ಸ್ಟಾರ್ ನಟನ ಪತ್ನಿಯ ದೇಹದ ಆ ಭಾಗದ ಬಗ್ಗೆ RGV ಆಘಾತಕಾರಿ ಪೋಸ್ಟ್..! ಫ್ಯಾನ್ಸ್‌ ಕೆಂಡಾಮಂಡಲ

ಟಾಲಿವುಡ್‌ನ ಸೆನ್ಸೇಷನಲ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಪ್ರಸ್ತುತ ಯಾವುದೇ ಸಿನಿಮಾಗಳನ್ನು ಮಾಡುತ್ತಿಲ್ಲ. ರಾಜಕೀಯದಲ್ಲೂ ಸಕ್ರಿಯವಾಗಿಲ್ಲ. ಆದರೂ, ಆಗಾಗ ತಮ್ಮ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಇದೀಗ ಆರ್‌ಜಿವಿ ಸ್ಟಾರ್ ಹೀರೋ ಒಬ್ಬರ ಪತ್ನಿಯ ಬಗ್ಗೆ ಆಘಾತಕಾರಿ ಪೋಸ್ಟ್ ಮಾಡಿ ವಿವಾದಕ್ಕೆ ಕಾರಣವಾಗಿದ್ದಾರೆ.

Written by - Krishna N K | Last Updated : May 21, 2025, 07:16 PM IST
    • ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಫೋಸ್ಟ್‌ ವೈರಲ್‌
    • ಸ್ಟಾರ್ ಹೀರೋ ಒಬ್ಬರ ಪತ್ನಿಯ ಬಗ್ಗೆ ಆಘಾತಕಾರಿ ಪೋಸ್ಟ್
    • ರಾಮ್ ಗೋಪಾಲ್ ವರ್ಮಾ ವಿರುದ್ಧ ನೆಟ್ಟಿಗರ ಆಕ್ರೋಶ
ಸ್ಟಾರ್ ನಟನ ಪತ್ನಿಯ ದೇಹದ ಆ ಭಾಗದ ಬಗ್ಗೆ RGV ಆಘಾತಕಾರಿ ಪೋಸ್ಟ್..! ಫ್ಯಾನ್ಸ್‌ ಕೆಂಡಾಮಂಡಲ

RGV on Kiara War 2 look : ಬಹುನಿರೀಕ್ಷಿತ ಚಿತ್ರ 'ವಾರ್ 2' ಚಿತ್ರದ ಟೀಸರ್ ಮಂಗಳವಾರ (ಮೇ 20) ಬಿಡುಗಡೆಯಾಯಿತು. ಇದು ಹೃತಿಕ್ ರೋಷನ್ ಮತ್ತು ಟೈಗರ್ ಶ್ರಾಫ್ ನಟಿಸಿದ್ದ 'ವಾರ್' ನ ಮುಂದುವರಿದ ಭಾಗ. ಈ ಸಿನಿಮಾದ ಮೂಲಕ ಮೊದಲ ಬಾರಿಗೆ ಯಂಗ್ ಟೈಗರ್ ಎನ್‌ಟಿಆರ್‌ ಹಿಂದಿ ಸಿನಿರಂಗಕ್ಕೆ ಕಾಲಿಟ್ಟಿದ್ದಾರೆ.

Add Zee News as a Preferred Source

ಅಯಾನ್ ಮುಖರ್ಜಿ ನಿರ್ದೇಶನ WAR 2 ಸಿನಿಮಾ, ಆಗಸ್ಟ್ 14 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಇನ್ನು ಮಂಗಳವಾರ ಜೂನಿಯರ್ ಎನ್‌ಟಿಆರ್ ಅವರ ಹುಟ್ಟುಹಬ್ಬದ ಪ್ರಯುಕ್ತ, War 2 teaser ಬಿಡುಗಡೆ ಮಾಡಲಾಯಿತು. ಸದ್ಯ ಟೀಸರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ:ಬಿಗ್ ಬಾಸ್ ಹೊಸ ಲೋಗೋ ಬಿಡುಗಡೆ..! ಲೋಗೋದಲ್ಲಿ ಅಡಗಿದೆ ಈ ಸೀಸನ್‌ನ ನಿರೂಪಕರ ಹೆಸರು "L"

ಟೀಸರ್‌ನಲ್ಲಿ ಕಿಯಾರಾ ಮೊದಲ ಬಾರಿಗೆ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಈ ಚೆಲುವೆಯ ಲುಕ್ ಹೈಲೈಟ್ ಆಗಿದೆ. ಟಾಲಿವುಡ್‌ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ವಾರ್ 2 ಚಿತ್ರದಲ್ಲಿನ ಕಿಯಾರಾ ಅವರ ಲುಕ್ ಬಗ್ಗೆ ಆಘಾತಕಾರಿ ಕಾಮೆಂಟ್‌ಗಳನ್ನು ಮಾಡುವ ಮೂಲಕ ನೆಟಿಜನ್‌ಗಳ ಆಕ್ರೋಶಕ್ಕೆ ಕಾರಣವಾಗಿದ್ದಾರೆ. 

ಆರ್‌ಜಿವಿ ತಮ್ಮ ಟ್ವಿಟರ್ ಖಾತೆಯಲ್ಲಿ ಕಿಯಾರಾ ಅವರ ಬಿಕಿನಿ ಫೋಟೋಗಳನ್ನು ಹಂಚಿಕೊಂಡು, ಅಶ್ಲೀಲ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್‌ಟಿಆರ್ ಅವರನ್ನು ಕಿಯಾರಾ ಅವರ ಸೌಂದರ್ಯಕ್ಕೆ ಹೋಲಿಸುತ್ತ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದಾರೆ. ಈ ಪೋಸ್ಟ್ ಕೆಲವೇ ಕ್ಷಣಗಳಲ್ಲಿ ವೈರಲ್ ಆಯಿತು. ಇದನ್ನು ನೋಡಿದ ನೆಟ್ಟಿಗರು ರಾಮ್ ಗೋಪಾಲ್ ವರ್ಮಾ ವಿರುದ್ಧ ಆಕ್ರೋಶಗೊಂಡಿದ್ದಾರೆ.  ಸದ್ಯ ಆರ್‌ಜಿವಿ ತಮ್ಮ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದಾರೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News