Ranbeer Kapoor Rashmika Mandanna : ಬಾಲಿವುಡ್ ಸ್ಟಾರ್ ಹೀರೋ ರಣಬೀರ್ ಕಪೂರ್ ಅವರು ಅರ್ಜುನ್ ರೆಡ್ಡಿ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಅನಿಮಲ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣಾ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಭದ್ರಕಾಳಿ ಪಿಕ್ಚರ್ಸ್ ಮತ್ತು ಟಿ ಸೀರೀಸ್ ಬ್ಯಾನರ್ ಅಡಿಯಲ್ಲಿ ಭೂಷಣ್ ಕುಮಾರ್ ಮತ್ತು ಪ್ರಣಯ್ ರೆಡ್ಡಿ ವಂಗ ಜಂಟಿಯಾಗಿ ನಿರ್ಮಿಸಿದ್ದಾರೆ. ಈಗಾಗಲೇ ಈ ಸಿನಿಮಾದಿಂದ ಬಿಡುಗಡೆಯಾಗಿರುವ ಪೋಸ್ಟರ್ ಹಾಗೂ ಟೀಸರ್ ಗಳು ಸಿನಿಮಾದ ನಿರೀಕ್ಷೆಯನ್ನು ನೆಕ್ಸ್ಟ್‌ ಲೆವೆಲ್ ಗೆ ಕೊಂಡೊಯ್ದಿವೆ. ಚಿತ್ರವು ಡಿಸೆಂಬರ್ 01 ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅನಿರುದ್ಧ್ ಜತಕರ್ ಅಭಿನಯದ "chef ಚಿದಂಬರ" ಚಿತ್ರದ ಚಿತ್ರೀಕರಣ ಮುಕ್ತಾಯ! 


ತಯಾರಕರು ಇತ್ತೀಚೆಗೆ ಈ ಚಿತ್ರದ ಮೊದಲ ಸಿಂಗಲ್ ಅಪ್‌ಡೇಟ್ ಅನ್ನು ಪ್ರಕಟಿಸಿದ್ದಾರೆ. ಹುಡುಗಿಯ ಕುರಿತಾದ ಸುಮಧುರ ಹಾಡನ್ನು ಬುಧವಾರ ಬಿಡುಗಡೆ ಮಾಡಲಿದ್ದೇವೆ ಎಂದು ಚಿತ್ರತಂಡ ಪ್ರಕಟಿಸಿದೆ. ಈ ನಿಟ್ಟಿನಲ್ಲಿ ವಿಶೇಷ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ಖಾಸಗಿ ಜೆಟ್‌ನಲ್ಲಿ ರಣಬೀರ್ ಮತ್ತು ರಶ್ಮಿಕಾ ಲಿಪ್ ಲಾಕ್ ಮಾಡುತ್ತಿರುವ ಫೋಟೋವನ್ನು ತಯಾರಕರು ಬಿಡುಗಡೆ ಮಾಡಿದ್ದಾರೆ. 


 


ಭಗವಾನ್‌ ರಾಮನ ಪಾತ್ರಕ್ಕಾಗಿ ಮಾಂಸ ಮತ್ತು ಮದ್ಯ ತ್ಯಜಿಸಿದ ಬಾಲಿವುಡ್‌ ಸ್ಟಾರ್‌ ನಟ..! 


ಇದೀಗ ರಶ್ಮಿಕಾ ಮಂದಣ್ಣ ಹಾಗೂ ರಣಬೀರ್‌ ಕಪೂರ್‌ ಲಿಪ್‌ ಲಾಕ್‌ ಫೋಟೋ ಎಲ್ಲೆಡೆ ವೈರಲ್‌ ಆಗಿದೆ. ಇದು ವಿಜಯ್‌ ದೇವರಕೊಂಡ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇನ್ನೂ ಕೆಲವರು ವಿಜಯ್‌ ಕಾಲೆಳೆಯುತ್ತಿದ್ದಾರೆ. ಅಲ್ಲದೇ, ಹಿಂದೆ ವಿಜಯ್‌ ದೇವರಕೊಂಡ ಜೊತೆ ಲಿಪ್ ಲಾಕ್‌ ಮಾಡಿ ರಶ್ಮಿಕಾ ಸುದ್ದಿಯಾಗಿದ್ದರು. ಇದೀಗ ಮತ್ತೊಮ್ಮೆ ಈ ಹಾಟ್‌ ಪೋಸ್‌ ನಿಂದ ವೈರಲ್‌ ಆಗುತ್ತಿದ್ದಾರೆ.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.