ಪುನೀತ್‌ ಬದಲಿಗೆ ರಾಘಣ್ಣ ನಟಿಸಿರುವ ʼರಂಗ ಸಮುದ್ರʼ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ..!

ಟ್ರೇಲರ್ ಮೂಲಕ "ರಂಗ ಸಮುದ್ರ" ಈಗಾಗಲೇ ಜನರ ಮನ ಗೆದ್ದಿದೆ. ಜಾನಪದ ಸೊಗಡಿನ ಹಾಗೂ ಕೌಟುಂಬಿಕ ಮನರಂಜನೆಯ ಕಥಾಹಂದರ ಹೊಂದಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ.  

Written by - YASHODHA POOJARI | Edited by - Krishna N K | Last Updated : Jan 7, 2024, 07:10 PM IST
  • "ರಂಗ ಸಮುದ್ರ" ಚಿತ್ರ ಜನವರಿ 19ರಂದು ಬಿಡುಗಡೆಯಾಗಲಿದೆ.
  • ಖ್ಯಾತ ನಟ ಸಂಪತ್ ರಾಜ್ ಪ್ರಮುಖಪಾತ್ರದಲ್ಲಿ ನಟಿಸಿರಯವ "ರಂಗ ಸಮುದ್ರ".
  • ಹಾಡುಗಳು ಹಾಗೂ ಟ್ರೇಲರ್ ಮೂಲಕ "ರಂಗ ಸಮುದ್ರ" ಈಗಾಗಲೇ ಜನರ ಮನ ಗೆದ್ದಿದೆ.
ಪುನೀತ್‌ ಬದಲಿಗೆ ರಾಘಣ್ಣ ನಟಿಸಿರುವ ʼರಂಗ ಸಮುದ್ರʼ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ..! title=

Rangasamudra kannada movie : ಹೊಯ್ಸಳ ಕ್ರಿಯೇಷನ್ಸ್ ಲಾಂಛನದಲ್ಲಿ ಹೊಯ್ಸಳ ಕೋಣನೂರು ನಿರ್ಮಿಸಿರುವ, ರಾಜಕುಮಾರ್ ಅಸ್ಕಿ ನಿರ್ದೇಶನದ ಹಾಗೂ ರಂಗಾಯಣ ರಘು ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಸಂಪತ್ ರಾಜ್ ಇನ್ನಿತರರು ಪ್ರಮುಖಪಾತ್ರದಲ್ಲಿ ನಟಿಸಿರಯವ "ರಂಗ ಸಮುದ್ರ" ಚಿತ್ರ ಜನವರಿ 19ರಂದು ಬಿಡುಗಡೆಯಾಗಲಿದೆ.

ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಮೂಲಕ "ರಂಗ ಸಮುದ್ರ" ಈಗಾಗಲೇ ಜನರ ಮನ ಗೆದ್ದಿದೆ. ಜಾನಪದ ಸೊಗಡಿನ ಹಾಗೂ ಕೌಟುಂಬಿಕ ಮನರಂಜನೆಯ ಕಥಾಹಂದರ ಹೊಂದಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ.    

ಇದನ್ನೂ ಓದಿ: ಕ್ಯಾಪ್ಟನ್‌ ಮಿಲ್ಲರ್‌ನಲ್ಲಿ ಧನುಷ್‌ ಡೆವಿಲ್‌..! ಶಿವಣ್ಣ ರಕ್ಷಕನೋ... ರಾಕ್ಷಸನೋ..?

ವಾಗೀಶ್ ಚನ್ನಗಿರಿ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ದೇಸಿ ಮೋಹನ್ ಸಂಗೀತ ನೀಡಿದ್ದಾರೆ. ಕೀರವಾಣಿ, ಕೈಲಾಶ್ ಖೇರ್, ವಿಜಯ ಪ್ರಕಾಶ್ ನವೀನ್ ಸಜ್ಜು ಮುಂತಾದ ಖ್ಯಾತ ಗಾಯಕರು ಹಾಡುಗಳನ್ನು ಹಾಡಿದ್ದಾರೆ. ಆರ್ ಗಿರಿ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.        

ರಾಘವೇಂದ್ರ ರಾಜಕುಮಾರ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಂಗಾಯಣ ರಘು, ಸಂಪತ್ ರಾಜ್, ಕೆವಿಆರ್, ದಿವ್ಯ ಗೌಡ, ಮೂಗುರು ಸುರೇಶ್, ಉಗ್ರಂ ಮಂಜು, ಸ್ಕಂದ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News