Shivaji surathkal 2 : ನಟ ರಮೇಶ್ ಅರವಿಂದ್ ಅಭಿನಯದ ಪತ್ತೇದಾರಿ ಸಿನಿಮಾ ʼಶಿವಾಜಿ ಸುರತ್ಕಲ್ʼನ ಮುಂದುವರೆದ ಭಾಗ ʼಶಿವಾಜಿ ಸುರತ್ಕಲ್ – ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿʼ ಸಿನಿಮಾ ಇದೇ ಶುಕ್ರವಾರ (ಏಪ್ರಿಲ್ 14) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್‌ ಅಡಿಯಲ್ಲಿ ರೇಖಾ ಕೆ.ಎನ್ ಮತ್ತು ಅನೂಪ್ ಗೌಡ ನಿರ್ಮಿಸಿದ್ದಾರೆ. ಆಕಾಶ್ ಶ್ರೀವತ್ಸ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

2020ರಲ್ಲಿ ಬಿಡುಗಡೆಯಾದ ಮೊದಲ ಭಾಗದಂತೆಯೇ ಈ ಚಿತ್ರವು ಸಹ ಒಂದು ಮರ್ಡರ್ ಮಿಸ್ಟ್ರಿಯಾಗಿದೆ. ಚಿತ್ರದಲ್ಲಿ ನಡೆಯುವ ಕೊಲೆಗಳಿಗೂ, ನಾಯಕ ಶಿವಾಜಿಗೂ ಒಂದು ನಂಟಿರುತ್ತದೆ. ಆ ನಂಟೇನು? ಕೊಲೆಗಳ ಹಿಂದಿರುವ ರಹಸ್ಯವೇನು? ಮತ್ತು ಕೊಲೆಗಾರ ಯಾರು? ಎಂಬುದೇ ಈ ಚಿತ್ರದ ಮುಖ್ಯ ಕಥಾ ಹಂದರ. ಮೊದಲ ಭಾಗ ನೋಡಿದವರಿಗೆ ಈ ಚಿತ್ರವು ಖಂಡಿತಾ ಇಷ್ಟವಾಗುತ್ತದೆ. ಇಲ್ಲಿ ಕೊಲೆಗಳ ಜೊತೆಗೆ ಮನರಂಜನೆ ಮತ್ತು ಭಾವನಾತ್ಮಕ ಸನ್ನಿವೇಶಗಳು ಸಹ ಇದೆ. ಚಿತ್ರ ನೋಡುತ್ತಿದ್ದಂತೆ ಇಲ್ಲಿ ಎರಡು ಪಾತ್ರಗಳಿವೆಯೋ ಅಥವಾ ನಾಯಕನ ಮನಸ್ಸಿನಲ್ಲಿ ಆಗುವ ತಳಮಳಗಳೋ ಎಂಬ ಪ್ರಶ್ನೆ ಪ್ರೇಕ್ಷಕರಿಗೆ ಕಾಡುತ್ತದೆ. ಕನ್ನಡದಲ್ಲಿ ಇದೊಂದು ವಿಭಿನ್ನವಾದ ಪ್ರಯತ್ನ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ನಿರ್ದೇಶಕ ಆಕಾಶ್ ಶ್ರೀವತ್ಸ. 


ಇದನ್ನೂ ಓದಿ: ರಾಗಿಣಿಗೆ ʼ90ʼ ಕೊಡ್ಸೋಕೆ ರೆಡಿಯಾದ ಚಂದನ್‌ ಶೆಟ್ಟಿ..! ಸಖತ್‌ ಆಗಿದೆ ವಿಡಿಯೋ.. ನೋಡಿ


‘ಶಿವಾಜಿ ಸುರತ್ಕಲ್ 2’ ಚಿತ್ರದಲ್ಲಿ ರಮೇಶ್ ಅರವಿಂದ್, ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ಸಂಗೀತ ಶೃಂಗೇರಿ, ರಘು ರಮಣಕೊಪ್ಪ, ನಾಜರ್, ರಮೇಶ್ ಭಟ್, ವೀಣಾ ಸುಂದರ್, ವಿನಾಯಕ್ ಜೋಶಿ, ಶೋಭರಾಜ್ ಮುಂತಾದ ಪ್ರತಿಭಾವಂತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಬೆಂಗಳೂರು, ಮೈಸೂರು, ಹೈದರಾಬಾದ್, ಸುರತ್ಕಲ್, ಕಾಪು, ಹೊನ್ನಾವರ ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ. ಗುರುಪ್ರಸಾದ್ ಮತ್ತು ಮಧು ಅಂಬಟ್ ಅವರ ಛಾಯಾಗ್ರಹಣ ಹಾಗೂ ಜೂಡಾ ಸ್ಯಾಂಡಿ ಸಂಗೀತವಿದೆ. ನಿರ್ದೇಶಕ ಆಕಾಶ್ ಶ್ರೀವತ್ಸ ಅವರೇ ಚಿತ್ರದ ಸಂಕಲನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.