ಬೆಂಗಳೂರು : ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅವರ ಮನೆಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಭೇಟಿ ನೀಡಿದರು. ಈ ವೇಳೆ ಕಾಂಗ್ರೆಸ್‌ ಪ್ರಚಾರಕ್ಕೆ ಶಕ್ತಿ ತುಂಬಿ, ಗೆಲುವಿಗೆ ಕಾರಣರಾಗಿದ್ದಕ್ಕೆ ಧನ್ಯವಾದ ಅರ್ಪಿಸಿದರು.


COMMERCIAL BREAK
SCROLL TO CONTINUE READING

ಈ ಕುರಿತು ತಮ್ಮ ಟ್ವಿಟರ್‌ ಖಾತೆಯಲ್ಲಿ ಫೋಟೋ ಸಮೇತ ಸುದೀರ್ಘ ಬರಹ ಬರೆದುಕೊಂಡಿರುವ ಸುರ್ಜೇವಾಲಾ ಅವರು, ನಟ ಶಿವರಾಜ್‌ಕುಮಾರ್‌ ಮತ್ತು ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಲು ಸಂತೋಷವಾಯಿತು. ಕಾಂಗ್ರೆಸ್ ಪ್ರಚಾರಕ್ಕೆ ಶಕ್ತಿ ತುಂಬಿದ ಮತ್ತು ಕರ್ನಾಟಕದ ಅಭಿವೃದ್ಧಿಗಾಗಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳು. ಗೀತಾ ಶಿವರಾಜಕುಮಾರ್ ಅವರು ಈಗಾಗಲೇ ಕಾಂಗ್ರೆಸ್ ಕುಟುಂಬದ ಭಾಗವಾಗಿದ್ದಾರೆ. ಕರ್ನಾಟಕದ ಅಭಿವೃದ್ಧಿ ಮತ್ತು ಸಮೃದ್ಧಿಗೆ ನಾವು ಒಟ್ಟಾಗಿ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.


ರಾಜ್ಯದ ನೂತನ ಸ್ಪೀಕರ್ ಆಗಿ ಯುಟಿ ಖಾದರ್ ಆಯ್ಕೆ


ಇನ್ನು ಮಧು ಬಂಗಾರಪ್ಪಗೆ ಸಚಿವ ಸ್ಥಾನ ‌ನೀಡದಕ್ಕೆ ಗೀತಾ ಶಿವರಾಜ್ ಕುಮಾರ್ ಅವರು ಅಸಮಾಧಾನಗೊಂಡಿದ್ದಾರೆ. ಅಲ್ಲದೆ, ಅವರಿಗೆ ಸಚಿವ ಸ್ಥಾನ ನೀಡುವಂತೆ ಸುರ್ಜೇವಾಲಾ ಅವರನ್ನು ಗೀತಾ ಶಿವರಾಜ್ ಕುಮಾರ್ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ರಾಜಕೀಯ ಕೆಲಸಗಳ ಕಾರಣ ಸಿನಿಮಾದಿಂದ ದೂರ ಉಳಿದಿದ್ದ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್‌ ಪರ ರಾಜ್ಯದ ವಿವಿಧ ಕಡೆಗಳಿಗೆ ತೆರಳಿ ಮತಬೇಟೆ ಮಾಡಿದ್ದರು. ಈಗ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ