ಬರ್ಖಾ ದತ್ ಅವರ ಸಂದರ್ಶನದಲ್ಲಿ ತಾನು ಕೊಡವ ಸಮುದಾಯದಿಂದ ಸಿನಿಮಾ ಇಂಡಸ್ಟ್ರಿಗೆ ಪ್ರವೇಶಿಸಿದ ಮೊದಲ ಮಹಿಳೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಈಗ ಎಲ್ಲೆಡೆ ವೈರಲ್ ಆಗುತ್ತಿದ್ದು, ನಟಿಗೆ ತಮ್ಮದೇ ಸಮುದಾಯದ ಇತಿಹಾಸದ ಬಗ್ಗೆ ತಿಳಿದಿಲ್ಲವೇನು? ಎಂಬ ಟೀಕೆ ವ್ಯಕ್ತವಾಗುತ್ತಿದೆ.
)
ಸ್ಯಾಂಡಲ್ವುಡ್ಗೆ ಪ್ರವೇಶಿಸಿದಾಗಿನಿಂದ ಯಶಸ್ಸಿನ ಪ್ರಯಾಣದಲ್ಲೇ ಇರುವ ನಟಿ ರಶ್ಮಿಕಾ ಮಂದಣ್ಣ, ಈಗ ತಮ್ಮದೇ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆಯಿಂದ ಮತ್ತೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಸ್ವಲ್ಪ ಸಮಯದಿಂದ ವಿವಾದಗಳಿಂದ ದೂರವಿದ್ದ ರಶ್ಮಿಕಾ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಬರ್ಖಾ ದತ್ ಅವರ ಸಂದರ್ಶನದಲ್ಲಿ ತಾನು ಕೊಡವ ಸಮುದಾಯದಿಂದ ಸಿನಿಮಾ ಇಂಡಸ್ಟ್ರಿಗೆ ಪ್ರವೇಶಿಸಿದ ಮೊದಲ ಮಹಿಳೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಈಗ ಎಲ್ಲೆಡೆ ವೈರಲ್ ಆಗುತ್ತಿದ್ದು, ನಟಿಗೆ ತಮ್ಮದೇ ಸಮುದಾಯದ ಇತಿಹಾಸದ ಬಗ್ಗೆ ತಿಳಿದಿಲ್ಲವೇನು? ಎಂಬ ಟೀಕೆ ವ್ಯಕ್ತವಾಗುತ್ತಿದೆ.
ಪ್ರಸಿದ್ಧ ನಟಿ ಪ್ರೇಮಾ, ನಿಧಿ ಸುಬ್ಬಯ್ಯ, ಹರ್ಷಿಕಾ ಪೂಣಚ್ಚ, ಶುಭ್ರ ಅಯ್ಯಪ್ಪ ಸೇರಿದಂತೆ ಅನೇಕ ಕೊಡವ ವ್ಯಕ್ತಿಗಳು ಕನ್ನಡ, ತಮಿಳು, ತೆಲುಗು ಮತ್ತು ಭೋಜ್ಪುರಿ ಚಲನಚಿತ್ರಗಳಲ್ಲಿ ತಮ್ಮನ್ನು ತಾವು ಯಶಸ್ವಿಯಾಗಿ ಸ್ಥಾಪಿಸಿಕೊಂಡಿದ್ದಾರೆ. ಹೀಗಿರುವಾ ಈ ಎಲ್ಲಾ ಹೆಸರುಗಳು ಮರೆತುಹೋಗಿವೆಯಾ? ಎಂಬುದು ನೆಟ್ಟಿಗರ ಪ್ರಶ್ನೆ. ಅಥವಾ ಅವರೆಲ್ಲರೂ ಕೊಡವರಲ್ಲವೇ? ಎಂದು ಜನರು ಪ್ರಶ್ನಿಸುತ್ತಿದ್ದಾರೆ.
ಇಷ್ಟೆಲ್ಲಾ ಯಶಸ್ಸು ಸಾಧಿಸುತ್ತಿರುವ ರಶ್ಮಿಕಾ ಮಂದಣ್ಣ, ಮಾತಿನಲ್ಲಿ ಎಡವಿರುವುದನ್ನು ಅನೇಕ ವೇದಿಕೆಗಳಲ್ಲಿ ಗಮನಿಸಿರಬಹುದು. ಇದು ಅವರ ಅಭಿಮಾನಿಗಳಿಗೂ ಕೆಲವೊಮ್ಮೆ ಅಸಮಾಧಾನ ತಂದಿದೆ. ಏನೇ ಆದರೂ ರಶ್ಮಿಕಾ ನೀಡಿರುವ ಈ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಟೀಕೆಗೆ ಗುರಿಯಾಗಿದೆ.
ಇನ್ನು ಕೊಡವ ಸಮಾಜದ ಮೊದಲ ನಟಿ ಪ್ರೇಮಾ. 1990 ಮತ್ತು 2000 ರ ದಶಕದ ಆರಂಭದಲ್ಲಿಯೇ ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಮುಖ ಮುಖವಾಗಿದ್ದ ಈಕೆ ಇಂದಿಗೂ ಸರಳತೆ, ಸೌಂದರ್ಯದಿಂದ ಎಲ್ಲರ ಮನೆಮಾತಾಗಿದ್ದಾರೆ. ರಶ್ಮಿಕಾ ಮಂದಣ್ಣ ನೀಡಿರುವ ಹೇಳಿಕೆಯಂತೆ, ಅವರು ಮೊದಲಿಗರಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.