Ram Pothineni : ಡಬಲ್ ಇಸ್ಮಾರ್ಟ್ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ಸ್ಟೆಪ್ಪಾ ಮಾರ್‌ ಎಂಬ ಹಾಡಿಗೆ ಭಾಸ್ಕರ ಭಟ್ಲರ ಸಾಹಿತ್ಯ ಬರೆದಿದ್ದು , ಅನುರಾಗ್ ಕುಲಕರ್ಣಿ ಹಾಗೂ ಸಾಹಿತಿ ಚಂಗಂತಿ ಧ್ವನಿಯಾಗಿದ್ದಾರೆ.‌ ಮಣಿ ಶರ್ಮಾ ಟ್ಯೂನ್ ಹಾಕಿದ್ದಾರೆ. ಅದ್ಧೂರಿ ಸೆಟ್ ನಲ್ಲಿ ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ರಾಮ್ ಪೋತಿನೇನಿ ಜಬರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಸೌತ್​ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್​ ಇಸ್ಮಾರ್ಟ್​’ ಚಿತ್ರದಲ್ಲೂ ವಿಲನ್​ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ.


ಇದನ್ನೂ ಓದಿ: ಸಿನಿ ಪ್ರಿಯರ ಗಮನ ಸೆಳೆಯುತ್ತಿದೆ 'ಫ್ಯಾಮಿಲಿ ಡ್ರಾಮ' ಚಿತ್ರದ ಈ ಹಾಡು...!


ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ.


2019 ರಲ್ಲಿ ಇಸ್ಮಾರ್ಟ್ ಶಂಕರ್ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ. ಟಾಲಿವುಡ್‌ನಲ್ಲಿ ಈಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ ಅಂತ ಹೇಳಬಹುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.