Ram Charan: RC17 ಗೆ ಡೈರೆಕ್ಟರ್ ಫಿಕ್ಸ್..ಮತ್ತೊಮ್ಮೆ ರಾಮ್ ಚರಣ್ ಜೊತೆ ಕೈ ಜೋಡಿಸಿದ ಸುಕುಮಾರ್..!

 ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೋಳಿ ಹಬ್ಬದ ಸಂಭ್ರಮದಲ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗೇಮ್ ಚೇಂಜರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್, ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ.ಆರ್ ಸಿ 16 ಸಿನಿಮಾಗೆ ಬುಚ್ಚಿ ಬಾಬು ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಟೇಕಾಫ್ ಗೂ ಮೊದ್ಲೇ ಚೆರ್ರಿಯ ಮತ್ತೊಂದು ಸಿನಿಮಾ ಅನೌನ್ಸ್ ಆಗಿದೆ.

Written by - YASHODHA POOJARI | Edited by - Manjunath N | Last Updated : Mar 25, 2024, 07:07 PM IST
  • ಮೈತ್ರಿ ಮೂವೀ ಮೇಕರ್ಸ್, ರಾಮ್ ಚರಣ್ ಹಾಗೂ ಪುಷ್ಪ ಡೈರೆಕ್ಟರ್ ಸುಕುಮಾರ್ ಮತ್ತೆ ಒಂದಾಗಿದ್ದಾರೆ
  • ರಂಗಸ್ಥಳಂ ಮೂಲಕ ಧಮಾಕ ಎಬ್ಬಿಸಿದ್ದ ಈ ತ್ರಿವಳಿ ಕಾಂಬೋದಲ್ಲಿ ಹೊಸ ಪ್ರಾಜೆಕ್ಟ್ ಘೋಷಣೆಯಾಗಿದೆ
  • ಬಣ್ಣದ ಹಬ್ಬದ ಸಂದರ್ಭದಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ
Ram Charan:  RC17 ಗೆ ಡೈರೆಕ್ಟರ್ ಫಿಕ್ಸ್..ಮತ್ತೊಮ್ಮೆ ರಾಮ್ ಚರಣ್ ಜೊತೆ ಕೈ ಜೋಡಿಸಿದ ಸುಕುಮಾರ್..! title=

ಹೈದರಾಬಾದ್: ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೋಳಿ ಹಬ್ಬದ ಸಂಭ್ರಮದಲ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗೇಮ್ ಚೇಂಜರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್, ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ.ಆರ್ ಸಿ 16 ಸಿನಿಮಾಗೆ ಬುಚ್ಚಿ ಬಾಬು ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಟೇಕಾಫ್ ಗೂ ಮೊದ್ಲೇ ಚೆರ್ರಿಯ ಮತ್ತೊಂದು ಸಿನಿಮಾ ಅನೌನ್ಸ್ ಆಗಿದೆ.

ಇದನ್ನೂ ಓದಿ: Lok sabha Election 2024: ಲೋಕಸಭಾ ಚುನಾವಣೆಯ ನಂತರ ಬದಲಾಗ್ತಾರಾ ಸಿಎಂ? 

ಮೈತ್ರಿ ಮೂವೀ ಮೇಕರ್ಸ್, ರಾಮ್ ಚರಣ್ ಹಾಗೂ ಪುಷ್ಪ ಡೈರೆಕ್ಟರ್ ಸುಕುಮಾರ್ ಮತ್ತೆ ಒಂದಾಗಿದ್ದಾರೆ. ರಂಗಸ್ಥಳಂ ಮೂಲಕ ಧಮಾಕ ಎಬ್ಬಿಸಿದ್ದ ಈ ತ್ರಿವಳಿ ಕಾಂಬೋದಲ್ಲಿ ಹೊಸ ಪ್ರಾಜೆಕ್ಟ್ ಘೋಷಣೆಯಾಗಿದೆ. ಬಣ್ಣದ ಹಬ್ಬದ ಸಂದರ್ಭದಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: Chitradurga: ನೀಟ್ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವು!

ತ್ರಿಬಲ್ ಆರ್ ಸಿನಿಮಾ ಬಳಿಕ ಶಂಕರ್ ಸಾರಥ್ಯದ ಗೇಮ್ ಚೇಂಜರ್ ಚಿತ್ರದಲ್ಲಿ ರಾಮ್ ನಟಿಸ್ತಿದ್ದಾರೆ. ಜೊತೆಗೆ ಉಪ್ಪೇನಾ ಡೈರೆಕ್ಟರ್ ಬುಚ್ಚಿ ಬಾಬುಗೂ ಕಾಲ್ ಶೀಟ್ ಕೊಟ್ಟಿರುವ ಮೆಗಾ ಪ್ರಿನ್ಸ್ ಈಗ ಸುಕುಮಾರ್ ಹೊಸ ಕಥೆಯಲ್ಲಿ ಮಿಂಚೋದಿಕ್ಕೂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. 

ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಹಾಗೂ ಸುಕುಮಾರ್ ರೈಟಿಂಗ್ ಹಣ ಹಾಕುತ್ತಿರುವ ಈ ಸಿನಿಮಾಗೆ ರಾಕ್ ಸ್ಟಾರ್ ದೇವಿ ಪ್ರಸಾದ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ಸೂಪರ್ ಹಿಟ್ ಆದ  ರಂಗಸ್ಥಳಂ ಚಿತ್ರಕ್ಕೂ ಮ್ಯೂಸಿಕ್ ನೀಡಿದ್ದ ಡಿಎಸ್ ಪಿ ಮತ್ತೆ ಸುಕುಮಾರ್ ಹಾಗೂ ರಾಮ್ ಸಿನಿಮಾ ಮೂಲಕ ಧಮಾಕ ಎಬ್ಬಿಸಲಿದ್ದಾರೆ. ಅಂದಹಾಗೇ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಈ ಚಿತ್ರ ಮೂಡಿಬರಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News