ಭಾರಿ ಸದ್ದು ಮಾಡುತ್ತಿದೆ ʼರಾನಿʼ ಟೀಸರ್..ಅಭಿಮಾನಿಗಳಿಗೆ ಚಿರಋಣಿ ಎಂದ ಕಿರಣ್ ರಾಜ್..!
Raani Film Teaser : ಕಿರುತೆರೆಯ ಜನಪ್ರಿಯ ನಟ ಕಿರಣ್ ರಾಜ್ ಈಗ ಹಿರಿತೆರೆಯಲ್ಲೂ ಬೇಡಿಕೆ ನಟ. ಪ್ರಸ್ತುತ ಕಿರಣ್ ರಾಜ್ ಅಭಿನಯದ ಟೀಸರ್ ಬಿಡುಗಡೆಯಾಗಿದೆ. ಕಿರಣ್ ರಾಜ್ ಹುಟ್ಟುಹಬ್ಬದಂದು ಬಿಡುಗಡೆಯಾಗಿರುವ ಈ ಟೀಸರ್ ಸಾಕಷ್ಟು ವೀಕ್ಷಣೆಯಾಗಿ, ನೋಡುಗರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.
Raani : ಮಾಗಡಿ ರಸ್ತೆಯ ವಿಕ್ಟರಿ ಸಿನಿಮಾದಲ್ಲಿ ಅದ್ದೂರಿಯಾಗಿ ಟೀಸರ್ ಬಿಡುಗಡೆ ಸಮಾರಂಭ ಹಾಗೂ ಕಿರಣ್ ರಾಜ್ ಹುಟ್ಟುಹಬ್ಬ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು. ಅಭಿಮಾನಿಗಳ ಪ್ರೀತಿಗೆ ಮನ ತುಂಬಿ ಬಂದಿದೆ ಎಂದು ಮಾತು ಪ್ರಾರಂಭಿಸಿದ ಕಿರಣ್ ರಾಜ್, ನಿಮ್ಮೆಲ್ಲರ ಅಭಿಮಾನಕ್ಕೆ ನಾನು ಚಿರ ಋಣಿ. "ರಾನಿ" ಚಿತ್ರ ಅದ್ದೂರಿಯಾಗಿ ಮೂಡಿಬಂದಿದೆ.
ಗುರುತೇಜ್ ಶೆಟ್ಟಿ ವಿಭಿನ್ನ ಕಥೆ ಮಾಡಿದ್ದಾರೆ. ನಿರ್ಮಾಪಕರು ಯಾವುದೇ ಕೊರತೆ ಇಲ್ಲದೆ ನಿರ್ಮಾಣ ಮಾಡಿದ್ದಾರೆ. ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ತುಂಬಾ ಚೆನ್ನಾಗಿದೆ ಎಂದರು. ನಾನು ಚಿತ್ರರಂಗದಿಂದ ದೂರ ಉಳಿದಿದ್ದ ಸಮಯದಲ್ಲಿ ಮಿತ್ರ ಗಿರೀಶ್ ಹೆಗಡೆ, ನಿರ್ಮಾಪಕ ಉಮೇಶ್ ಹೆಗಡೆ ಅವರನ್ನು ಪರಿಚಯಿಸಿದರು. ಉಮೇಶ್ ಹೆಗಡೆ ಹಾಗೂ ಚಂದ್ರಕಾಂತ್ ಪೂಜಾರಿ ಅವರು ಈ ಚಿತ್ರದ ಕಥೆ ಕೇಳಿ ನಿರ್ಮಾಣಕ್ಕೆ ಮುಂದಾದರು.
ಇದನ್ನೂ ಓದಿ-D 50 : ಮೊಟ್ಟೆ ಲುಕ್‌ನಲ್ಲಿ ಶಾಕ್ ಕೊಟ್ಟ ಧನುಷ್..ಚಿತ್ರದ ಟೈಟಲ್ ಏನು..?
ನಾಯಕ ಕಿರಣ್ ರಾಜ್ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ಅವರು ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದಾರೆ. ನಟನೆಗಷ್ಟೇ ಸೀಮಿತವಾಗದೆ, ನನ್ನ ಜೊತೆ ಪ್ರತಿಯೊಂದು ಕೆಲಸದಲ್ಲೂ ಭಾಗಿಯಾಗಿದ್ದಾರೆ. ಮಣಿಕಾಂತ್ ಕದ್ರಿ ಚಿತ್ರಕ್ಕೆ ಸಂಗೀತ ನೀಡಿರುವುದಷ್ಟೇ ಅಲ್ಲದೇ, ಟೀಸರ್ ಗೆ ಧ್ವನಿ ಸಹ ನೀಡಿದ್ದಾರೆ. ರಾಘವೇಂದ್ರ ಬಿ ಕೋಲಾರ್ ಛಾಯಾಗ್ರಹಣ, ಸತೀಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ತಿಳಿಸಿದರು.
ನಿರ್ಮಾಣದ ಬಗ್ಗೆ ಚಂದ್ರಕಾಂತ್ ಪೂಜಾರಿ - ಉಮೇಶ್ ಹೆಗಡೆ, ಹಾಡುಗಳ ಬಗ್ಗೆ ಮಣಿಕಾಂತ್ ಕದ್ರಿ ಹಾಗೂ ತಮ್ಮ ಪಾತ್ರದ ಬಗ್ಗೆ ನಾಯಕಿಯರಾದ ಸಮೀಕ್ಷ, ಅಪೂರ್ವ, ರಾಧ್ಯ ಮಾತನಾಡಿದರು. ಛಾಯಾಗ್ರಾಹಕ ರಾಘವೇಂದ್ರ ಬಿ ಕೋಲಾರ್ ಸೇರಿದಂತೆ ಅನೇಕ ತಂತ್ರಜ್ಞರು ಹಾಗೂ ಕಲಾವಿದರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ-ʼಹಿಡನ್ ಡ್ರ್ಯಾಗನ್ʼ, ʼಮುಲಾನ್ʼ ಖ್ಯಾತಿಯ ಗಾಯಕಿ, ನಟಿ ಕೊಕೊ ಲೀ ಆತ್ಮಹತ್ಯೆ..!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.