ಅಶ್ಲೀಲ ಫೋಟೋಶೂಟ್‌ ತಂದಿತಾ ಸಂಕಷ್ಟ? ರಣವೀರ್‌ ಸಿಂಗ್‌ ವಿರುದ್ಧ ದೂರು!

ಸಾಮಾಜಿಕ ಮಾಧ್ಯಮದಲ್ಲಿ ತನ್ನ ನಗ್ನ ಛಾಯಾಚಿತ್ರಗಳ ಮೂಲಕ 'ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿರುವ' ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸೋಮವಾರ (ಜುಲೈ 26) ಮುಂಬೈ ಪೊಲೀಸರಿಗೆ ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

Written by - Chetana Devarmani | Last Updated : Jul 26, 2022, 12:39 PM IST
  • ಅಶ್ಲೀಲ ಫೋಟೋಶೂಟ್‌ ತಂದಿತಾ ಸಂಕಷ್ಟ?
  • ರಣವೀರ್ ಸಿಂಗ್ ಅವರ ಇತ್ತೀಚಿನ ಫೋಟೋಶೂಟ್‌
  • ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ದೂರು
ಅಶ್ಲೀಲ ಫೋಟೋಶೂಟ್‌ ತಂದಿತಾ ಸಂಕಷ್ಟ? ರಣವೀರ್‌ ಸಿಂಗ್‌ ವಿರುದ್ಧ ದೂರು! title=
ರಣವೀರ್‌ ಸಿಂಗ್‌

ಮುಂಬೈ: ಸಾಮಾಜಿಕ ಮಾಧ್ಯಮದಲ್ಲಿ ತನ್ನ ನಗ್ನ ಛಾಯಾಚಿತ್ರಗಳ ಮೂಲಕ 'ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿರುವ' ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸೋಮವಾರ (ಜುಲೈ 26) ಮುಂಬೈ ಪೊಲೀಸರಿಗೆ ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂರ್ವ ಮುಂಬೈ ಉಪನಗರ ಮೂಲದ ಸರ್ಕಾರೇತರ ಸಂಸ್ಥೆಯ (ಎನ್‌ಜಿಒ) ಪದಾಧಿಕಾರಿಗಳು ಮತ್ತು ಮಹಿಳಾ ವಕೀಲರು ಚೆಂಬೂರ್ ಪೊಲೀಸ್ ಠಾಣೆಯಲ್ಲಿ ದೂರು ಅರ್ಜಿಗಳನ್ನು ಪ್ರತ್ಯೇಕವಾಗಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Vikrant Rona: ವಿಕ್ರಾಂತ್ ರೋಣ ಚಿತ್ರದ ಬಗ್ಗೆ ಅಪಪ್ರಚಾರ!? ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ

ರಣವೀರ್‌ ಸಿಂಗ್‌ ಅವರ ಈ ಫೋಟೋಗಳು ಮಹಿಳೆಯರ ಭಾವನೆಗಳನ್ನು ಘಾಸಿಗೊಳಿಸಿವೆ. ತನ್ನ ಛಾಯಾಚಿತ್ರಗಳ ಮೂಲಕ ಅವರ ನಮ್ರತೆಯನ್ನು ಅವಮಾನಿಸಿದ್ದಾರೆ ಎಂದು ಹೇಳಿದರು ಎಂದು ಅಧಿಕಾರಿ ತಿಳಿಸಿದ್ದಾರೆ. ನಟನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು. ವಕೀಲರು, ಮಾಜಿ ಪತ್ರಕರ್ತರು ಸಲ್ಲಿಸಿದ ಅರ್ಜಿಯಲ್ಲಿ ರಣವೀರ್ ವಿರುದ್ಧ ಮಹಿಳೆಯ ನಮ್ರತೆಗೆ ದೌರ್ಜನ್ಯ ಎಸಗುವ ಉದ್ದೇಶದ ಆರೋಪದ ಮೇಲೆ ಮೊಕದ್ದಮೆ ಹೂಡುವಂತೆ ಒತ್ತಾಯಿಸಲಾಗಿದೆ.

"ನಾವು ಸೋಮವಾರ ಈ ವಿಷಯದಲ್ಲಿ ಎನ್‌ಜಿಒಗೆ ಸಂಬಂಧಿಸಿದ ವ್ಯಕ್ತಿ ಮತ್ತು ಮಹಿಳಾ ವಕೀಲರಿಂದ ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ನಾವು ವಿಚಾರಣೆ ನಡೆಸುತ್ತಿದ್ದೇವೆ" ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ: Vikrant Rona: ವಿಕ್ರಾಂತ್‌ ರೋಣ ಮುಂಗಡ ಟಿಕೆಟ್‌ ಬುಕಿಂಗ್‌ಗಾಗಿ ಕಾಯ್ತಿದ್ದೀರಾ? ಇಲ್ಲಿದೆ ಮಹತ್ವದ ಅಪ್‌ಡೇಟ್‌

ರಣವೀರ್ ಸಿಂಗ್ ಅವರ ಇತ್ತೀಚಿನ ಫೋಟೋಶೂಟ್‌ ಬಗ್ಗೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಣವೀರ್ ಸಿಂಗ್ ಅವರ ಮುಂದಿನ ಸಿನಿಮಾ ರೋಹಿತ್ ಶೆಟ್ಟಿ ನಿರ್ದೇಶನದ 'ಸರ್ಕಸ್' ನಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಪೂಜಾ ಹೆಗ್ಡೆ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಚಿತ್ರವು 2022 ರ ಕ್ರಿಸ್‌ಮಸ್ ವೇಳೆಗೆ ಬಿಡುಗಡೆಗೆ ಸಿದ್ಧವಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News