"ರಾಮನಗರ" ಇದು ವಿದ್ಯಾವಂತ ದೇಶಾಭಿಮಾನಿ ರೈತನ ಕಥೆ: ರೇಷ್ಮೆನಗರದ ಹೆಸರೆ ಈಗ ಚಿತ್ರದ ಶೀರ್ಷಿಕೆ

Ramanagara Kannada Movie: ಕನ್ನಡದಲ್ಲಿ ರೈತನ ಕುರಿತು ಸಾಕಷ್ಟು ಚಿತ್ರಗಳು ಬಂದಿವೆಯಾದರೂ,  "ರಾಮನಗರ" ಚಿತ್ರ ವಿಭಿನ್ನ ಈವರೆಗೂ ಬಂದಿರದ ವಿಭಿನ್ನ ಕಥಾಹಂದರದೊಂದಿಗೆ ಬರುತ್ತಿದೆ.

Written by - YASHODHA POOJARI | Edited by - Zee Kannada News Desk | Last Updated : Mar 4, 2025, 12:41 PM IST
  • "ರಾಮನಗರ" ಚಿತ್ರ ವಿಭಿನ್ನ ಈವರೆಗೂ ಬಂದಿರದ ವಿಭಿನ್ನ ಕಥಾಹಂದರದೊಂದಿಗೆ ಬರುತ್ತಿದೆ.
  • ರಾಮನಗರ ಜಿಲ್ಲೆಯ ಬೇವೂರು ಮಠದ ಪರಮಪೂಜ್ಯರು ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಆಶೀರ್ವದಿಸಿದರು.
"ರಾಮನಗರ" ಇದು ವಿದ್ಯಾವಂತ ದೇಶಾಭಿಮಾನಿ ರೈತನ ಕಥೆ: ರೇಷ್ಮೆನಗರದ ಹೆಸರೆ ಈಗ ಚಿತ್ರದ ಶೀರ್ಷಿಕೆ

Ramanagara Kannada Movie: ಕನ್ನಡದಲ್ಲಿ ರೈತನ ಕುರಿತು ಸಾಕಷ್ಟು ಚಿತ್ರಗಳು ಬಂದಿವೆಯಾದರೂ,  "ರಾಮನಗರ" ಚಿತ್ರ ವಿಭಿನ್ನ ಈವರೆಗೂ ಬಂದಿರದ ವಿಭಿನ್ನ ಕಥಾಹಂದರದೊಂದಿಗೆ ಬರುತ್ತಿದೆ. ಇತ್ತೀಚೆಗೆ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ರಾಮನಗರ ಜಿಲ್ಲೆಯ ಬೇವೂರು ಮಠದ ಪರಮಪೂಜ್ಯರು ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಆಶೀರ್ವದಿಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.  

Add Zee News as a Preferred Source

'ರಾಮನಗರ' ಊರಿನ‌ ಶೀರ್ಷಿಕೆಯಾದರೂ ಇದು ರೈತನ ಕಥೆ. ಅದರಲ್ಲೂ ವಿದ್ಯಾವಂತ ದೇಶಾಭಿಮಾನಿ ರೈತನ ಕಥೆ. ಹಳ್ಳಿಯಲ್ಲಿ ಓದಿದ ಹುಡುಗನೊಬ್ಬ ಕೆಲಸಕ್ಕಾಗಿ ಸಿಟಿಗೆ ಬರದೆ, ಹಳ್ಳಿಯಲ್ಲೇ ರೈತನಾಗಿದುಕೊಂಡು ವ್ಯವಸಾಯ ಮಾಡಿ‌ ಇತರ ವಿದ್ಯಾವಂತ ಯುವಕರಿಗೂ ಮಾದರಿಯಾಗುವ ಕಥೆಯೂ ಹೌದು.‌ ಚಿತ್ರತಂಡದ ಸಹಕಾರದಿಂದ ಅಂದುಕೊಂಡ ಹಾಗೆ ಚಿತ್ರ ಬಂದಿದೆ. ಯುಗಾದಿ ವೇಳೆಗೆ ಚಿತ್ರ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ ಎಂದರು ನಿರ್ದೇಶಕ ವಿಜಯ್ ರಾಜ್.   

ಹಳ್ಳಿ ಹುಡುಗರು ವಿದ್ಯಾವಂತರಾಗಿ ಕೃಷಿಕನಾಗುತ್ತೇನೆ ಎಂದರೆ ಏನೆಲ್ಲಾ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ಈ ಚಿತ್ರದಲ್ಲಿ ತೋರಿಸಲಾಗಿದೆ ಎಂದು ಮಾತನಾಡಿದ ನಾಯಕ ಪ್ರಭುಸೂರ್ಯ,  ಹಳ್ಳಿ ಹುಡುಗ ವಿದ್ಯಾವಂತನಾಗಿ ರೈತನಾಗುತ್ತೇನೆ ಎಂದರೆ ಪೋಷಕರಿಂದ, ಊರಿನವರಿಂದ ಹಾಗೂ ಎಲ್ಲರಿಂದಲೂ ಮಾತು ಕೇಳ ಬೇಕಾಗುತ್ತದೆ. ಇವನು ಇಷ್ಟು ಓದಿದ್ದು ದಂಡ.‌ ಸಿಟಿಗೆ ಹೋಗಿ ಕೆಲಸ ಮಾಡದೆ ಇಲ್ಲೇ ಇದ್ದಾನೆ ಎನ್ನುತ್ತಾರೆ. ಇನ್ನೂ ಕೆಲವರಂತೂ ಇವನು ಓದಿದ್ದನೋ ? ಇಲ್ಲ. ಸುಳ್ಳು ಹೇಳುತ್ತಿದ್ದಾನೋ? ಅಂತಲೂ ಕೇಳುತ್ತಾರೆ. ನಮ್ಮ ಚಿತ್ರದ ನಾಯಕನಿಗೂ ಹೀಗೆ.‌ ಆದರೆ ಆತ ಈ ಎಲ್ಲಾ ಸಮಸ್ಯೆಗಳನ್ನು ದಾಟಿ ಆದರ್ಶ ರೈತನಾಗುತ್ತಾನೆ. ಈ ರೈತ ಮಹಾನ್ ದೇಶಾಭಿಮಾನಿಯೂ ಹೌದು. ಇಷ್ಟೇ ಮಾತ್ರವಲ್ಲದೆ ಈ ಚಿತ್ರದಲ್ಲಿ ಈಗಿನ‌ ಪ್ರೇಕ್ಷಕರು ಬಯಸುವ  ಎಲ್ಲಾ ಅಂಶಗಳು ಇದೆ ಎಂದರು. 

ನಾನು ಮೂಲತಃ ಉದ್ಯಮಿ. ಇದು ಮೊದಲ ನಿರ್ಮಾಣದ ಚಿತ್ರ. ನಿಮ್ಮೆಲ್ಲರ‌ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸಿ.ಕೆ ಮಂಜುನಾಥ್. 

ಚಿತ್ರದಲ್ಲಿ ನಟಿಸಿರುವ ಶಿವಕುಮಾರ್ ಆರಾಧ್ಯ, "ತಿಥಿ" ಖ್ಯಾತಿಯ ತಮ್ಮಣ್ಣ ಹಾಗೂ ಛಾಯಾಗ್ರಾಹಕ ಭರತ್ ಇಂಡಿಯಾ ಚಿತ್ರದ ಕುರಿತು ಮಾತನಾಡಿದರು. 

ಕೆವಿನ್ ಅವರು ಸಂಗೀತ ನೀಡಿರುವ ಮೂರು ಹಾಡುಗಳು ನಮ್ಮ ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಹಾಡುಗಳು ಚೆನ್ನಾಗಿದೆ ಎಂದು ಸುರೇಶ್ ಚಿಕ್ಕಣ್ಣ ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Trending News