ನಿರ್ದೇಶಕರು.


ಮಹೇಶ್ ಪುತ್ರಿಯ ಹೃದಯವಂತಿಕೆ..! ಬರ್ತ್‌ ಡೇಗೆ ಬಡ ಹೆಣ್ಣುಮಕ್ಕಳಿಗೆ ಸೈಕಲ್ ಗಿಫ್ಟ್‌ ನೀಡಿದ ಸಿತಾರಾ


ರಕ್ಷಿತ್ ಶೆಟ್ಟಿ ನಟನೆಯ ಈ ಸಿನಿಮಾ ಬಗ್ಗೆ ತುಂಬಾ ನಿರೀಕ್ಷೆಯಿದೆ. ಈ ಚಿತ್ರದ ಪ್ರಮೋಷನ್ ಆರಂಭ ಆಗಿದ್ದು, ಸಿನಿಮಾದ ಮೊದಲ ಹಾಡು ಬುಧವಾರ(ಜುಲೈ 20) ರಿಲೀಸ್ ಆಗಿದೆ. ಈ ಹಾಡು ಕೇಳುಗರಿಗೆ ಇಷ್ಟ ಆಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.