'ಡಬಲ್ ಇಸ್ಮಾರ್ಟ್' ಫಸ್ಟ್‌ ಸಾಂಗ್‌ ರಿಲೀಸ್..! ರಾಮ್‌ ಎನರ್ಜಿಟಿಕ್‌ ಸ್ಟೆಪ್‌ಗೆ ಪ್ಯಾನ್ಸ್‌ ಫಿದಾ

Double ismart song : ಉಸ್ತಾದ್ ರಾಮ್ ಪೋತಿನೇನಿ ಮತ್ತು ಡ್ಯಾಶಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಜೋಡಿಯ ಬಹುನಿರೀಕ್ಷಿತ ಸಿನಿಮಾ ಡಬಲ್ ಇಸ್ಮಾರ್ಟ್.  ಪುರಿ ಕನೆಕ್ಟ್ಸ್ ಬ್ಯಾನರ್‌ನಲ್ಲಿ ಪೂರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರ ಆಗಸ್ಟ್ 15 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಸದ್ಯ ಡಬಲ್ ಇಸ್ಮಾರ್ಟ್ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇತ್ತ ಪ್ರಚಾರ ಕೆಲಸ ಕೂಡ ಆರಂಭವಾಗಿದೆ.  

Written by - Krishna N K | Last Updated : Jul 3, 2024, 12:28 PM IST
    • ರಾಮ್‌, ಪೂರಿ ಜೋಡಿಯ ಬಹುನಿರೀಕ್ಷಿತ ಸಿನಿಮಾ ಡಬಲ್ ಇಸ್ಮಾರ್ಟ್
    • ಪೂರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಚಿತ್ರ
    • ಡಬಲ್ ಇಸ್ಮಾರ್ಟ್ ಸಿನಿಮಾದ ಫಸ್ಟ್‌ ಸಾಂಗ್‌ ರಿಲೀಸ್‌
'ಡಬಲ್ ಇಸ್ಮಾರ್ಟ್' ಫಸ್ಟ್‌ ಸಾಂಗ್‌ ರಿಲೀಸ್..! ರಾಮ್‌ ಎನರ್ಜಿಟಿಕ್‌ ಸ್ಟೆಪ್‌ಗೆ ಪ್ಯಾನ್ಸ್‌ ಫಿದಾ  title=
Double ismart

Ram Pothineni : ಡಬಲ್ ಇಸ್ಮಾರ್ಟ್ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ಸ್ಟೆಪ್ಪಾ ಮಾರ್‌ ಎಂಬ ಹಾಡಿಗೆ ಭಾಸ್ಕರ ಭಟ್ಲರ ಸಾಹಿತ್ಯ ಬರೆದಿದ್ದು , ಅನುರಾಗ್ ಕುಲಕರ್ಣಿ ಹಾಗೂ ಸಾಹಿತಿ ಚಂಗಂತಿ ಧ್ವನಿಯಾಗಿದ್ದಾರೆ.‌ ಮಣಿ ಶರ್ಮಾ ಟ್ಯೂನ್ ಹಾಕಿದ್ದಾರೆ. ಅದ್ಧೂರಿ ಸೆಟ್ ನಲ್ಲಿ ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ರಾಮ್ ಪೋತಿನೇನಿ ಜಬರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. 

ಸೌತ್​ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್​ ಇಸ್ಮಾರ್ಟ್​’ ಚಿತ್ರದಲ್ಲೂ ವಿಲನ್​ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ.

ಇದನ್ನೂ ಓದಿ: ಸಿನಿ ಪ್ರಿಯರ ಗಮನ ಸೆಳೆಯುತ್ತಿದೆ 'ಫ್ಯಾಮಿಲಿ ಡ್ರಾಮ' ಚಿತ್ರದ ಈ ಹಾಡು...!

ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ.

2019 ರಲ್ಲಿ ಇಸ್ಮಾರ್ಟ್ ಶಂಕರ್ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ. ಟಾಲಿವುಡ್‌ನಲ್ಲಿ ಈಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ ಅಂತ ಹೇಳಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News