Shakhahari Release Date Fixed: ಚಂದನವದ ಹೆಸರಾಂತ ಕಲಾವಿದ ರಂಗಾಯಣ ರಘು ಅಭಿನಯದ ಶಾಖಾಹಾರಿ ಚಿತ್ರ ರಿಲೀಸ್‌ ಡೇಟ್‌ ಫಿಕ್ಸ್‌ ಆಗಿದೆ. ಶಿವಮೊಗ್ಗದ ತೀರ್ಥಹಳ್ಳಿಯ ಹಳ್ಳಿಯೊಂದರಲ್ಲಿ ನಡೆಯುವ ಮಲೆನಾಡಿನ ನಿಗೂಢ ಘಟನೆಗಳ ಸುತ್ತ ಸುತ್ತುವ ಈ ಸಿನಿಮಾ ಕಥೆ ಇದೇ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. 


COMMERCIAL BREAK
SCROLL TO CONTINUE READING

ಶಾಖಗಾರಿ ಚಿತ್ರದಲ್ಲಿ ರಂಗಾಯಣ ರಘು ಅಡುಗೆ ಭಟ್ಟನಾಗಿ, ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಹಾಗೇ ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: Eagle Second Day Collections: ಈಗಲ್ ಸೆಕೆಂಡ್ ಡೇ ಕಲೆಕ್ಷನ್ಸ್.. ರವಿತೇಜ ಗಳಿಕೆ ಎಷ್ಟು ಗೊತ್ತಾ..!


ಇತ್ತೀಚೆಗೆ ನಡೆದ ಶಾಖಾಹಾರಿ ಸಿನಿಮಾದ ಪ್ರೀ-ರಿಲೀಸ್ ಸಮಾರಂಭದಲ್ಲಿ  ರಂಗಾಯಣ ರಘುವಿನ ಅತ್ಯುತ್ತಮ ಅಭಿನಯಕ್ಕಾಗಿ  ಅಭಿನಯಸುರ (ನಟನೆಯ ಮಾಸ್ಟರ್) ಎಂಬ ಬಿರುದನ್ನು ನೀಡಿ ಗೌರವಿಸಲಾಯಿತು. 
ಇಲ್ಲಿವರೆಗೂ ಯಾವುದೇ ಚಿತ್ರತಂಡ ಈ ಕಲಾವಿದನಿಗೆ ಈ ರೀತಿ ಬಿರುದು ಕೊಟ್ಟಿರದೆ, ಇದೇ ಮೊದಲ ಬಾರಿಗೆ ಕಲಾಸೇವೆಗೆ ಚಿತ್ರತಂಡ ಈ ರೀತಿ ಗೌರವ ಸೂಚಿಸಿದೆ.


ಶಾಖಾಹಾರಿ ಚಿತ್ರದ ಕಥೆ, ಸಂಭಾಷಣೆ ಹಾಗೂ ನಿರ್ದೇಶನವನ್ನು  ಸಂದೀಪ್ ಸುಂಕದ್ ಮಾಡುತ್ತಿದ್ದು, ವಿಶ್ವಜಿತ್ ರಾವ್  ಸಿನಿಮಾದ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ. ಶಶಾಂಕ್ ನಾರಾಯಣ್  ಸಂಕಲನ, ಮಯೂರ್ ಅಂಬೇಕಲ್ಲು ಸಂಗೀತ ಚಿತ್ರಕ್ಕೆ ಪುಷ್ಟಿ ನೀಡಿದೆ. ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈ.ಲಿ. ನ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ